ಬಿಸಿ ಬಿಸಿ ಸುದ್ದಿ

ಸಾಮಾಜಿಕ ಸಮಾನತೆಗಾಗಿ ವಚನಗಳ ಮೂಲಕ ಜಾಗೃತಿ ಮೂಡಿಸಿದವರು ಅಂಬಿಗೆ ಚೌಡಯ್ಯನವರು-ನಾಟೇಕಾರ

ಶಹಾಬಾದ:ಸಾಮಾಜಿಕ ಸಮಾನತೆಗಾಗಿ ತಮ್ಮ ವಚನಗಳ ಮೂಲಕ ಸಮಾಜದಲ್ಲಿ ಜಾಗೃತಿ ಮೂಡಿಸಿದ ಮಹಾನ್ ಮಾನವತಾವಾದಿ ನಿಜಶರಣ ಅಂಬಿಗರ ಚೌಡಯ್ಯನವರಾಗಿದ್ದರು ಎಂದು ನಗರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ತಿಪ್ಪಣ್ಣ ನಾಟೇಕಾರ ಹೇಳಿದರು.

ಅವರು ಗುರುವಾರ ನಗರದ ಕನ್ನಡ ಭವನದಲ್ಲಿ ಕಸಾಪದಿಂದ ಆಯೋಜಿಸಲಾದ ಅಂಬಿಗರ ಚೌಡಯ್ಯನವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ನಿಜಶರಣ ಅಂಬಿಗರ ಚೌಡಯ್ಯನವರ ಮೌಲ್ಯಗಳು ಸಾರ್ವಕಾಲಿಕ. ಅವುಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜದಲ್ಲಿನ ಅಂಧಶ್ರದ್ಧೆ, ಶಿಕ್ಷಣದ ಕೊರತೆ, ಮೂಢನಂಬಿಕೆಗಳನ್ನು ನೀಗಿಸಬಹುದು. ೧೨ ನೇ ಶತಮಾನದಲ್ಲಿ ಸಮಾಜದಲ್ಲಿ ಡಾಂಬಿಕತನ, ಕಂದಾಚಾರ, ಮೂಢನಂಬಿಕೆಗಳನ್ನು ಹೋಗಲಾಡಿಸಿ ವಚನ ಸಾಹಿತ್ಯಗಳ ಮೂಲಕ ಅಂಬಿಗರ ಚೌಡಯ್ಯನವರು ಸಮಾಜ ಸುಧಾರಣೆಗೆ ಶ್ರಮಿಸಿದರು.

ಕಸಾಪ ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ ಮಾತನಾಡಿ, ಮಾನವನು ಲೌಕಿಕ ಜೀವನಕ್ಕಾಗಿ ನಡೆಸುವ ವೃತ್ತಿಗಳ ಬಗ್ಗೆ ಅಪಾರ ಗೌರವ ಹೊಂದಿದ್ದ ಚೌಡಯ್ಯನವರು ಬರೀ ನದಿ ದಾಟಿಸುವ ವೃತ್ತಿ ಅಷ್ಟೇ ನಡೆಸದೇ ತಮ್ಮ ವಚನಗಳಿಂದ ಜನರನ್ನು ಜಾಗೃತಿಗೊಳಿಸುವ ಮೂಲಕ ನಂಬಿದವರನ್ನು ಭವಸಾಗರ ದಾಟಿಸುವ ಶಕ್ತಿಯಾಗಿ ಸಾಧನೆ ಮಾಡಿದವರು. ಶರಣರ ವಚನ ಸಾಹಿತ್ಯಗಳ ಪುಸ್ತಕಗಳನ್ನು ಮಕ್ಕಳಿಗೆ ಓದಲು ಕೊಡಬೇಕು ಎಂದರು.

ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ ಮಾತನಾಡಿ, ಅಂಬಿಗರ ಚೌಡಯ್ಯ ಅವರ ವಚನಗಳು ಸಮಾಜದಲ್ಲಿ ಅಸಮಾನತೆ ಕುರಿತು ವಿವರಿಸಿ, ಸಮಾಜಕ್ಕೆ ಎಲ್ಲ ಕಾಲಕ್ಕೂ ದಾರಿದೀಪವಾಗಿದ್ದು, ಎಲ್ಲರ ಜನಮಾನಸದಲ್ಲಿ ನೆಲೆಸಿದ್ದಾರೆ. ಅವರು ಕೇವಲ ತುಂಬಿದ ಹೊಳೆಯಲ್ಲಿ ಮಾತ್ರ ಅಂಬಿಗನಲ್ಲ, ಭವಸಾಗರದಲ್ಲೂ ಹುಟ್ಟು ಹಾಕುವ ಕೌಶಲ್ಯವುಳ್ಳ ವ್ಯಕ್ತಿಯಾಗಿದ್ದರು.
ಮರಲಿಂಗ ಕಮರಡಗಿ, ಬಸವರಾಜ ಮಯೂರ,ಶಾಂತಪ್ಪ ಹಡಪದ, ಶಿವಕುಮಾರ ನಾಟೇಕಾರ,ಸಂತೋಷ ದೊಡ್ಡಮನಿ, ಗ್ರಂಥಾಲಯ ಮೇಲ್ವಿಚಾರಕಿ ಬಸಮ್ಮ ಪಾಟೀಲ ಸೇರಿದಂತೆ ಅನೇಕ ಜನರು ಹಾಜರಿದ್ದರು.

ಬಿಜೆಪಿ ಕಾರ್ಯಾಲಯ: ನಗರದ ಬಿಜೆಪಿ ಕಾರ್ಯಾಲಯದಲ್ಲಿ ಕಾಯಕಯೋಗಿ ಶ್ರೀ ಸಿದ್ದರಾಮೇಶ್ವರ ಮತ್ತು ನಿಜಶರಣ ಅಂಬಿಗರ ಚೌಡಯ್ಯ ನವರ ಜಯಂತಿಯನ್ನು ಆಚರಿಸಲಾಯಿತು.

ಮಂಡಲದ ಅಧ್ಯಕ್ಷ ಅಣವೀರ ಇಂಗಿನಶೆಟ್ಟಿ, ಭೀಮರಾವ ಸಾಳುಂಕೆ, ಅನೀಲಕುಮಾರ ಬೊರಗಾಂವಕರ, ನಾಗರಾಜ ಮೆಲಗಿರಿ, ನಿಂಗಣ್ಣ ಹುಳಗೊಳಕರ, ಅರುಣ ಪಟ್ಟಣಕರ, ಬಸವರಾಜ ಬಿರಾದಾರ, ಸಂಜಯ ವಿಟಕರ, ಅಮರ ಕೋರೆ, ರಾಜು ಕುಂಬಾರ, ಭೀಮಯ್ಯ ಗುತ್ತೆದಾರ, ಮಹಿಳಾಮೊರ್ಚಾದ ಜಯಶ್ರೀ ಸೂಡಿ, ಆರತಿ ಕುಡಿ, ಶಶಿಕಲಾ ಸಜ್ಜನ, ದೀನೇಶ ಗೌಳಿ, ಪಕ್ಷದ ಪದಾಧಿಕಾರಿಗಳು, ಮೊರ್ಚಾಗಳ ಪದಾಧಿಕಾರಿಗಳು, ಪ್ರಮುಖರು ನಗರಸಭೆ ಸದಸ್ಯರು, ಆಶ್ರಯ ಸಮಿತಿ ಸದಸ್ಯರು, ಕಾರ್ಯಕರ್ತರು ಉಪಸ್ಥಿತರಿದ್ದರು

emedia line

Recent Posts

ಆತ್ಮವಿಶ್ವಾಸವಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು : ಶಂಕರಗೌಡ

ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…

4 hours ago

ಬೌದ್ಧಿಕ ವಿಕಾಸದಿಂದ ತನ್ನತನದ ಶೋಧ

ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…

4 hours ago

ನಿಧನ ವಾರ್ತೆ; ಆನಂದಪ್ಪ ಉಮ್ಮನಗೋಳ್

ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…

6 hours ago

ಸಂಘಸಂಸ್ಥೆಗಳು ಸಮಾಜಕ್ಕೆ ನೀಡಿದ ಕೋಡುಗೆ ಅಪಾರ ಪಾಳಾಶ್ರೀ

ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…

6 hours ago

ಹೊಸ ಹೊಸ ಉದ್ಯೋಗ ಸೃಷ್ಟಿಸಲು HKE ಸಂಸ್ಥೆ ಕಾರ್ಯ ಶ್ಲಾಘನೀಯ

ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…

6 hours ago

ಸ್ವಾಭಿಮಾನದ ಬದುಕಿಗೆ ಸಂಗೀತ ಪೂರಕ

ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…

7 hours ago