ಬಿಸಿ ಬಿಸಿ ಸುದ್ದಿ

ಸಂವಿಧಾನದ ಪೀಠಿಕೆ ಹಂಚಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಸಂವಿಧಾನದ ಮೂಲ ಆಶಯಗಳ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ವತಿಯಿಂದ ಇಂದು ವಿಧಾನಸೌಧಧ ಎದುರು ಸಂವಿಧಾನಶಿಲ್ಪಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ವೇಷಧಾರಿಯಾಗಿ ಸಂವಿಧಾನದ ಪೀಠಿಕೆಯ ಪ್ರತಿ ಹಾಗೂ ಮಾಸ್ಕ್‌ ಮತ್ತು ಸ್ಯಾನಿಟೈಸರ್‌ ವಿತರಿಸಿ ಗಣರಾಜ್ಯೋತ್ಸವವನ್ನು ವಿಶೇಷವಾಗಿ ಆಚರಿಸಲಾಯಿತು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷರಾದ ಡಾ.ಸಿ.ಎಸ್‌ ರಘು ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ಈ ಕಾರ್ಯಕ್ರಮದಲ್ಲಿ ಪೊಲೀಸರು ಹಾಗೂ ಸಾರ್ವಜನಿಕರಿಗೆ ವಿತರಣೆಯನ್ನು ಮಾಡಲಾಯಿತು. ನಂತರ ಮಾತನಾಡಿದ ಅವರು ಸಂವಿಧಾನದ ಮೂಲ ಆಶಯಗಳನ್ನು ನಾವು ಮರೆಯುತ್ತಿದ್ದೇವೆ ಎನ್ನಿಸುತ್ತಿದೆ.

ಈ ನಿಟ್ಟಿನಲ್ಲಿ ಜನರಲ್ಲಿ ಡಾ.ಬಿ.ಆರ್‌ ಅಂಬೇಡ್ಕರ್‌ ಅವರ ಸಂವಿಧಾನದ ಪ್ರತಿಗಳನ್ನು ನೀಡುವ ಉದ್ದೇಶದಿಂದ ನಾವು ಸಂವಿಧಾನದ ಪೀಠಿಕೆಯ ಪ್ರತಿಗಳು ಹಾಗೂ ಸ್ಯಾನಿಟೈಸರ್‌ ಮತ್ತು ಮಾಸ್ಕ್‌ಗಳನ್ನು ವಿತರಿಸಿದ್ದೇವೆ. ಸಂವಿಧಾನ ಸಂರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ ಎನ್ನುವ ಜನಜಾಗೃತಿಯ ಅಭಿಯಾನವನ್ನು ಹಮ್ಮಿಕೊಂಡಿದ್ದೇವೆ ಎಂದು ಹೇಳಿದರು.

emedialine

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

7 mins ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

2 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

9 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

9 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

10 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

20 hours ago