ಸುರಪುರ: ಅಖಿಲ ಭಾರತೀಯ ವೀರಶೈವ ಮಹಾಸಭಾ ಸುರಪುರ ತಾಲೂಕು ಘಟಕದ ಚುನಾವಣೆ ಘೋಷಣೆ,ಸಹಾಯಕ ಚುನಾವಣಾಧಿಕಾರಿಗಳಾಗಿ ಹಿರಿಯ ಸಾಹಿತಿ ಹಾಗು ಸಮಾಜದ ಮುಖಂಡರಾದ ಶಾಂತಪ್ಪ ಬೂದಿಹಾಳ ಅವರನ್ನು ನೇಮಕಗೊಳಿಸಿ ಚುನಾವಣಾಧಿಕಾರಿಗಳಾದ ಹೆಚ್.ಎಮ್.ರೇವಣ್ಣ ಅವರು ಆದೇಶ ಹೊರಡಿಸಿದ್ದಾರೆ.
ಚುನಾವಣೆ ಕುರಿತು ನಗರದ ಕನ್ನಡ ಸಾಹಿತ್ಯ ಸಂಘದ ಕಾರ್ಯಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶಾಂತಪಪ್ ಬೂದಿಹಾಳ ಅವರು,ಅಖಿಲ ಭಾರತೀಯ ವೀರಶೈವ ಮಹಾಸಭಾದ ಸುರಪುರ ತಾಲೂಕು ಘಟಕಕ್ಕೆ ಪದಾಧಿಕಾರಿಗಳ ನೇಮಕಕ್ಕಾಗಿ ಚುನಾವಣೆ ಘೋಷಣೆಯಾಗಿದ್ದು ಇದೇ ಜನೆವರಿ ೨೮ನೇ ತಾರೀಖು ಬೆಳಿಗ್ಗೆ ೧೦ ಗಂಟೆಯಿಂದ ನಾಮಪತ್ರ ಸ್ವೀಕಾರ ಆರಂಭವಾಗಲಿದೆ.
ನಾಮಪತ್ರ ಸಲ್ಲಿಕೆಗೆ ಫೇಬ್ರವರಿ ೨ನೇ ತರೀಖು ೩ ಗಂಟೆಯವರೆಗೆ ಕೊನೆಯ ದಿನವಾಗಿದೆ.ಫೇಬ್ರವರಿ ೩ನೇ ತಾರೀಖು ಬೆಳಿಗ್ಗೆ ೧೦:೩೦ ರಿಂದ ನಾಮಪತ್ರಗಳ ಪರಿಶೀಲನೆ ನಡೆಯಲಿದೆ ಹಾಗು ಫೇಬ್ರವರಿ ೬ನೇ ತಾರೀಖು ಮದ್ಹ್ಯಾನ ೩ ಗಂಟೆಯವರೆಗೆ ನಾಮಪತ್ರ ಹಿಂಪಡೆಯಲು ಸಮಯ ನಿಗದಿ ಪಡಿಸಲಾಗಿದೆ,ಅಗತ್ಯವಿದ್ದಲ್ಲಿ ಫೇಬ್ರವರಿ ೧೪ನೇ ತಾರೀಖು ರವಿವಾರ ಬೆಳಿಗ್ಗೆ ೮ ರಿಂದ ಸಂಜೆ ೪ ಗಂಟೆಯವರೆಗೆ ಚುನಾವಣೆ ನಡೆಯಲಿದ್ದು ಅದೇ ದಿನ ಸಂಜೆ ಮತ ಎಣಿಕೆಯು ನಡೆಯಲಿದೆ.
ಆದ್ದರಿಂದ ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತರು ಮೇಲ್ಕಾಣಿಸಿದ ದಿನಾಂಕದಿಂದ ವೀರಶೈವ ಕಲ್ಯಾಣ ಮಂಟಪದಲ್ಲಿರುವ ಸಂಘದ ಕಾರ್ಯಾಲಯದಲ್ಲಿ ತಮ್ಮ ನಾಮಪತ್ರ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…