ಸುರಪುರ: ಅಂಬಿಗರ ಚೌಡಯ್ಯ ನೇರ ನುಡಿಯ ನಿಷ್ಠುರ ವಚನಕಾರರಾಗಿದ್ದರು ಎಂದು ಸಗರನಾಡು ಸೇವಾ ಪ್ರತಿಷ್ಠಾನ ಅಧ್ಯಕ್ಷ ಪ್ರಕಾಶ ಅಂಗಡಿ ಕನ್ನೆಳ್ಳಿ ಹೇಳಿದರು.
ರಂಗಂಪೇಟೆಯ ಬಸವೇಶ್ವರ ಮಹಾವಿದ್ಯಾಲಯದಲ್ಲಿ ಆಯೋಜಿಸಿದ್ದ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿ ಅಂಬಿಗರ ಚೌಡಯ್ಯ ೧೨ನೇ ಶತಮಾನದಲ್ಲಿ ಜೀವಿಸಿದ್ದ ಶಿವಶರಣ ಹಾಗೂ ವಚನಕಾರರು. ಉಳಿದೆಲ್ಲ ವಚನಕಾರರಿಗಿಂತ ಭೀನ್ನ ಹಾಗೂ ವಿಶಿಷ್ಟ ವ್ಯಕ್ತಿತ್ವ ಇವರದು. ವೃತ್ತಿಯಿಂದ ಅಂಬಿಗರಾದರು ಅನುಭವ ಮಂಟಪದಲ್ಲಿ ಅನುಭಾವಿ ಶರಣರಾಗಿದ್ದರು.
ನೇರ ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದಿರುವುದುಗೋಚರಿಸುತ್ತದೆ. ಬಸವಣ್ಣನವರ ಅನುಭವ ಮಂಟಪದಲ್ಲಿ ಸಮಾನ ಭೂಮಿಕೆಯ ಸಮ್ಮೇಳನದಲ್ಲಿ ಸೇರಿಕೊಂಡು ತನ್ನ ಕಾಯಕ ಹಾಗು ವ್ಯಕ್ತಿನಾಮವಾದ ಅಂಬಿಗರ ಚೌಡಯ್ಯ ಎಂಬುದೇ ಇವರ ವಚನಗಳ ಅಂಕಿತವಾಗಿದೆ ಎಂದರು.
ಕಾರ್ಯಕ್ರಮದ ಆರಂಭದಲ್ಲಿ ಅಂಬಿಗರ ಚೌಡಯ್ಯನವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾಲಾರ್ಪಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಚಾರ್ಯ ವಿರೇಶ ಹಳಿಮನಿ, ಉಪನ್ಯಾಸಕರಾದ ಬಲಭಿಮ ಪಾಟೀಲ, ಶ್ರೀಕಾಂತ ರತ್ತಾಳ, ಲಕ್ಷ್ಮೀ ಪತ್ತಾರ, ವಿಜಯಕುಮಾರ ಅಂಗಡಿ, ಪ್ರವೀಣ ಜಕಾತಿ ಸೇರಿದಂತೆ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…