ವಾಡಿ: ಶೈಕ್ಷಣಿಕ ವರ್ಷ ಪೂರ್ಣಗೊಳ್ಳುತ್ತಿದ್ದರೂ ಸರಕಾರ ನಗರ ಪ್ರದೇಶಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಬೇಡಿಕೆ ಈಡೇರಿಸುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಎಐಡಿಎಸ್‌ಒ ಕಾರ್ಯಕರ್ತರು ಶುಕ್ರವಾರ ಪುರಸಭೆ ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿಪತ್ರ ಸಲ್ಲಿಸಿದರು.
ಎಲ್ಲಾ ವಿದ್ಯಾರ್ಥಿಗಳ ಶಿಷ್ಯ ವೇತನ ಬಿಡುಗಡೆ ಮಾಡಬೇಕು. ವಸತಿನಿಲಯಗಳನ್ನು ತೆರೆಯಬೇಕು ಮತ್ತು ಅಗತ್ಯ ಸೌಲಭ್ಯಗಳನ್ನು ಒದಗಿಸಬೇಕು. ಗ್ರಾಮೀಣ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳಿಗಾಗಿ ಸಮರ್ಪಕ ಬಸ್ ಸೌಲಭ್ಯ ಒದಗಿಸಬೇಕು ಹಾಗೂ ಹೆಚ್ಚುವರಿ ಶುಲ್ಕ ಪಡೆಯುವುದನ್ನು ನಿಲ್ಲಿಸಬೇಕು. ಕಾಲೇಜುಗಳಲ್ಲಿ ಅಗತ್ಯವಿರುವ ಬೋಧಕರನ್ನು ನೇಮಿಸಿಕೊಳ್ಳಬೇಕು ಎಂದು ಆಗ್ರಹಿಸಿದರು.
ಎಐಡಿಎಸ್‌ಒ ಅಧ್ಯಕ್ಷ ಗೌತಮ ಪರತೂರಕರ, ಕಾರ್ಯದರ್ಶಿ ವೆಂಕಟೇಶ ದೇವದುರ್ಗಾ, ಗೋವಿಂದ ಯಾಳವಾರ, ದತ್ತು ಹುಡೇಕರ ಸೇರಿದಂತೆ ಮತ್ತಿತರರು ಪಾಲ್ಗೊಂಡಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…