ಕಲಬುರಗಿ: ಜಿಲ್ಲೆಯ ಡೊಂಗರಗಾಂವದ ಮಾತೋಶ್ರೀ ಈರಮ್ಮ ವಡ್ಡನಕೇರಿ ಪ್ರತಿಷ್ಠಾನದ ವತಿಯಿಂದ ನೀಡುವ ನಾಲ್ಕನೇ ವರ್ಷದ 2019 ನೇ ಸಾಲಿನ ‘ಅವ್ವ’ ಪ್ರಶಸ್ತಿಗೆ ಆರು ಜನ ಸಾಧಕರಿಗೆ ಆಯ್ಕೆ ಮಾಡಲಾಗಿದೆ ಎಂದು ಎಂದು ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಶರಣಬಸಪ್ಪ ವಡ್ಡನಕೇರಿ ತಿಳಿಸಿದ್ದಾರೆ
ಕೋಲಾರದ ನ.ಗುರುಮೂರ್ತಿಯವರ ‘ಅರ್ಜಿ ಹಾಕಿ ಹುಟ್ಟಿದವರ ನಡುವೆ'(ಕವನಸಂಕಲನ) ಗೋಕಾಕದ ಶಕುಂತಲಾ ಹಿರೇಮಠ ರವರ ‘ರೆಕ್ಕೆ ಬಲಿತ ಹಕ್ಕಿ’ (ಕಥಾಸಂಕಲನ) ಹುಮನಾಬಾದಿನ ಡಾ. ಜಯದೇವಿ ಗಾಯಕವಾಡ್ ರವರ ‘ಹಾಯಿಕುಗಳು’ ಕೃತಿಗಳನ್ನು ಅವ್ವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಅದೇ ರೀತಿಯಾಗಿ ಡಾ. ಎಸ್. ಎಸ್. ಗುಬ್ಬಿ ವೈದ್ಯಕೀಯ ಸಾಹಿತ್ಯ, ಸುಬ್ಬರಾವ ಕುಲಕರ್ಣಿ ರವರ ರಂಗಭೂಮಿ ಮತ್ತು ಪ್ರೊ. ಶಂಕರಲಿಂಗ ಹೆಂಬಾಡಿಯವರ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ 2019 ನೇ ಸಾಲಿನ ‘ಅವ್ವ ಗೌರವ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದ್ದು, ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಜ. 26 ರಂದು ಅನ್ನಪೂರ್ಣ ಕ್ರಾಸ್ ಹತ್ತಿರ ಇರುವ ‘ಕಲಾಮಂಡಳ’ ದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಸಂಚಾಲಕರಾದ ಡಾ. ನಾಗಪ್ಪ ಗೋಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…