ಕಲಬುರಗಿ: ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ರಸ್ತೆ ಸುರಕ್ಷತೆ ಮಾಸಾಚರಣೆ (ಜನವರಿ 18 ರಿಂದ ಫೆಬ್ರವರಿ 17ರವರೆಗೆ “ರಸ್ತೆ ಸುರಕ್ಷತೆ-ಜೀವನ ರಕ್ಷೆ”) ಅಂಗವಾಗಿ ಸಂಚಾರಿ ಗ್ರಂಥಾಲಯ ವಾಹನ ಉದ್ಘಾಟನೆ, ಬೀದರ ಜಿಲ್ಲಾಡಳಿತದಿಂದ ಕೊಡುಗೆ ನೀಡಿದ ಸಂಚಾರಿ ಸಭಾ ವಾಹನಗಳ ಉದ್ಘಾಟನೆ, ಪಿಸಿಆರ್‍ಎ ಪುರಸ್ಕಾರ ಪ್ರಧಾನ, ಅಪಘಾತರಹಿತ ಸೇವೆ ಸಲ್ಲಿಸಿ 2019-20ನೇ ಸಾಲಿನಲ್ಲಿ ನಿವೃತ್ತರಾದ ಚಾಲಕರ ಸನ್ಮಾನ, ಸಾರಿಗೆ ಸದನದ ನಗರ ಸಾರಿಗೆ ಬಸ್ ನಿಲ್ದಾಣದ ಮುಖಾಂತರ ವಾಹನಗಳ ಕಾರ್ಯಾಚರಣೆ ಹಾಗೂ ಸೇವಾ ಸಿಂಧು ಮುಖಾಂತರ ವಿದ್ಯಾರ್ಥಿಗಳಿಗೆ ಪಾಸ್ ವಿತರಣೆ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭವನ್ನು ಇದೇ ಜನವರಿ 27 ರಂದು ಬೆಳಿಗ್ಗೆ 11 ಗಂಟೆಗೆ ಕಲಬುರಗಿ ಕೇಂದ್ರ ಬಸ್ ನಿಲ್ದಾಣದಲ್ಲಿ ಏರ್ಪಡಿಸಲಾಗಿದೆ.
ಉಪಮುಖ್ಯಮಂತ್ರಿಗಳು ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸಂಗಪ್ಪ ಸವದಿ, ರಾಜ್ಯದ ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಎಂ. ಕಾರಜೋಳ ಹಾಗೂ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಹಾಗೂ ಸಕಾಲ ಸಚಿವರಾದ ಎಸ್. ಸುರೇಶಕುಮಾರ ಅವರ ಘನ ಉಪಸ್ಥಿತಿಯಲ್ಲಿ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ ಅವರು ಸಂಚಾರಿ ಗ್ರಂಥಾಲಯವನ್ನು ಉದ್ಘಾಟಿಸುವರು. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ಕಲಬುರಗಿ ದಕ್ಷಿಣ ಶಾಸಕ ದತ್ತಾತ್ರೇಯ ಸಿ. ಪಾಟೀಲ್ ರೇವೂರ ಅವರು ಸಮಾರಂಭದ ಅಧ್ಯಕ್ಷತೆವಹಿಸಿ ಸಂಚಾರಿ ಸಭಾ ವಾಹನವನ್ನು ಉದ್ಘಾಟಿಸುವರು.
ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕ ಹಾಗೂ ಜೇವರ್ಗಿ ಶಾಸಕ ಡಾ. ಅಜಯಸಿಂಗ್, ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ ಕೃಷಿ ಹಾಗೂ ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ. ಬಸವರಾಜ ಪಾಟೀಲ್ ಸೇಡಂ, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹಣಮಂತರಾಯ ಮಲಾಜಿ, ಲೋಕಸಭಾ ಸದಸ್ಯರಾದ ಡಾ. ಉಮೇಶ ಜಿ. ಜಾಧವ, ಭಗವಂತ ಖೂಬಾ ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ವಿಧಾನಸಭೆ ಶಾಸಕರುಗಳಾದ ಪ್ರಿಯಾಂಕ ಖರ್ಗೆ, ಎಂ.ವೈ.ಪಾಟೀಲ, ಖನೀಜ್ ಫಾತೀಮಾ, ಬಸವರಾಜ ಮತ್ತಿಮಡು, ಸುಭಾಷ ಆರ್. ಗುತ್ತೇದಾರ, ಡಾ. ಅವಿನಾಶ ಉಮೇಶ ಜಾಧವ, ವಿಧಾನ ಪರಿಷತ್ ಶಾಸಕರುಗಳಾದ ಸುನೀಲ್ ವಲ್ಲ್ಯಾಪುರೆ, ಬಿ.ಜಿ.ಪಾಟೀಲ, ಶಶೀಲ ಜಿ. ನಮೋಶಿ, ಡಾ. ಚಂದ್ರಶೇಖರ ಪಾಟೀಲ, ಡಾ. ಸಾಯಿಬಣ್ಣ ತಳವಾರ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತ ಅಧ್ಯಕ್ಷ ಚಂದು ಪಾಟೀಲ, ಕಲಬುರಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾನಂದ ಧಾರವಾಡಕರ್, ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ, ಕಲಬುರಗಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಅಪ್ಪು ಕಣಕಿ, ತಾಲ್ಲೂಕು ಪಂಚಾಯತ್ ಅಧ್ಯಕ್ಷ ಶಿವರಾಜ ಸಜ್ಜನ ಹಾಗೂ ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ(ನಾಮನಿರ್ದೇಶಿತ) ಮಂಡಳಿ ನಿರ್ದೇಶಕ ಮಲ್ಲಿಕಾರ್ಜುನ್ ತಡಕಲ್ ಅತಿಥಿಗಳಾಗಿ ಪಾಲ್ಗೊಳ್ಳುವರು.
ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿ ಡಾ. ಎನ್.ವಿ. ಪ್ರಸಾದ, ಈಶಾನ್ಯ ವಲಯದ ಪೊಲೀಸ್ ಮಹಾ ನಿರೀಕ್ಷಕ ಮನೀಷ್ ಖರ್ಬಿಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸಿಮಿ ಮರಿಯಮ್ ಜಾರ್ಜ್, ಜೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ರಾಹುಲ್ ಪಾಂಡ್ವೆ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರು ಉಪಸ್ಥಿತರಿದ್ದರು.