ಕಲಬುರಗಿ: ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಸಮಿತಿಯ ವತಿಯಿಂದ ನಡೆದಾಡುವ ದೇವರು ಪರಮ ಪೂಜ್ಯ ಶ್ರೀ ಶಿವಕುಮಾರ ಮಹಾಸ್ವಾಮೀಜಿ ಅವರ ಎರಡನೇ ಪುಣ್ಯಸ್ಮರಣೆಯನ್ನು ನಗರದ ವೇದಿಕೆಯ ಕಚೇರಿಯಲ್ಲಿ ಆಚರಿಸಲಾಯಿತು.
ನಂತರ ದಾಸೋಹ ದಿನವನ್ನಾಗಿ ಅಧಿಕೃತ ಘೋಷಣೆ ಮಾಡಿದ ಮುಖ್ಯಮಂತ್ರಿಗಳಾದ ಬಿಎಸ್ವೈ ಅವರಿಗೆ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಅಭಿನಂದನೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಯುವ ವೇದಿಕೆ ಜಿಲ್ಲಾ ಅಧ್ಯಕ್ಷ ದಯಾನಂದ ಪಾಟೀಲ್, ರಾಜ್ಯ ಸಮಿತಿಯ ಶ್ರೀಧರ್ ನಾಗನಹಳ್ಳಿ, ಉಪಾಧ್ಯಕ್ಷ ಕಲ್ಯಾಣರಾವ ಪಾಟೀಲ್ ಕಣ್ಣಿ, ಜಿಲ್ಲಾ ಸಹ ಸಂಘಟನಾ ಕಾರ್ಯದರ್ಶಿ ಆನಂದ ಕನಸೂರ, ಜಿಲ್ಲಾ ಸಂಚಾಲಕ ಸತೀಶ ಕುಮಾರ ಮಾಹುರ, ಗುರುರಾಜ್ ಸುಂಟನೂರ ಇದ್ದರು.