ಕಲಬುರಗಿ: ಕೈಗಾರಿಕಾ ಸಂಸ್ಥೆಗಳೊಂದಿಗೆ ನಿಕಟ ಸಂಬಂಧ ಕಾಯ್ದುಕೊಳ್ಳಲು ಶರಣಬಸವ ವಿಶ್ವವಿದ್ಯಾಲಯದ ಸಿಬ್ಬಂದಿಗಳಿಗಾಗಿ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ವಿಭಾಗ ಹಾಗೂ ಬೆಂಗಳೂರಿನ VI ಸಲ್ಯುಶನ್ಸ್ ಹಮ್ಮಿಕೊಂಡಿರುವ ಕಾರ್ಯಾಗಾರಕ್ಕೆ ವಿವಿಯ ಡೀನ್ ಡಾ. ಲಕ್ಷ್ಮೀ ಪಾಟೀಲ ಚಾಲನೆ ನೀಡಿದರು.
ಶರಣಬಸವ ವಿಶ್ವವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯುನಿಕೇಶನ್, ಇಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಹಾಗೂ ಬೆಂಗಳೂರಿನ ಗಿI ಸಲ್ಯುಶನ್ಸ್ ಜಂಟಿಯಾಗಿ ಒಂದು ವಾರ ಹಮ್ಮಿಕೊಂಡಿರುವ ಎಫ್‌ಡಿಪಿಯ ಭಾಗವಾದ ಅಪ್ಲಿಕೇಶನ್ಸ್ ಆಫ್ ಲ್ಯಾಬ್‌ವಿವ್ ಇನ್ ಟಿಚಿಂಗ್ & ರಿಸರ್ಚ ಕಾರ್ಯಾಗಾರಕ್ಕೆ ಸೋಮವಾರ ಚಾಲನೆ ನೀಡಲಾಯಿತು.
ಈ ಕಂಪೆನಿಯು ಹೊಸ ಹೊಸ ತಂತ್ರಜ್ಞಾನಗಳನ್ನು ಬಳಸಿಕೊಳ್ಳುತ್ತಿರುವ ಕಂಪೆನಿಯಾಗಿದೆ. ಎಂಜಿನಿಯರಿಂಗ್ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ ಮತ್ತು ಗುಣಾತ್ಮಕತೆ ತರುವ ಉದ್ದೇಶದಿಂದ ಈ ಕಾರ್ಯಗಾರ ಆಯೋಜಿಸಲಾಗಿದೆ.
ಕೈಗಾರಿಕೆ ಮತ್ತು ಇಂಜಿನಿಯರಿಂಗ್ ಸಂಸ್ಥೆಗಳ ಮಧ್ಯದಲ್ಲಿನ ತೊಡಕನ್ನು ನಿವಾರಣೆ ಮಾಡಿ ಗುಣಮಟ್ಟವನ್ನು ಕಾಪಾಡಿಕೊಳ್ಳುವುದು ಜೊತೆಗೆ ಶೈಕ್ಷಣಿಕ ಸಂಶೋಧನೆಯನ್ನು ಸರಿಯಾದ ಉಪಕರಣಗಳೊಂದಿಗೆ ಕೈಗೊಂಡು ಇಂಜಿನಿಯರಿಂಗ್ ಕ್ಷೇತ್ರದ ಬೃಹತ ಸವಾಲುಗಳನ್ನು ಕೈಗಾರಿಕೆ ಮತ್ತು ಸಮಾಜದೊಂದಿಗೆ ಬೆಸೆಯುವ ಕಾರ್ಯ ಮಾಡುವ ಉದ್ದೇಶದಿಂದ ಈ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ.
ಗಿI ಸಲ್ಯುಶನ್ಸ್ ಕಂಪೆನಿಯ ಸೀನಿಯರ್ ಅಪ್ಲಿಕೇಷನ್ ಇಂಜಿನಿಯರ್ ಈಸಾಕ್ಕಿ ರಾಜ್ ಅವರು ಕಾರ್ಯಾಗಾರ ನಡೆಸಿಕೊಟ್ಟರು. ಕಾರ್ಯಾಗಾರದಲ್ಲಿ ಡಾ. ಶಿವುಕುಮಾರ ಜವಳಗಿ, ಪ್ರೊ. ಶಿವಗಂಗಾ ಪಾಟೀಲ, ಪ್ರೊ.ಆಶಾರಾಣಿ ಪಾಟೀಲ, ಪ್ರೊ.ಶರಣು ಕೊರಿಶೆಟ್ಟಿ, ಲಕ್ಷ್ಮಿ ಪಾಟೀಲ ಸೇರಿದಂತೆ ಸಿಬ್ಬಂದಿಗಳು ಭಾಗವಹಿಸಿದ್ದರು. ಪ್ರೊ. ಅಭಿಲಾಷಾ ಪಾಟೀಲ ಕಾರ್ಯಕ್ರಮ ನಿರ್ವಹಿಸಿದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…