ಶಹಾಬಾದ:ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪುರಸಭೆಯ ಮುಖ್ಯಾಧಿಕಾರಿಯ ಮೇಲೆ ಹಲ್ಲೆ ಮಾಡಿದ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ಸರಕಾರಿ ನೌಕರಸ್ಥರಿಗೆ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿ ಶುಕ್ರವಾರ ನಗರಸಭೆಯ ಪೌರಾಯುಕ್ತರ ನೇತೃತ್ವದಲ್ಲಿ ನಗರಸಭೆಯ ಸಿಬ್ಬಂದಿ ವರ್ಗದವರು ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ನಗರಸಭೆಯ ಕಚೇರಿ ವ್ಯವಸ್ಥಾಪಕ ಶಂಕರ ಇಂಜನಗೇರಿ ಮಾತನಾಡಿ,ಚಿಂಚೋಳಿ ಪುರಸಭೆಯ ಮುಖ್ಯಾಧಿಕಾರಿ ಅಭಯಕುಮಾರ ದೈನಂದಿನ ಕಾರ್ಯನಿರ್ವಹಿಸುತ್ತಿರುವಾದ ಭೋಗಸ್ ಬಿಲ್ ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾನೆ.ಅದಕ್ಕೆ ಒಪ್ಪದಿದ್ದಾಗ ಅಭಯಕುಮಾರ ಮೇಲೆ ಪುರಸಭೆಯ ಸದಸ್ಯ ಆನಂದ ಟೈಗರ್ ಹಾಗೂ ಶಶಿಕುಮಾರ ಮೇತ್ರಿ ಅವರು ಪುರಸಭೆಯ ಕಾರ್ಯಾಲಯದ ಆವರಣದಲ್ಲಿ ಸರ್ಕಾರದ ಕೆಲಸಕ್ಕೆ ಅಡ್ಡಿಪಡಿಸಿದಲ್ಲದೇ ಅವರ ಮೇಲೆ ದೈಹಿಕ ಹಲ್ಲೆ ನಡೆಸಿದ್ದಾರೆ.ಈ ರೀತಿಯ ಹಲ್ಲೆಗಳು ಪದೇ ಪದೇ ನಡೆಯುತ್ತಿದೆ.ಆದ್ದರಿಂದ ಹಲ್ಲೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.ಅಲ್ಲದೇ ನೌಕರಸ್ಥರಿಗೆ ಸೂಕ್ತ ಭದ್ರತೆ ಒದಗಿಸಬೇಕೆಂದು ಆಗ್ರಹಿಸಿದರು.ನಂತರ ತಹಸೀಲ್ದಾರ ಸುರೇಶ ವರ್ಮಾ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ನಗರಸಭೆಯ ಎಇ ಶಾಂತರೆಡ್ಡಿ ದಂಡಗುಲಕರ್, ನಾರಾಯಣರೆಡ್ಡಿ, ಶಬಾನಾಬೇಗಂ, ಜೆಇಗಳಾದ ಮೌಲಾಲಿ, ಬಸವರಾಜ, ಮಮತಾ, ಆರೋಗ್ಯ ನಿರೀಕ್ಷಕ ಶರಣು, ಅನೀಲಕುಮಾರ,ಹಣಮಂತ ಪವಾರ, ಹುಣೇಶ, ಭೀಮಣ್ಣ, ಪ್ರಾಣೇಶ ಕುಲಕರ್ಣಿ, ಖಾಜಾ ಮೈನೊದ್ದಿನ್,ರವಿಕುಮಾರ ಸೇರಿದಂತೆ ಅನೇಕ ಜನರು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…