ಆಮ್ ಆದ್ಮಿ ಪಕ್ಷ ಜಿಲ್ಲಾ ಮಟ್ಟದಲ್ಲೂ ದೆಹಲಿ ಮಾದರಿ ಅಭಿವೃದ್ಧಿಗೆ ಮುನ್ನುಡಿ: ಸಂಜಯ್ ಸಿಂಗ್

ಬೆಂಗಳೂರು: ಕರ್ನಾಟಕದಲ್ಲಿ ಮುಂಬರುವ ತಾಲ್ಲೂಕು, ಜಿಲ್ಲಾ ಪಂಚಾಯಿತಿ ಹಾಗೂ ಬಿಬಿಎಂಪಿ ಚುನಾವಣೆಗೆ ನಮ್ಮ ಪಕ್ಷವು ಸಂಘಟಿತವಾಗಿ ಕೆಲಸ ಮಾಡುತ್ತಿದ್ದು, ಈಗಾಗಲೇ ಅನೇಕ ಜಿಲ್ಲೆಗಳಲ್ಲಿ ಅಭ್ಯರ್ಥಿಗಳ ಆಯ್ಕೆ ನಡೆಸುತ್ತಿದೆ. ಸಾಕಷ್ಟು ಯುವ ಜನತೆ ಪಕ್ಷದ ಕಡೆಗೆ ಆಕರ್ಷಿತರಾಗುತ್ತಿದ್ದಾರೆ. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಪ್ ಬೆಂಬಲಿತ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಯಲ್ಲೂ ಗೆಲುವು ಸಾಧಿಸಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅರವಿಂದ್ ಕೇಜ್ರಿವಾಲ್ ಅವರ ದೆಹಲಿ ಮಾದರಿಗೆ ರಾಷ್ಟದ ಜನ ಮನಸೋತಿದ್ದಾರೆ. ಬಿಜೆಪಿ ಕಾಂಗ್ರೆಸ್ ಹೊರತಾಗಿ ಪರ್ಯಾಯ ರಾಜಕೀಯ ಪಕ್ಷವನ್ನು ಎದುರು ನೋಡುತ್ತಿದ್ದು ಇದಕ್ಕೆ ಉದಾಹರಣೆಯಾಗಿ ಇತ್ತೀಚೆಗೆ ರಾಷ್ಟ್ರದಾದ್ಯಂತ ಅನೇಕ ರಾಜ್ಯಗಳಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಿರುವುದು ಬದಲಾವಣೆಯ ಮುನ್ನುಡಿ ಎಂದರು.

ಇಡೀ ದೇಶದಲ್ಲಿ 2011-12 ರ ಹೊತ್ತಿಗೆ ಜನ ಲೋಕಪಾಲ್ ಕಾಯ್ದೆ ಜಾರಿಗೆ ಬರಬೇಕು ಎಂದು ಪ್ರಬಲ ಹೋರಾಟ ನಡೆಯುತ್ತಿತ್ತು. ಆಗ ನಾನು ಕರ್ನಾಟಕದಲ್ಲಿ ನಡೆಯುತ್ತಿದ್ದ ” ಭ್ರಷ್ಟಾಚಾರದ ವಿರುದ್ದ ಭಾರತ ಆಂದೋಲನದಲ್ಲಿ” ಭಾಗವಹಿಸಿದ್ದೆ ಆಗ ಕರ್ನಾಟಕದಲ್ಲಿ ಇದ್ದ ಲೋಕಾಯುಕ್ತ ಸಂಸ್ಥೆ,
ಸಂತೋಷ್ ಹೆಗಡೆಯವರ ದಕ್ಷತೆ ಕಂಡು ಕರ್ನಾಟಕದ ಬಗ್ಗೆ ಹೆಮ್ಮೆ ಪಟ್ಟಿದ್ದೆ. ಇಂತಹ ಮಾದರಿ ಸಂಸ್ಥೆ ರಾಷ್ಟ್ರ ಮಟ್ಟದಲ್ಲಿ ಬೇಕೆ ಬೇಕು ಎಂದು ಅನಿಸಿತ್ತು ಆದರೆ ಇಂದಿನ ಪರಿಸ್ಥಿತಿ ನೋಡಿದರೆ ನಿಜಕ್ಕೂ ಬೇಸರವಾಗುತ್ತದೆ. ಲೋಕಾಯುಕ್ತವನ್ನು ಹಾಳುಗೆಡವಿದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ನಡೆಯುತ್ತಿರುವ ಎಲ್ಲಾ ಭ್ರಷ್ಟಾಚಾರಗಳಿಗೆ ಮುನ್ನುಡಿ ಬರೆದರು. ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ಲೋಕಾಯುಕ್ತ ಮರಳಿ ತರುವುದಾಗಿ ಹೇಳಿದ್ದ ಯಡಿಯೂರಪ್ಪ ಅವರು ಈಗ ಲೋಕಾಯುಕ್ತವನ್ನೇ ಬಳಸಿಕೊಂಡು ತಮ್ಮ ಮೇಲಿದ್ದ ಭೂ ಹಗರಣವನ್ನೇ ಖುಲಾಸೆಗೊಳಿಸುತ್ತಿದ್ದಾರೆ ಎಂದರು.

ಯಡಿಯೂರಪ್ಪ ಅವರು ಲೋಕಾಯುಕ್ತವನ್ನು ದುರುಪಯೋಗ ಪಡಿಸಿಕೊಂಡರೂ ಕಿಂಚಿತ್ತೂ ಮಾತನಾಡದ ವಿರೋಧ ಪಕ್ಷಗಳು ತಮ್ಮ ಜವಾಬ್ದಾರಿ ಮರೆತಿವೆ. ಜಾತಿಗಳನ್ನು ಮುಂದಿಟ್ಟುಕೊಂಡು ಕೆಟ್ಟ ರಾಜಕಾರಣ ಮಾಡುತ್ತಿವೆ. ಇಂದು ಕರ್ನಾಟಕದ ಏಕೈಕ ವಿರೋಧ ಪಕ್ಷವಾಗಿ ಆಮ್ ಆದ್ಮಿ ಪಕ್ಷ ಮಾತ್ರ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಕೊರೋನಾ ಸಂಕಷ್ಟದ ಹೊತ್ತಿನಲ್ಲೂ ರಾಜ್ಯ ಬಿಜೆಪಿ ಸರ್ಕಾರ ವಿದ್ಯುತ್ ಬೆಲೆ, ಆಸ್ತಿ ತೆರಿಗೆ ಸೇರಿದಂತೆ ಎಲ್ಲಾ ಬೆಲೆಗಳನ್ನು ಹೆಚ್ಚಳ ಮಾಡಿ ಜನ ಸಾಮಾನ್ಯರನ್ನು ಹಿಂಡಿ ಹಿಪ್ಪೆ ಮಾಡುತ್ತಿದೆ.

ಬೆಂಗಳೂರನ್ನು ಕೊಳ್ಳೆ ಹೊಡೆಯುವ ಸಲುವಾಗಿ ಬಿಜೆಪಿ ಸರ್ಕಾರ ಬಿಬಿಎಂಪಿ ಚುನಾವಣೆ ಮುಂದೂಡಿದ್ದು, ತನಗೆ ಅನುಕೂಲವಾಗುವ ಹಾಗೇ ವಾರ್ಡ್ ವಿಂಗಡಣೆ ಮಾಡಿಕೊಳ್ಳುತ್ತಿದೆ‌.

ಬಿಬಿಎಂಪಿ ಚುನಾವಣೆಗೆ ಆಮ್ ಆದ್ಮಿ ಪಕ್ಷದಿಂದ ಪ್ರತಿ ವಿಧಾನಸಭಾ ಕ್ಷೇತ್ರ, ವಾರ್ಡ್ ಹಾಗೂ ಬೂತ್ ಮಟ್ಟದಲ್ಲೂ ಕಚೇರಿಗಳನ್ನು ತೆರೆದು ವೀಕ್ಷಕರನ್ನು ನೇಮಿಸಿಲಾಗಿದೆ. ಬೂತ್ ಮಟ್ಟದಲ್ಲಿ ಜನ ಸಭೆಗಳನ್ನು ನಡೆಸಲಾಗುತ್ತಿದ್ದು, ಜನರು ಆಮ್ ಆದ್ಮಿ ಪಕ್ಷದ ಬಗ್ಗೆ ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.

ವಿಧಾನಪರಿಷತ್ತಿನಲ್ಲಿ 79 ಎ,ಬಿ ಸೇರಿದಂತೆ ರೈತ ವಿರೋಧಿ ಕಾಯ್ದೆಗಳಿಗೆ ಬೆಂಬಲ ನೀಡಿದ ಜೆಡಿಎಸ್ ಪಕ್ಷದವರು ರೈತರ ಹೆಸರು, ಮಣ್ಣಿನ ಮಕ್ಕಳು ಎಂದು ಹೇಳಿಕೊಳ್ಳಲು ನಾಚಿಕೆ ಪಡಬೇಕು.

ಕಳೆದ ವರ್ಷ ಡಿಸೆಂಬರ್‌ 22 ಮತ್ತು 27 ರಂದು ನಡೆದ ವಿಚಾರಣೆ ವೇಳೆ ಹೈಕೋರ್ಟ್ ದೇವರ ಬೀಸನಹಳ್ಳಿ ಮತ್ತು ಬೆಳ್ಳಂದೂರು ಡಿನೋಟಿಫಿಕೇಶನ್ ಪ್ರಕರಣದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ನವರು ವಿಚಾರಣೆ ಎದುರಿಸಬೇಕೆಂದು ಆದೇಶ ನೀಡಿದ್ದರೂ ಸಹ ಲೋಕಾಯುಕ್ತ ಸಂಸ್ಥೆಯನ್ನೇ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಬಿ ರಿಪೋರ್ಟ್ ಹಾಕಿಸಿಕೊಂಡಿರುವುದು ನಿಜಕ್ಕೂ ಆಘಾತಕಾರಿ. ಕುಮಾರಸ್ವಾಮಿ ಅವರ ತಲೆಗೆ ಸುತ್ತಿಕೊಂಡಿರುವ ಮಠದಹಳ್ಳಿ ಡಿನೋಟಿಫಿಕೇಶನ್ ಪ್ರಕರಣ,ಜಂತಕಲ್ ಮೈನಿಂಗ್ ಹಗರಣ, ಸಿದ್ದರಾಮಯ್ಯ ಅವರು ತಮ್ಮ ಮೇಲಿರುವ ರೀಡೂ ಹಗರಣ,ಡಿ ಕೆ ಶಿವಕುಮಾರ್ ರವರ ಮೇಲಿರುವ ಬೆನ್ನಿಗಾನಹಳ್ಳಿ ಡಿನೋಟಿಫಿಕೇಷನ್ ಪ್ರಕರಣ ಸೇರಿದಂತೆ ಅನೇಕ ಪ್ರಕರಣಗಳನ್ನು ಮುಕ್ತಾಯಗೊಳಿಸಲು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಬಳಸಿಕೊಳ್ಳುತ್ತಿವೆ. ಇದೆಲ್ಲದರ ಪರಿಣಾಮ ಕರ್ನಾಟಕದಲ್ಲಿ ನಾಮಕಾವಸ್ಥೆಗೆ ಮಾತ್ರ ಬಿಜೆಪಿ ಅಧಿಕಾರ ನಡೆಸುತ್ತಿದ್ದು ರಾಜ್ಯ ಸರ್ಕಾರ ನಡೆಸುತ್ತಿರುವ ಎಲ್ಲಾ ಹಗರಣ, ಹಣ ಕಬಳಿಕೆ, ಜನದ್ರೋಹದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಎರಡೂ ಪಾಲುದಾರಿಕೆ ಹೊಂದಿವೆ. ಇಂದು ಕರ್ನಾಟಕದಲ್ಲಿ ಮೂರು ಪಕ್ಷಗಳು ಸೇರಿ ಹೊಂದಾಣಿಕೆಯಿಂದ ನಡೆಸುತ್ತಿರುವ ಭ್ರಷ್ಟಾಚಾರಿಗಳ ಸರ್ಕಾರ ಅಸ್ತಿತ್ವದಲ್ಲಿದೆ ಎಂದು ಆರೋಪಿಸಿದರು.

ಜೆಸಿಬಿ ಪಕ್ಷಗಳು ಸೇರಿ ಕರ್ನಾಟಕವನ್ನು ಹಾಳುಗೆಡವುತ್ತಿವೆ, ಜೆಸಿಬಿ ಸಾಕು ಕರ್ನಾಟಕದಲ್ಲಿ ಎಎಪಿ ಬೇಕು ಎಂದು ಘೋಷಿಸಿದರು.

emedialine

Recent Posts

ಕಲಬುರಗಿ; ರಾಜ್ಯ ತಳವಾರ ಮಹಾಸಭಾ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ

ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…

2 hours ago

ಕೈಗಾರಿಕೆ ಪ್ರದೇಶಗಳಿಗೆ ಭೇಟಿ ನೀಡಿ ಉದ್ಯಮಿಗಳ ಅಹವಾಲು ಆಲಿಸಿದ ಬಿ.ಫೌಜಿಯಾ ತರನ್ನುಮ್

ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…

2 hours ago

ಸಿಎಂ ರಾಜೀನಾಮೆ ಕೇಳುತ್ತಿರುವ ಬಿಜೆಪಿ -ಜೆಡಿಎಸ್‍ಗೆ ಯಾವುದೇ ನೈತಿಕತೆಯಿಲ್ಲ

ಶಹಾಬಾದ: ಕರ್ನಾಟಕದ ಬಹುಮತ ಸರಕಾರವನ್ನು ಬೀಳಿಸಲು ಇಲ್ಲಸಲ್ಲದ ಆರೋಪ ಮಾಡುವ ಮೂಲಕ ಸಿಎಂ ರಾಜೀನಾಮೆಗೆ ಒತ್ತಾಯ ಮಡುತ್ತಿರುವ ಬಿಜೆಪಿ ಹಾಗೂ…

2 hours ago

ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಲಿ

ಶಹಾಬಾದ:ಪ್ರತಿ ಮನೆಗೂ ನೀರು ದೊರಿಸಿಕೊಡುವ ಉದ್ದೇಶದಿಂದ ನಡೆಯುವ ಜೆಜೆಎಂ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕೆಂದು ಕಾಂಗ್ರೆಸ್ ಮುಖಂಡ ಮೃತ್ಯುಂಜಯ್ ಹಿರೇಮಠ ಹೇಳಿದರು.…

2 hours ago

ಅ.13, 14 ರಂದು ಧಮ್ಮ ಕ್ರಾಂತಿ ಉತ್ಸವ : ಪೂರ್ವಭಾವಿ ಸಭೆ

ಶಹಾಬಾದ :ನಗರದ ಬೌದ್ಧ ವಿಹಾರದಲ್ಲಿ ರವಿವಾರ ಹಮ್ಮಿಕೊಂಡ 68ನೇ ಧಮ್ಮಚಕ್ರ ಪ್ರವರ್ತನಾ ದಿನದ ಅಂಗವಾಗಿ ಕಲಬುರ್ಗಿಯಲ್ಲಿ ಅ.13 ಮತ್ತು 14…

2 hours ago

ನಮೋಶಿ ನೇತೃತ್ವದಲ್ಲಿ, ಕಲ್ಯಾಣ ಕರ್ನಾಟಕ ವಿಭಾಗದ ಪ್ರೌಢಶಾಲಾ ಶಿಕ್ಷಕರ ಸಭೆ

ಕಲಬುರಗಿ: ಈಶಾನ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರಾದ ಶಶಿಲ್ ನಮೋಶಿ ರವರ ನೇತೃತ್ವದಲ್ಲಿ ಹಾಗೂ ಶಾಲಾ ಶಿಕ್ಷಣ ಇಲಾಖೆಯ…

2 hours ago

Notice: ob_end_flush(): Failed to send buffer of zlib output compression (0) in /home3/emedixap/public_html/wp-includes/functions.php on line 5420