ಚುನಾವಣೆಗಳ ಘನತೆಯನ್ನು ಪ್ರತಿಯೊಬ್ಬರೂ ಎತ್ತಿಹಿಡಿಯಬೇಕು: ಡಾ. ಎನ್.ವಿ. ಪ್ರಸಾದ

0
28

ಕಲಬುರಗಿ: ಭಾರತದ ಪ್ರತಿಯೊಬ್ಬ ಪ್ರಜೆಗಳಾದ ನಾವು ಪ್ರಜಾಪ್ರಭುತ್ವದಲ್ಲಿ ದೃಢವಿಶ್ವಾಸದಿಂದ ಪ್ರಜಾಸತ್ತಾತ್ಮಕ ಸಂಪ್ರದಾಯಗಳ ಮತ್ತು ಮುಕ್ತ ನ್ಯಾಯಸಮ್ಮತ ಹಾಗೂ ಶಾಂತಿಯುತ ಚುನಾವಣೆಗಳ ಘನತೆಯನ್ನು ಎತ್ತಿಹಿಡಿಯಬೇಕು ಎಂದು ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್ ಅವರು ತಿಳಿಸಿದರು.

ನಗರದ ಚಂದ್ರಶೇಖರ್ ಪಾಟೀಲ್ ಕ್ರೀಡಾಂಗಣದಲ್ಲಿ ಸೋಮವಾರ ನಡೆದ 11ನೇ ರಾಷ್ಟ್ರೀಯ ಮತದಾರರ ದಿನದ ಕಾರ್ಯಕ್ರಮವನ್ನು ಮತದಾರರ ಅಭಿಯಾನದ ಫಲಕಕ್ಕೆ ಸಹಿ ಮಾಡುವುದರÀ ಮೂಲಕ ಚಾಲನೆ ನೀಡಿ ಅವರು ಮಾತನಾಡಿ, ಮತದಾರರನ್ನು ಜಾಗರೂಕ, ಸುರಕ್ಷಿತ ಮತ್ತು ಮಾಹಿತಿಯುಕ್ತರನ್ನಾಗಿ ಮಾಡುವುದೇ ನಮ್ಮ ಗುರಿ ಎಂದು ತಿಳಿಸಿದÀರು.

Contact Your\'s Advertisement; 9902492681

ಕಾರ್ಯಕ್ರಮದ ಅಧ್ಯಕ್ಷತೆವಹಿಸಿ ಮಾತನಾಡಿದ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ವಿ.ವಿ. ಜೋತ್ಸ್ನಾ ಅವರು, ಪ್ರತಿದಿನ ನಾವು ನಮ್ಮ ಸಂವಿಧಾನದ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು, ಪ್ರಜಾಪ್ರಭುತ್ವವನ್ನು ಸದೃಢಗೊಳಿಸಲು ಪ್ರತಿಯೊಬ್ಬರೂ ಮತದಾನದಲ್ಲಿ ಭಾಗವಹಿಸುವುದು ಮಾತ್ರವಲ್ಲ, ಅದರೊಂದಿಗೆ ಸರಿಯಾದ ನಿರ್ಣಯಗಳನ್ನು ತೆಗೆದುಕೊಳ್ಳುವುದು ಅಗತ್ಯವೆಂದರು.

ಕೋವಿಡ್-19 ಹಿನ್ನೆಲೆಯಲ್ಲಿ ಈ ವರ್ಷ ಯುವ ಮತದಾರರನ್ನು ಮತದಾರರ ಪಟ್ಟಿಗೆ ಸೇರಿಸಲು ವಾಡಿಕೆಗಿಂತ ಕಡಿಮೆ ಪ್ರಮಾಣದಲ್ಲಾಗಿದೆ ಎಂದರು. ಅಲ್ಲದೇ, ಮನೆ-ಮನೆಗೆ ತೆರಳಿ, 18 ವರ್ಷ ತುಂಬಿದ ಯುವ ಮತದಾರರನ್ನು ಪಟ್ಟಿಗೆ ಸೇರಿಸುವ ಜವಾಬ್ದಾರಿಯು ಬೂತ್ ಮಟ್ಟದ ಅಧಿಕಾರಿಗಳ ಮೇಲೆ ಇದೆ ಎಂದು ಹೇಳಿದರು. ಯುವ ಮತದಾರರು ಚುನಾವಣಾ ಭಾಗವಹಿಸುವಿಕೆಯಲ್ಲಿ ಸರಿಯಾದ ನಿರ್ದಿಷ್ಟ ನಿರ್ಣಯ ಕೈಗೊಳ್ಳಲು ಅವರಿಗೆ ಅರಿವು ಮೂಡಿಸಬೇಕು ಎಂದು ಅಭಿಪ್ರಾಯಪಟ್ಟರು.

ಇದೇ ಸಂದರ್ಭದಲ್ಲಿ ಮತದಾರರ ದಿನಾಚರಣೆ ಅಂಗವಾಗಿ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿ, ಚುನಾವಣೆ ಕುರಿತು ಜಾಗೃತಿ ಹಾಗೂ ಉತ್ತಮವಾಗಿ ಕಾರ್ಯನಿರ್ವಹಿಸಿದ ಮತಗಟ್ಟೆ ಅಧಿಕಾರಿಗಳಿಗೆ ಪ್ರಶಸ್ತಿ ಪ್ರಮಾಣಪತ್ರವನ್ನು ಪ್ರಾದೇಶಿಕ ಆಯುಕ್ತರಾದ ಡಾ.ಎನ್.ವಿ.ಪ್ರಸಾದ್ ಅವರು ವಿತರಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ವಿವಿಧ ಪ್ರಬಂಧ, ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಶಸ್ತಿ ಹಾಗೂ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ನೆರವಾಗುವು ಪುಸ್ತಕಗಳನ್ನು ನೀಡಲಾಯಿತು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪಿ.ರಾಜಾ, ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ, ಸಹಾಯಕ ಆಯುಕ್ತರಾದ ಬಲರಾಮ ಲಮಾಣಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಭಾಸ್ಕರ್, ನೌಕರರ ಸಂಘದ ಜಿಲ್ಲಾಧ್ಯಕ್ಷ ರಾಜು ಲೇಂಗಂಟಿ, ಶಿಕ್ಷಣ ಇಲಾಖೆಯ ಅಧಿಕಾರಿ ಮಾರುತಿ ಹುಜರಾತಿ ಸೇರಿದಂತೆ ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು, ಜಿಲ್ಲಾ ಹಾಗೂ ತಾಲೂಕು ಮಟ್ಟದ ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here