ಬಿಸಿ ಬಿಸಿ ಸುದ್ದಿ

ವಿದ್ಯಾರ್ಥಿಗಳ ಸಮಸ್ಯೆಗಳು, ಸ್ಕಾಲರ್ಶಿಪ್ ಬಿಡುಗಡೆಗೆ ಆಗ್ರಹಿಸಿ ಎಐಡಿಎಸ್ಓ ಪ್ರತಿಭಟನೆ

ಕಲಬುರಗಿ: ಶಾಲಾ ಕಾಲೇಜುಗಳ ಶೈಕ್ಷಣಿಕ ವರ್ಷ ಈಗಾಗಲೇ ಪ್ರಾರಂಭವಾಗಿದ್ದು ಎಲ್ಲಾ ವರ್ಗಗಳ ವಿದ್ಯಾರ್ಥಿಳ ಶಿಷ್ಯವೇತನಕ್ಕಾಗಿ ಅರ್ಜಿಯನ್ನು ಇನ್ನೂ ಕರೆದಿಲ್ಲ. ರಾಜ್ಯದ ಸಹಸ್ರಾರು ವಿದ್ಯಾರ್ಥಿಳು ಕೊರೋನಾ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸಿದ್ದಾರೆ. ಅನೇಕ ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ಮತ್ತೆ ಕಾಲೇಜುಗಳಿಗೆ ಮರಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಷ್ಯ ವೇತನವು ಅತ್ಯಾವಶ್ಯಕವಾಗಿದ್ದು, ಎಲ್ಲಾ ಇಲಾಖೆಗಳ ಶಿಷ್ಯವೇತನವನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕೆಂದು ಎಐಡಿಎಸ್‌ಓ ವತಿಯಿಂದ ಪ್ರತಿಭಟನೆ ನಡೆಸಿ ಆಗ್ರಹಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ಗಳಾದ  ಈರಣ್ಣ ಇಸಬ ಮಾತನಾಡಿ, ಹಾಸ್ಟೇಲ್ ಪ್ರವೇಶಾತಿ ಅರ್ಜಿಗಳನ್ನು ಬಿಡುಗಡೆಮಾಡುವ ಪ್ರಕ್ರಿಯೆಯಲ್ಲಿ ವಿಳಂಬ: ವಿದ್ಯಾರ್ಥಿಳು ಕಾಲೇಜುಗಳಿಗೆ ಹಾಜರಾಗಬೇಕೆಂದು ನಿರ್ದೇಶನ ಬಂದಾಗಿಯೂ ಹಾಸ್ಟೇಲ್‌ಗಳನ್ನು ಇನ್ನೂ ಸಂಪೂರ್ಣವಾಗಿ ತೆರೆದಿಲ್ಲ. ಹಾಸ್ಟೇಲ್‌ಗಳಿಗೆ ಪ್ರವೇಶ ಪಡೆಯಲು ಅರ್ಜಿಗಳನ್ನು ಇನ್ನು ಬಿಡುಗಡೆಗೊಳಿಸಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಪರದಾಡುವ ಪರಿಸ್ಥಿತಿಯುಂಟಾಗಿದೆ. ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವ ವಿದ್ಯಾರ್ಥಿಗಳಿಗೆ ಪ್ರತಿದಿನವೂ ದೂರದ ಹಳ್ಳಿಗಳಿಂದ ಬಸ್ ಶುಲ್ಕ ಕೊಟ್ಟು ಪ್ರಯಾಣ ಮಾಡಿ ಬರುವುದು ಕಷ್ಟವಾಗುತ್ತಿದೆ. ಆದ್ದರಿಂದ ಸರ್ಕಾರವು ಎಲ್ಲ ಸರ್ಕಾರಿ ಹಾಸ್ಟೇಲುಗಳಿಗೆ ಕೂಡಲೇ ಅರ್ಜಿ ಆಹ್ವಾನಿಸಿ ಪ್ರವೇಶಾತಿ ನೀಡಿ ಮತ್ತು ಹಾಸ್ಟೇಲುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಒತ್ತಾಯಿಸಿದರು.

ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಬಸ್‌ಗಳು ಪೂರ್ಣ ಪ್ರಮಾಣದಲ್ಲಿ ಇರದಿರುವ ಹಾಗೂ ಅಗತ್ಯ ಸಮಯಕ್ಕೆ ಬರದಿರುವ ಕಾರಣ ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತಲುಪಲು ಕಷ್ಟಪಡುತ್ತಿದ್ದಾರೆ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಬಸ್ ಸೌಲಭ್ಯ ಒದಗಿಸಬೇಕೆಂದು ಮನವಿ ಮಾಡುತ್ತೇವೆ. ಅಲ್ಲದೇ ಜನೆವರಿ ೩೧ ರ ವರೆಗೆ ಸಾರಿಗೆ ಇಲಾಖೆಯು ಉಚಿತ ಪ್ರಯಾಣ ಮಾಡುವ ವ್ಯವಸ್ಥೆ ಮಾಡಿಕೊಟ್ಟಿತ್ತು. ಈಗ ಬಸ್ ಪಾಸ್ ವಿತರಿಸಲಾಗುತ್ತಿರುವ ಸಂದರ್ಭದಲ್ಲಿ ನವೆಂಬರ್ ೨೦೨೦ ನಿಂದ ಬಸ್ ಪಾಸ್ ನೀಡಲಾಗಿದೆ ಎಂದು ೧೦ ತಿಂಗಳಿಗೆ ಕೊಡಬೇಕಾದ ಶುಲ್ಕದಲ್ಲಿ ಕೇವಲ ೫ ರಿಂದ ೭ ತಿಂಗಳಿಗಾಗುವಷ್ಟು ಮಾತ್ರ ಬಸ್ ಪಾಸ್ ನೀಡುರುವುದು ಕೊರೋನಾ ಸಂದರ್ಭದ ಆರ್ಥಿಕ ಸಂಕಷ್ಟದ ನಡುವೆ ಗಾಯದ ಮೇಲೆ ಬರೆ ಎಳೆದಂತಿದೆ. ಈ ಕೂಡಲೇ ಸರ್ಕಾರ ಹಾಗೂ ಇಲಾಖೆ ಗಮನ ವಹಿಸಿ ಸಮಸ್ಯೆ ಪರಿಹರಿಸಬೇಕು. ಹಾಗೂ ಆನ್ ಲೈನ್ ಪ್ರಕ್ರಿಯೆಯಲ್ಲಿನ ಸಮಸ್ಯೆಗಳನ್ನು ಪರಿಹರಿಸಬೇಕೆಂದು ಆಗ್ರಹಿದರು.

ಕಾಲೇಜುಗಳು ಪ್ರಾರಂಭವಾಗಿ ವಿದ್ಯಾರ್ಥಿಳು ಕಾಲೇಜುಗಳಿಗೆ ಮರಳುತ್ತಿದ್ದು, ಕಾಲೇಜುಗಳಲ್ಲಿ ಪಾಠಗಳು ಇನ್ನೂ ಪ್ರಾರಂಭವಾಗುತ್ತಿಲ್ಲ. ಅವಶ್ಯಕ ಬೋಧಕರಿಲ್ಲದೇ ವಿದ್ಯಾರ್ಥಿಗಳು ಪಾಠಗಳಿಂದ ವಂಚಿತರಾಗುತ್ತಿದ್ದಾರೆ. ಪರೀಕ್ಷೆಯ ಭಯ ಕಾಡುತ್ತಿದ್ದು ವಿದ್ಯಾರ್ಥಿಗಳಿಗೆ ದಿಕ್ಕು ತೋಚದಂತಾಗಿದೆ. ಹೀಗಾಗಿ ಅವಶ್ಯಕ ಸಂಖ್ಯೆಯಲ್ಲಿ ಎಲ್ಲಾ ಕಾಲೇಜುಗಳಿಗೆ ಬೋಧಕರನ್ನು ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿದರು.

ಈ ಒಂದು ಹೋರಾಟದಲ್ಲಿ, ಜಿಲ್ಲಾ ಉಪಾ ಅಧ್ಯಕ್ಷರಾದ  ಸ್ನೇಹಾ ಕಟ್ಟಿಮನಿ, ಜಿಲ್ಲಾ ಸದ್ಯಸರದ ಶಿಲ್ಪ ಬಿ,ಕೆ ಗೊದಾವರಿ, ಪ್ರೀತಿ.ಡಿ, ಭೀಮಾಶಂಕರ್ ನಾಗರಾಜ. ನೂರಾರು ವಿದ್ಯಾಥಿಗಳು ಭಾಗವಹಿಸಿದರು.

emedialine

Recent Posts

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

13 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

23 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

23 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

23 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 days ago