ಸುರಪುರ; ಎಫ್ಡಿಎ ಪರೀಕ್ಷಾ ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸುರಪುರ ತಾಲೂಕು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.
ನಗರದ ತಹಸೀಲ್ ಕಚೇರಿ ಮುಂದೆ ಸೇರಿದ ಎಬಿವಿಪಿ ಮುಖಂಡರು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಿ ಮಾತನಾಡಿದ ಮುಖಂಡರು,ಸರಕಾರ ಪ್ರಶ್ನೆ ಪತ್ರಿಕೆ ಸೋರಿಕೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರ ಮೇಲೆ ಹಾಗು ಇದರ ಹಿಂದೆ ಇರುವವರನ್ನು ಪತ್ತೆ ಮಾಡಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.
ನಂತರ ಮುಖ್ಯಮಂತ್ರಿಗಳಿಗೆ ಬರೆದ ಮನವಿಯನ್ನು ಗ್ರೇಡ-೨ ತಹಸೀಲ್ದಾರ್ ಸೂಫಿಯಾ ಸುಲ್ತಾನರ ಮೂಲಕ ಸಲ್ಲಿಸಿದರು.ಈ ಸಂದರ್ಭದಲ್ಲಿ ನಗರಘಟಕದ ಅಧ್ಯಕ್ಷ ರಾಜಪ್ಪ ಅಜ್ಜಕೊಳ್ಳಿ ನಗರ ಕಾರ್ಯದರ್ಶಿ ಮಲ್ಲಯ್ಯ ಹಿರೇಮಠ ಉಪಾಧ್ಯಕ್ಷ ಹಣಮಂತ ಸಿಂಘೆ ಜಿಲ್ಲಾ ಸಂಚಾಲಕ ಕ್ಯಾತಪ್ಪ ಮೇದಾ ಜಿಲ್ಲಾ ಮಾದ್ಯಮ ಪ್ರಮುಖ ಪರಶುರಾಮ ಬೈಲಕುಂಟಿ ಶೀಲವಂತರಡ್ಡಿ ಶ್ರೀಕಾಂತ ನಾರಾಯಣಪೇಟ ಸೇರಿದಂತೆ ಇತರರಿದ್ದರು.
ಕಲಬುರಗಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ಸಂಘ ಜಿಲ್ಲಾಮಟ್ಟದ ಪತ್ರಕರ್ತರ ಸಮಾವೇಶ ಸೆಪ್ಟೆಂಬರ್ 16ರಂದು ಅಫಜಲಪೂರ ಪಟ್ಟಣದಲ್ಲಿ ನಡೆದ ಸಂದರ್ಭದಲ್ಲಿ…
ಕಲಬುರಗಿ; ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ವಿಶಿಷ್ಟ ಖ್ಯಾತಿ ಪಡೆದ ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದ ವತಿಯಿಂದ…
ಚಿಂಚೋಳಿ : ಪ್ರವಾದಿ ಮಹ್ಮದ ಪೈಗಂಬರ್ ಅವರನ್ನು ಅವಮಾನಿಸಿದ ನರಸಿಂಹಾನಂದ ಸರಸ್ವತಿ ಸ್ವಾಮಿಗಳ ವಿರುದ್ಧ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿ…
ಕಲಬುರಗಿ: ಕಲ್ಯಾಣ ಕರ್ನಾಟಕದ ಶೈಕ್ಷಣಿಕ ಗುಣಮಟ್ಟ ಸುಧಾರಣೆಗಾಗಿ ಕೆ.ಕೆ.ಆರ್.ಡಿ.ಬಿ ಯು ಸಮಿತಿಯೊಂದನ್ನು ರಚಿಸಿ, ಗುರುರಾಜ ಕರ್ಜಗಿ ಅವರನ್ನು ಅಧ್ಯಕ್ಷರನ್ನಾಗಿ ಮಾಡಿರುವ…
ಕಲಬುರಗಿ; ಕನಾ೯ಟಕ ರಾಜ್ಯ ತಳವಾರ ಮಹಾಸಭಾ ಕಲಬುರಗಿ ಜಿಲ್ಲಾಧ್ಯಕ್ಷರಾದ ಚಂದ್ರಕಾಂತ ದಶರಥ ತಳವಾರ ಅವರ ಅಧ್ಯಕ್ಷತೆಯಲ್ಲಿ ಇಂದು ಆನಂದ ನಿಲಯ…
ಕಲಬುರಗಿ; ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್ ಅವರು ಶನಿವಾರ ಶಹಾಬಾದ ರಸ್ತೆಯಲ್ಲಿರುವ ನಂದೂರ-ಕೆಸರಟಗಿ ಮತ್ತು ಹುಮನಾಬಾದ ರಸ್ತೆಯಲ್ಲಿರುವ ಕಪನೂರ ಕೈಗಾರಿಕಾ…