ಎಫ್.ಡಿ.ಎ. ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್: ಪರೀಕ್ಷೆ ಮುಂದೂಡಿಕೆ

0
118

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ 2019ನೇ ಸಾಲಿನ ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಪ್ರಥಮ ದರ್ಜೆ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಜ.24 (ಭಾನುವಾರ) ದಂದು ನಡೆಯಬೇಕಿದ್ದ  ಎರಡು ಅಧಿವೇಶನದಲ್ಲಿ ‌ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದು, ಈ ಹಿನ್ನಲೆಯಲ್ಲಿ ಪರೀಕ್ಷೆ ಮುಮದೂಡಲಾಗಿದೆ ಎಂದು : ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಜಿ ಸತ್ಯವತಿ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ. ದಿನಾಂಕ:23-01-2021ರಂದು ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯನ್ನು ಮತ್ತು ದಿನಾಂಕಃ24-01-2020ರಂದು ಎರಡು ಅಧಿವೇಶನಗಳಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ನಿಗದಿಪಡಿಸಲಾಗಿತ್ತು.

Contact Your\'s Advertisement; 9902492681

ಏತನ್ಮಧ್ಯೆ, ದಿನಾ೦ಕ:23-01-2020ರಂದು ಬಲ್ಲ ಮೂಲಗಳಿಂದ ಸ್ವೀಕೃತಗೊ೦ಡ ಮಾಹಿತಿಯ ಪ್ರಕಾರ ದಿನಾ೦ಕ:24-01-2021ರಂದು ಎರಡು ಅಧಿವೇಶನಗಳಲ್ಲಿ ನಡೆಯಬೇಕಾಗಿದ್ದ, ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆಪತ್ರಿಕೆಗಳು ಕೆಲವೊಂದು ದುಷ್ಕರ್ಮಿಗಳ ಕೈಸೇರಿರುವುದು ತಿಳಿದುಬಂದಿರುವ ಹಿನ್ನೆಲೆಯಲ್ಲಿ, ದಿನಾ೦ಕ:24-01-2021ರಂದು ನಡೆಯಬೇಕಾಗಿದ್ದ 2019ನೇ ಸಾಲಿನ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಅನಿವಾರ್ಯ ಕಾರಣಗಳಿಂದ ಮುಂದೂಡಲಾಗಿದೆ.

ಮುಂದುವರೆದು, ಸ್ಪರ್ಧಾತ್ಮಕ ಹರೀಕ್ಷೆಗಳ ದಿನಾಂಕವನ್ನು ಮುಂದಿನ ದಿನಾಂಕ‌ ನಂತರ‌ ತಿಳಿಸಲಾಗುವುದು ಎಂದು ಆಯೋಗದ ಕಾರ್ಯದರ್ಶಿ ಜಿ.ಸತ್ಯವತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here