ಕಲಬುರಗಿ: ಬೀದಿ ವ್ಯಾಪಾರಿಗಳಿಗೆ ಸರ್ಕಾರದ ಸಿಗುವ ಯೋಜನೆಗಳು ಪಾರದರ್ಶದಂತೆ ಅನುಷ್ಠಾನ ಗೊಳಿಸಲು ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು ಎಂದು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಅವರು ತಿಳಿಸಿದರು.
ನಗದರ ಅಂಜುಮನ್ ತರಕ್ಕಿ ಉರ್ದು ಎ ಹಿಂದ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಬೀದಿ ವ್ಯಾಪಾರಿಗಳ ಸಂಘದಿಂದ ಹಮ್ಮಿಕೊಂಡಿದ್ದ ಬೀದಿ ವ್ಯಾಪಾರಿಗಳ ಸಮಸ್ಯೆ ಮತ್ತು ಸವಾಲುಗಳು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ರಾಜ್ಯ ಸರ್ಕಾರ ಸೇರಿದಂತೆ ಕೇಂದ್ರ ಸರ್ಕಾರದ ಯೋಜನೆಗಳನ್ನು ಬೀದಿ ಬದಿ ವ್ಯಾಪಾರ ಮಾಡುವವರಿಗೆ ಅನುಕೂಲ ಮಾಡಿಕೊಟ್ಟಿದೆ.ಅದರಂತೆ ನಗರದ ಬೀದಿ ಬದಿ ವ್ಯಾಪಾರ ಮಾಡುವವರಿಗೂ ನಾವು ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದರು.ಈಗಾಗಲೇ ಇದರ ಕುರಿತು ಹಿರಿಯ ಹೋರಾಗಾರರಾದ ಲಕ್ಷ್ಮಣ ದಸ್ತಿ ಅವರು ಮಂಡಿಸಿದ ಬೇಡಿಕೆಗಳಂತೆ ಬೀದಿ ವ್ಯಾಪಾರಿಗಳಿಗೆ ಕಾಲಮಿತಿಯೊಳಗೆ ಬೀದಿ ವ್ಯಾಪಾರಿಗಳ ಸಮೀಕ್ಷೆ ನಡೆಸಿ ವ್ಯಾಪಾರ ಮಾಡುವ ಸ್ಥಳದಲ್ಲಿ ಗುರುತಿನ ಚೀಟಿ ಸೇರಿದಂತೆ ಅನೇಕ ಯೋಜನೆಗಳನ್ನು ಕಲ್ಪಿಸಲಾಗುವುದು ಎಂದು ಹೇಳಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಹೋರಾಗಾರರಾದ ಲಕ್ಷ್ಮಣ ದಸ್ತಿ ಮಾತನಾಡಿ ಬೀದಿ ವ್ಯಾಪಾರಿಗಳ ಹಿತ ಕಾಪಾಡಲು ಸರ್ಕಾರಕ್ಕೆ ಈಗಾಗಲೇ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.ನಗರದ ಎಲ್ಲಾ ಬೀದಿ ಬದಿ ವ್ಯಾಪಾರ ಮಾಡುವವರು ಸುಗಮ ಬದುಕಿಗೆ ಅವರ ವ್ಯಾಪಾರ ವ್ಯವಹಾರ ನೆಡೆಸಲು ನೇರವಾಗಿ ಬೀದಿ ವ್ಯಾಪರಿಗಳೊಂದಿಗೆ ಸಂವಾದ ಮಾಡಿ ಅವರಿಗೆ ಅನುಕೂಲ ಮಾಡಿಕೊಡುವಂತೆ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಸಾರಂಗಧರ ದೇಶಿಕೇಂದ್ರ ಮಠ ಶ್ರೀಶೈಲ ಪೀಠದ ಜಗದ್ಗುರು ಶ್ರೀ ಮಹಾಂತ ಶಿವಾಚಾರ್ಯರು ಮಾತನಾಡಿದರು.ಪತ್ರಕರ್ತ ಸಂಘದ ಜಿಲ್ಲಾಧ್ಯಕ್ಷ ಭವಾನಿಸಿಂಗ ಠಾಕೂರ್, ಹೋರಾಟಗಾರರ ಅರುಣಕುಮಾರ ಪಾಟೀಲ್, ಲಿಂಗರಾಜ ಸಿರಗಾಪೂರ, ಅಣ್ಣಾರಾಯ ಧುತ್ತರಗಾಂವ, ಸಂಘದ ಅಧ್ಯಕ್ಷ ಜಗನ್ನಾಥ ಸೂರ್ಯವಂಶಿ, ದತ್ತು ಭಾಸಗಿ, ಪ್ರವೀಣ್ ಸಿಂಧೆ ಸೇರಿದಂತೆ ಅನೇಕರು ಇದ್ದರು.ಸೋಮಶೇಖರ ಬಣಗಾರ ನಿರೂಪಿಸಿದರು.ಇದೇ ಸಂದರ್ಭದಲ್ಲಿ ಬೀದಿ ಬದಿ ವ್ಯಾಪಾರಸ್ಥರಿಗೆ ಗುರುತಿನ ಚೀಟಿ ನೀಡಲಾಯಿತು.