ಕಲಬುರಗಿ: ಡಾ. ಬಿ.ಆರ್. ಅಂಬೇಡ್ಕರ ಅಭಿವೃದ್ಧಿ ನಿಗಮದಿಂದ 2018-19ನೇ ಸಾಲಿಗೆ ವಿಶೇಷ ಕೇಂದ್ರೀಯ ನೆರವಿನಿಂದ ಕೌಶಲ್ಯ ತರಬೇತಿ ಸಂಬಂಧ ಜಿಲ್ಲೆಯ ಪರಿಶಿಷ್ಟ ಜಾತಿಯ ನಿರುದ್ಯೋಗಿ ಯುವತಿ-ಯುವಕರಿಗೆ ಟಿವಿ ಜರ್ನಲಿಸಂ ಹಾಗೂ ಕ್ಯಾಮರಾಮೆನ್ ತರಬೇತಿ ನೀಡಲಾಗುತ್ತಿದೆ.
ಇದಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಎಂದು ಕಲಬುರಗಿಯ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕರು ತಿಳಿಸಿದ್ದಾರೆ.
ಮಂಡ್ಯದ ಮೆ. ಅನನ್ಯ ಕ್ರಿಯೇಷನ್ಸ್ದಿಂದ ಜಿಲ್ಲೆಯಲ್ಲಿ 3 ತಿಂಗಳ ಅವಧಿಗೆ ತರಬೇತಿ ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲೆಗಳೊಂದಿಗೆ ಕಲಬುರಗಿ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಯಲ್ಲಿ ಇದೇ ಜನವರಿ 31 ರೊಳಗಾಗಿ ಅರ್ಜಿ ಸಲ್ಲಿಸಬೇಕು. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅವರು ತಿಳಿಸಿದ್ದಾರೆ.