ಬಿಸಿ ಬಿಸಿ ಸುದ್ದಿ

ರಾಜ್ಯ ಸರ್ಕಾರಿ ನೌಕರರ ದಿನಾಚರಣೆಗೆ ಆದೇಶ: ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಿದ ರಾಜು ಲೇಂಗಟಿ

ಕಲಬುರಗಿ: ಕೋವಿಡ್-೧೯ ಹಿನ್ನೆಲೆಯಲ್ಲಿ ಕಳೆದ ವರ್ಷದಲ್ಲಿ ಸರ್ಕಾರಿ ನೌಕರರಿಗೆ ಸಿಗಬೇಕಾಗಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ತಡೆ ಹಿಡಿದಿದ್ದ ಸರ್ಕಾರ ಪ್ರಸ್ತುತ ೨೦೨೧ನೇ ಸಾಲಿನ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮಂಜೂರು ಮಾಡಿದಕ್ಕೆ ಮತ್ತು ಏಪ್ರಿಲ್ ೨೧ ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಆಚರಿಸಲು ಇತ್ತೀಚೆಗೆ ಆದೇಶ ಹೊರಡಿಸಿದ್ದಕ್ಕಾಗಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಟಿ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಕೇಂದ್ರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಇತ್ತೀಚೆಗೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಗಣನೀಯವಾಗಿ ಇಳಿಮುಖವಾಗಿ ಆರ್ಥಿಕ ಚೇತರಿಕೆ ಕಾಣುತ್ತಿದೆ. ಹೀಗಾಗಿ ರಾಜ್ಯ ಸರ್ಕಾರಿ ನೌಕರರಿಗೆ ಕಳೆದ ವರ್ಷ ತಡೆ ಹಿಡಿದ್ದಿದ್ದ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಈ ಬಾರಿ ಮಂಜೂರು ಮಾಡಬೇಕು ಎಂದು ಕೇಂದ್ರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿಯವರ ಅವರು ನಿರಂತರವಾಗಿ ಸರ್ಕಾರದ ಮೇಲೆ ಒತ್ತಡ ಹಾಕಿದ ಪರಿಣಾಮ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅದಕ್ಕೆ ಅನುಮೋದನೆ ನಿಡಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಸರ್ಕಾರಿ ನೌಕರರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದಲ್ಲದೆ ದೇಶದಲ್ಲಿಯೆ ಅತಂತ್ಯ ದೊಡ್ಡ ಸಂಘಟನೆಯಾಗಿರುವ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಶತಮಾನೋತ್ಸವ ಆಚರಿಸುತ್ತಿರುವ ಈ ಸಂದರ್ಭದಲ್ಲಿ ಸಂಘದ ಮನವಿಗೆ ಸ್ಪಂದಿಸಿ ರಾಜ್ಯ ಸರ್ಕಾರವು ಏಪ್ರಿಲ್ ೨೧ ರಂದು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಗೆ ಆದೇಶಿಸಿದ್ದು, ಅತ್ಯಂತ ಹರ್ಷದಾಯಕ ವಿಷಯವಾಗಿದೆ. ದೇಶದಲ್ಲಿಯೇ ಮಾದರಿಯಾಗಿ ಕರ್ನಾಟಕ ಸರ್ಕಾರವು ಸರಕಾರಿ ನೌಕರರ ದಿನಾಚರಣೆಗೆ ಆದೇಶ ಹೊರಡಿಸುವ ಮೂಲಕ ತನ್ನ ನೌಕರರ ಬಗೆಗಿನ ಕಾಳಜಿಯನ್ನು ಪ್ರದರ್ಶಿಸಿದೆ. ಇಂತಹ ಒಂದು ಐತಿಹಾಸಿಕ ನಿರ್ಧಾರಕ್ಕೆ ಕಾರಣಿಭೂತರಾದ ಮುಖ್ಯಮಂತ್ರಿಗಳಿಗೂ ಮತ್ತು ನೌಕರ ಸಂಘದ ರಾಜ್ಯಾಧ್ಯಕ್ಷರಿಗೂ ಆನಂತ ಧನ್ಯವಾದಗಳು ಸಲ್ಲಿಸುವುದಾಗಿ ಅವರು ತಿಳಿಸಿದ್ದಾರೆ.

ಏಪ್ರಿಲ್ ೨೧ ರಂದು ರಾಜ್ಯದ ಎಲ್ಲಾ ಘಟಕಗಳಲ್ಲಿ ಅದ್ದೂರಿಯಾಗಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದ್ದು, ಅಂತೆಯೇ ಕಲಬುರಗಿ ಜಿಲ್ಲಾ ಸಮಿತಿಯು ಅಂದು ಕೇಂದ್ರ ಸಂಘದ ಮಾರ್ಗದರ್ಶನದಂತೆ ವಿಶೇಷ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ. ಪ್ರತಿ ವರ್ಷ ಜನವರಿ-೨೬ ಗಣರಾಜ್ಯೋತ್ಸವ ದಿನದಂದು ನೀಡಲಾಗುತ್ತಿದ್ದ ಸರ್ವೋತಮ ಸೇವಾ ಪ್ರಶಸ್ತಿಯನ್ನು ಸಹ ನೌಕರರ ದಿನಾಚರಣೆಯಂದೇ ಪ್ರದಾನ ಮಾಡಲಾಗುತ್ತದೆ ಎಂದು ರಾಜು ಲೇಂಗಟಿ ತಿಳಿಸಿದ್ದಾರೆ.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

11 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

14 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

20 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

21 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

21 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago