ಬಿಸಿ ಬಿಸಿ ಸುದ್ದಿ

ಶಾಲಾ ವಿದ್ಯಾರ್ಥಿ ವೇತನ ನೀಡಬೇಕೆಂದು ಆಗ್ರಹಿಸಿ ಎಐಡಿಎಸಓ ಪ್ರತಿಭಟನೆ

ಶಹಾಬಾದ:ಪ್ರಸಕ್ತ ಶೈಕ್ಷಣಿಕ ವರ್ಷದ ವಿದ್ಯಾರ್ಥಿ ವೇತನ ನೀಡಬೇಕು, ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಒತ್ತಾಯಿಸಿ ಶುಕ್ರವಾರ ನೆಹರು ವೃತ್ತದಲ್ಲಿ ಎಐಡಿಎಸ್‌ಓ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿದರು.

ಎಐಡಿಎಸ್‌ಓ ಶಹಾಬಾದ ಅಧ್ಯಕ್ಷರಾದ ತುಳಜರಾಮ.ಎನ್. ಕೆ ಶಾಲಾ ಕಾಲೇಜುಗಳ ಶೈಕ್ಷಣಿಕ ವರ್ಷ ಈಗಾಗಲೇ ಪ್ರಾರಂಭವಾಗಿದ್ದು ಎಲ್ಲಾ ವರ್ಗಗಳ ವಿದ್ಯಾರ್ಥಿಳ ಶಿಷ್ಯವೇತನಕ್ಕಾಗಿ ಅರ್ಜಿಯನ್ನು ಇನ್ನೂ ಕರೆದಿಲ್ಲ. ರಾಜ್ಯದ ಸಹಸ್ರಾರು ವಿದ್ಯಾರ್ಥಿಳು ಕೊರೋನಾ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸಿದ್ದಾರೆ. ಅನೇಕ ಸಮಸ್ಯೆಗಳ ನಡುವೆ ವಿದ್ಯಾರ್ಥಿಗಳು ಮತ್ತೆ ಕಾಲೇಜುಗಳಿಗೆ ಮರಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶಿಷ್ಯ ವೇತನವು ಅತ್ಯಾವಶ್ಯಕವಾಗಿದೆ. ಅಲ್ಲದೇ ಉಳಿದ ಎಲ್ಲಾ ಇಲಾಖೆಗಳ ಶಿಷ್ಯವೇತನವನ್ನು ಈ ಕೂಡಲೇ ಬಿಡುಗಡೆಗೊಳಿಸಬೇಕೆಂದು ಆಗ್ರಹಿಸಿದರಲ್ಲದೇ, ಎಲ್ಲಾ ಸರ್ಕಾರಿ ಹಾಸ್ಟೇಲುಗಳಿಗೆ ಕೂಡಲೇ ಅರ್ಜಿ ಆಹ್ವಾನಿಸಿ ಪ್ರವೇಶಾತಿ ನೀಡಬೇಕು.ಹಾಸ್ಟೇಲುಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು.ನಗರ ಮತ್ತು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು. ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಿ,ಕಾಲೇಜುಗಳಲ್ಲಿ ಅವಶ್ಯಕ ಬೋಧಕರನ್ನು ನೇಮಕಾತಿ ಮಾಡಬೇಕೆಂದು ಒತ್ತಾಯಿಸಿದರು.

ಎಐಡಿಎಸ್‌ಓ ಸದಸ್ಯ ಕಿರಣ್.ಜಿ.ಮಾನೆ, ಎಐಡಿಎಸ್‌ಓ ಉಪಾಧ್ಯಕ್ಷ ರಮೇಶ ದೇವಕರ್, ಸಾಕ್ಷಿ ಮಾನೆ, ಅಜಯ್, ಬಾಬು ಪವಾರ್, ಶ್ರೀಧರ, ರಂಗನಾಥ ಮಾನೆ, ಅಂಬ್ರೆಶ್, ಪ್ರಜ್ವಲ್,ಸೇರಿ ಹಲವಾರು ವಿದ್ಯಾರ್ಥಿಗಳು ಇದ್ದರು.

emedia line

Recent Posts

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

7 hours ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

7 hours ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

7 hours ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

24 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

1 day ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

1 day ago