ಕಲಬುರಗಿ: ನಗರದ ಅನನ್ಯ ಪದವಿ ಮತ್ತು ಸ್ನಾತಕೋತ್ತರ ಎಂ ಎಸ್ ಡಬ್ಲ್ಯೂ ಮಹಾವಿದ್ಯಾಲಂಯದಲ್ಲಿ ಭಾರತಾಂಬೆ ಹೆಮ್ಮೆಯ ಪುತ್ರ, ವೀರ ಯೋಧ, ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಅಪ್ರತಿಮ ದೇಶ ಭಕ್ತ, “ಆಜಾದ್ ಹಿಂದ್ ಫೌಜ್” ಸಂಸ್ಥಾಪಕರಾದ ನೇತಾಜಿ ಸುಭಾಷ್ ಚಂದ್ರಬೋಸ್ ಅವರ ೧೨೫ ನೇ ಜನ್ಮೋತ್ಸವದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಸ್ಥೆಯ ಅಧ್ಯಕ್ಷೆ ಸುಷ್ಮಾವತಿ ಎಸ್ ಹೂನಗೇಜೀ ಮಾತನಾಡಿ ಅವರು, ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ. ಈ ವಾಕ್ಯ ಸ್ವಾತಂತ್ರ್ಯ ಚಳವಳಿಯ ಸಂದರ್ಭದಲ್ಲಿ ಅದೆಷ್ಟೋ ಜನರಿಗೆ ಸ್ಫೂರ್ತಿ ತುಂಬಿತ್ತು. ಅಂದು ಸಿಡಿಲಬ್ಬರದ ಈ ಮಾತು ಕೇಳಿದ್ದ ಪ್ರತಿಯೊಬ್ಬರಲ್ಲೂ ದೇಶ ಪ್ರೇಮದ ಕಿಚ್ಚು ಜಾಗೃತವಾಗುತ್ತಿತ್ತು. ಭಾರತವನ್ನು ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಬಿಡಿಸಲೇಬೇಕೆಂದು ಪಣ ತೊಟ್ಟಿದ್ದ ನೇತಾಜಿ ಅಂದಿನ ಬ್ರಿಟಿಷ್ ಸರ್ಕಾರಕ್ಕೆ ತನ್ನ ಪ್ರಖರ ನಿಲುವುಗಳಿಂದಲೇ ಬಿಸಿ ಮುಟ್ಟಿಸಿದ್ದರು ಎಂದರು.
೧೮೯೭ ಜನವರಿ ೨೩ರಂದು ಒಡಿಶಾದ ಕಟಕ್ ನಗರದಲ್ಲಿ ಜಾನಕಿನಾಥ್ ಬೋಸ್ ಮತ್ತು ಪ್ರಭಾವತೀ ದೇವಿ ದಂಪತಿ ಪುತ್ರನಾಗಿ ಜನಿಸಿದ್ದ ನೇತಾಜಿ ಭಾರತದ ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರರಾಗಿ ಹೊರಹೊಮ್ಮಿದ್ದರು. “ಆಜಾದ್ ಹಿಂದ್ ಪೌಜ್” (ಇಂಡಿಯನ್ ನ್ಯಾಷನಲ್ ಆರ್ಮಿ – ಐಎಎಸ್) ಎಂಬ ಸೇನೆಯನ್ನು ಕಟ್ಟಿದ ಸುಭಾಷ್ ಚಂದ್ರ ಬೋಸ್ ಕ್ರಾಂತಿಕಾರಿ ನಿಲುವಿನ ನಾಯಕರಾಗಿ ಹೊರಹೊಮ್ಮಿದ್ದರು ಎಂದರು. ಅಪ್ರತಿಮ ದೇಶಭಕ್ತರಾಗಿದ್ದ ಬೋಸ್ ವಿದೇಶದಲ್ಲೂ ಸ್ವಾತಂತ್ರ್ಯ ಹೋರಾಟವನ್ನು ಸಂಘಟಿಸಿದ್ದು, ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ದೇಶ ವಿದೇಶದಲ್ಲಿ ಸುತ್ತಾಡಿದ ಸುಭಾಷ್ ಚಂದ್ರ ಬೋಸ್ ಅವರು ಬ್ರಿಟಿಷರಿಗೇ ಸಿಂಹಸ್ವಪ್ನವಾಗಿ ಕಾಡಿದ್ದರು.
ನನಗೆ ರಕ್ತ ನೀಡಿ ಮತ್ತು ನಾನು ನಿಮಗೆ ಸ್ವಾತಂತ್ರ್ಯವನ್ನು ನೀಡುತ್ತೇನೆ. ಒಬ್ಬ ವ್ಯಕ್ತಿ ತನ್ನ ಸಿದ್ಧಾಂತಕ್ಕಾಗಿ ಸಾವನ್ನಪ್ಪಬಹುದು. ಆದರೆ, ಆತನ ಮರಣಾನಂತರವೂ ಉಳಿಯುವ ಆ ಸಿದ್ಧಾಂತ ಸಾವಿರ ಜನರಲ್ಲಿ ಅವತರಿಸುತ್ತದೆ. ಸ್ವಾತಂತ್ರ್ಯವನ್ನು ಯಾರೂ ಕೊಡುವುದಿಲ್ಲ. ಅದನ್ನು ನಾವೇ ಪಡೆದುಕೊಳ್ಳಬೇಕು ಎಂದರು.
ಅನ್ಯಾಯವನ್ನು ಸಹಿಸಿಕೊಳ್ಳುವುದು ಮತ್ತು ತಪ್ಪಿನೊಂದಿಗೆ ರಾಜಿ ಮಾಡಿಕೊಳ್ಳುವುದು ಬಹುದೊಡ್ಡ ಅಪರಾಧ. ಇಂತಹ ಕ್ರಾಂತಿಕಾರಿ ಕಿಚ್ಚಿನ ಮಾತು ಯಾವೊಬ್ಬ ಭಾರತ ಪ್ರಜೆಯೂ ಮರೆಯುವಂತಿಲ್ಲ ಎಂಬುದು ಅಷ್ಟೇ ಸತ್ಯ. ನಮ್ಮ ದೇಶದ ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಸುಭಾಷ್ ಚಂದ್ರಬೋಸ್ ಅವರ ಜನ್ಮ ದಿನ ನಮ್ಮ ಕಾಲೇಜಿನಲ್ಲಿ ಆಚರಿಸಲಾಯಿತು ಇದೇ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶರಣು ಬಿ ಹೂನಗೇಜೀ (ಪೂಜಾರಿ), ಸುಧಾ, ಇಂದುಮತಿ, ರೇಣುಕಾ ರಾಜಕುಮಾರ್, ಸುಜಾತ ಮತ್ತು ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…