ದೇಶದ ಅಭಿವೃಧ್ಧಿ ಎಂಬುದು ನಮ್ಮ ಮತದಾನದಲ್ಲಿದೆ: ಸುಬ್ಬಣ್ಣ ಜಮಖಂಡಿ

0
26

ಸುರಪುರ: ೧೮ ವರ್ಷ ತುಂಬಿದ ಪ್ರತಿಯೊಬ್ಬರು ಮತದಾನ ಮಾಡಬೇಕು,ಮತದಾನ ಎಂಬುದು ದೇಶದ ಅಭಿವೃಧ್ಧಿಯಲ್ಲಿ ಮಹತ್ತರ ಪಾತ್ರ ವಹಿಸಲಿದೆ ಎಂದು ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿ ಮಾತನಾಡಿದರು.

ನಗರದ ದರಬಾರ ಶಾಲೆಯಲ್ಲಿ ಚುನಾವಣಾ ಆಯೋಗ ಮತ್ತು ತಾಲೂಕು ಆಡಳಿತದಿಂದ ಹಮ್ಮಿಕೊಂಡಿದ್ದ ಮತದಾರ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಮತದಾನ ಎಂಬುದು ಸಂವಿಧಾನ ನಮಗೆ ನೀಡುವ ದೊಡ್ಡ ಉಡುಗೊರೆಯಾಗಿದೆ,ಆದ್ದರಿಂದ ಪ್ರತಿಯೊಬ್ಬರು ಈ ವರವನ್ನು ಪಡೆದುಕೊಂಡು ಮತವೆಂಬ ತಮ್ಮ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು.೧೮ ವರ್ಷ ವಯಸ್ಸಾದವರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಸೇರ್ಪಡೆಗೊಳಿಸಿಕೊಳ್ಳಬೇಕು ಮತ್ತು ಪ್ರತಿ ಚುನಾವಣೆಯಲ್ಲಿ ತಪ್ಪದೆ ಮತದಾನ ಮಾಡಬೇಕೆಂದು ಕರೆ ನೀಡಿದರು.

Contact Your\'s Advertisement; 9902492681

ನಂತರ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಅಂಬ್ರೇಶ ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವರಡ್ಡಿ ಕ್ಷೇತ್ರ ಮತದಾರ ದಿನವನ್ನು ಕುರಿತು ಮಾತನಾಡಿದರು,ನಂತರ ಬಿಆರ್‌ಸಿ ಹಣಮಂತ್ರಾಯ ಪೂಜಾರಿ ಎಲ್ಲರಿಗು ಮತದಾನದ ಕುರಿತು ಪ್ರಮಾಣ ವಚನ ಬೋಧಿಸಿದರು.ನಂತರ ಅನೇಕ ಜನ ಯುವ ಮತದಾರರಿಗೆ ಚುನಾವಣಾ ಆಯೋಗದ ವತಿಯಿಂದ ಚುನಾವಣಾ ಗುರುತಿನ ಚೀಟಿಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕ್ಷೇತ್ರ ಸಂಪನ್ಮೂಲಾಧಿಕಾರಿ ಅಮರೇಶ ಕುಂಬಾರ ಅಕ್ಷರದಾಸೋಹ ಸಹಾಯಕ ನಿರ್ದೇಶಕ ಮೌನೇಶ ಕಂಬಾರ ಚುನಾವಣಾ ವಿಭಾಗದ ಸಿರಸ್ತೇದಾರ ಅಶೋಕ ಸುರಪುರಕರ್ ಕಂದಾಯ ನಿರೀಕ್ಷಕ ಗುರುಬಸಪ್ಪ ಶಿಕ್ಷಕ ಸೋಮರಡ್ಡಿ ಮಂಗಿಹಾಳ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here