Tuesday, July 16, 2024
ಮನೆಬಿಸಿ ಬಿಸಿ ಸುದ್ದಿಸಮಾಜದ ಅಂಕು ಡೊಂಕುಗಳನ್ನು ನೇರ ನಡೆನುಡಿಗಳ ಮೂಲಕ ವಚನ ರೂಪ ನೀಡಿದವರು ಚೌಡಯ್ಯನವರು-ಇಂಜನಗೇರಿ

ಸಮಾಜದ ಅಂಕು ಡೊಂಕುಗಳನ್ನು ನೇರ ನಡೆನುಡಿಗಳ ಮೂಲಕ ವಚನ ರೂಪ ನೀಡಿದವರು ಚೌಡಯ್ಯನವರು-ಇಂಜನಗೇರಿ

ಶಹಾಬಾದ: ತನಗೆ ತೋಚಿದ್ದನ್ನು ತಾನು ಕಂಡದ್ದನ್ನು ಅಂದಿನ ಸಮಾಜದ ಅಂಕು ಡೊಂಕುಗಳನ್ನು ತನ್ನ ನೇರ ನಡೆನುಡಿಗಳಿಗೆ ವಚನ ರೂಪ ನೀಡಿದ ಅದರಂತೆ ಬದುಕಿ ಇತರರಿಗೆ ಮಾರ್ಗದರ್ಶನ ತೋರಿದ ನಿಜಶರಣ ಅಂಬಿಗರ ಚೌಡಯ್ಯ ಒಬ್ಬ ಆದರ್ಶ ಮಾನವ ಎಂದು ನಗರಸಭೆ ವ್ಯವಸ್ಥಾಪಕ ಶಂಕರ ಇಂಜನಗೇರಿ ಹೇಳಿದರು.

ಅವರು ಗುರುವಾರ ನಗರಸಭೆಯಲ್ಲಿ ಆಯೋಜಿಸಲಾದ ಅಂಬಿಗರ ಚೌಡಯ್ಯ ಜಯಂತಿ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ಕೋಲಿ ಸಮಾಜದ ಮುಖಂಡ ನಿಂಗಣ್ಣ ಹುಳಗೋಳಕರ್ ಮಾತನಾಡಿ, ಸ್ವಂತಿಕೆಯಿಂದ ಯೋಚಿಸಿ ಸ್ವಾಭಿಮಾನದ ಬದುಕನ್ನು ಬದುಕಬೇಕೆಂಬ ಅಂಶವನ್ನು ಅಂಬಿಗೆ ಚೌಡಯ್ಯ ತನ್ನ ಸರಳ ಸುಲಲಿತ ವಚನಗಳಲ್ಲಿ ತಿಳಿಸಿದ್ದಾರೆ. ಜಾತೀಯತೆಯನ್ನು ಮೀರಿದ ವಸ್ತು ನಿಷ್ಠತೆ, ಸತ್ಯ ನಿಷ್ಠತೆ ಬದುಕು, ನಿಜವಾದ ಬದುಕು ಎಂಬುದಾಗಿ ಪ್ರತಿಪಾದಿಸಿದ ದಿಟ್ಟ ಮಾನವತವಾದಿ ಎಂದು ಹೇಳಿದರು.

ನಗರಸಭೆಯ ಅಧ್ಯಕ್ಷೆ ಅಂಜಲಿ ಗಿರೀಶ ಕಂಬಾನೂರ, ಉಪಾಧ್ಯಕ್ಷೆ ಸಲೀಮಾಬೇಗಂ, ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ, ಪೌರಾಯುಕ್ತ ಡಾ.ಕೆ.ಗುರಲಿಂಗಪ್ಪ, ಕೋಲಿ ಸಮಾಜದ ಅಧ್ಯಕ್ಷ ಶಿವಕುಮಾರ ತಳವಾರ ನಗರಸಭೆ ಸದಸ್ಯರಾದ ಸೂರ್ಯಕಾಂತ ಕೋಬಾಳ, ಪಾರ್ವತಿ ಪವಾರ,ಮಲ್ಲಿಕಾರ್ಜುನ ವಾಲಿ, ಡಾ.ರಶೀದ್, ಶರಣು ಪಗಲಾಪೂರ, ಸಾಯಿಬಣ್ಣ ನಾಟೇಕಾರ, ಶಿವಕುಮಾರ ನಾಟೇಕಾರ, ಕಂದಾಯ ಅಧಿಕಾರಿ ಸುನೀಲಕುಮಾರ ವೀರಶೆಟ್ಟಿ, ಆರೋಗ್ಯ ನಿರೀಕ್ಷಕ ಶಿವರಾಜಕುಮಾರ ಜೆಟ್ಟೂರ್, ರಾಜೇಶ, ಶರಣು, ಹುಣೇಶ, ಅನೀಲ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

RELATED ARTICLES

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here

- Advertisment -

Most Popular