ಕಲಬುರಗಿ: ಸಮಾಜಮುಖಿಯಾಗಿ ಕೆಲಸ ಮಾಡುತ್ತಿರುವ ಸಂಘ ಸಂಸ್ಥೆಗಳಿಗೆ ಸರಕಾರ ನೆರವು ನೀಡಲು ಮುಂದಾಗಬೇಕು ಎಂದು ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್ ಅವರು ತಿಳಿಸಿದರು.
ನಗರದ ಮಿಸ್ಬಾ ಬಡಾವಣೆಯಲ್ಲಿ ನೆಹರು ಯುವ ಕೇಂದ್ರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಇಂದಿನ ಯುವ ಜನತೆ ಸಂಘ ಸಂಸ್ಥೆಗಳ ಅಡಿಪಾಯದಲ್ಲಿ ಅನೇಕ ಆದರ್ಶ ಕೆಲಸಗಳನ್ನು ಮಾಡುತ್ತಿದ್ದಾರೆ.ಅಂಥವರನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸ ಆಗುತ್ತಿಲ್ಲ ಎಂದು ವಿಷಾದಿಸಿದರು.ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಹಿರಿಯ ಹೋರಾಗಾರ ಲಕ್ಷ ಟೌ ದಸ್ತಿ ಮಾತನಾಡಿ ಇಂದು ಅನೇಕ ಸಂಘ-ಸಂಸ್ಥೆಗಳು ನಿಸ್ವಾರ್ಥ ಭಾವನೆಯಿಂದ ಸಮಾಜದ ಒಳಿತಿಗಾಗಿ ಕೆಲಸ ಮಾಡುತ್ತಿವೆ. ತರಬೇತಿಗಳು,ಕರಕುಶಲ ತಯ್ಯಾರಿಸುವುದು ಸೇರಿದಂತೆ ಹಲವು ಯೋಜನೆಗಳನ್ನು ಹಮ್ಮಿಕೊಂಡು ಬಡವರಿಗೆ ಉದ್ಯೋಗ ನೀಡುತ್ತಿರುವುದುಶ್ಲಾಘನೀಯ ಎಂದರು.
ಇನ್ನೋಬ್ಬ ಅತಿಥಿಗಳಾಗಿ ಆಗಮಿಸಿದ್ದ ಕನ್ನಡ ಭೂಮಿ ಜಾಗೃತಿ ಸಮಿತಿ ಸಂಸ್ಥಾಪಕ ಅಧ್ಯಕ್ಷ ಲಿಂಗರಾಜ ಸಿರಗಾಪೂರ ಸಂಘ ಸಂಸ್ಥೆಗಳನ್ನು ಸರಕಾರ ನಿರ್ಲಕ್ಷೀಸುತ್ತಿರುವುದು ಸರಿಯಲ್ಲ.ಅನುದಾನ ನೀಡುವ ಮೂಲಕ ಸಂಘ ಸಂಸ್ಥೆಗಳನ್ನು ಬೆಳೆಸುವ ಕೆಲಸ ಮಾಡಬೇಕು ಎಂದರು.
ಸಾಜೀದ ಅಲಿ ರಂಜೋಳ್ಚ್ವಿ ಇದೇ ಸಂದರ್ಭದಲ್ಲಿ ಮಾತನಾಡಿ ಸಂಘ-ಸಂಸ್ಥೆ. ಗಳ ಕೆಲಸಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.ಬಾಬಾ ಫಕ್ರುದ್ದೀನ್,ಮೋದಿನ್ ಪಟೇಲ್, ಶ್ರೀಮತಿ ಶಫಿಯಾ ಬೇಗಂ, ಹೈದರ್ ಇತರರು ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…