ಬಿಸಿ ಬಿಸಿ ಸುದ್ದಿ

ದೇಶಕ್ಕಾಗಿ ಬದುಕನ್ನೇ ತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತ- ಲೋಹಿತ್ ಕಟ್ಟಿ

ಶಹಾಬಾದ:ದೇಶಕ್ಕಾಗಿಯೇ ತಮ್ಮ ಬದುಕನ್ನೇ ತ್ಯಾಗ ಮಾಡಿದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಪ್ರತಿಮ ದೇಶಭಕ್ತ ಎಂದು ಸಾಮಾಜಿಕ ಕಾರ್ಯಕರ್ತ ಲೋಹಿತ್ ಕಟ್ಟಿ ಹೇಳಿದರು.

ಅವರು ಮಂಗಳವಾರ ನಗರದ ಕನ್ನಡ ಭವನದಲ್ಲಿ ಕನಕ ಜಾಗೃತ ಸಮಿತಿ ಹಾಗೂ ಕಸಾಪ ಕಲಬುರಗಿ ಗ್ರಾಮೀಣ ವತಿಯಿಂದ ಆಯೋಜಿಸಲಾದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ ಪುಣ್ಯಸ್ಮರಣೆ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ರಾಯಣ್ಣ ಹೆಸರು ಕೇಳಿದರೆ ದೇಶದ ಪ್ರತಿಯೊಬ್ಬ ಯುವಕರ ದೇಹದಲ್ಲಿ ವಿದ್ಯುತ್ ಸಂಚಲನವಾಗುತ್ತದೆ.ಕಾರಣ ಸ್ವಾತಂತ್ರ್ಯಕ್ಕಾಗಿ ತನ್ನ ಜೀವನವನ್ನೇ ಮುಡುಪಾಗಿಟ್ಟಿದ್ದರು.ಬ್ರಿಟಿಷರ ತೆರಿಗೆ ಪದ್ಧತಿಯನ್ನು ವಿರೋಧಿಸಿ ೧೮೫೭ರ ಕ್ರಾಂತಿಗಿಂತ ಮುಂಚೆ ಇಡೀ ದೇಶದಲ್ಲಿ ಸ್ವಾತಂತ್ರ್ಯಗೋಸ್ಕರ್ ಬ್ರಿಟಿಷರ ವಿರುದ್ಧ ತೊಡೆತಟ್ಟಿ ನಿಂತ ಪ್ರಪ್ರಥಮ ಕನ್ನಡಿಗ ಸೇನಾನಿ ಸಂಗೊಳ್ಳಿ ರಾಯಣ್ಣ.ಅಂದು ಹಣದ ಆಸೆಗಾಗಿ, ಭೂಮಿಯ ಆಸೆಗಾಗಿ ರಾಯಣ್ಣನಿಗೆ ನಮ್ಮವರೇ ಮೋಸ ಮಾಡಿ ಬ್ರಿಟಿಷರಿಗೆ ಹಿಡಿದುಕೊಟ್ಟಿರಬಹುದು ಆದರೆ ತಾಯಿ ಭಾರತ ಮಾತೆ ರಾಯಣ್ಣನಿಗೆ ಮೋಸ ಮಾಡಲಿಲ್ಲ. ಏಕೆಂದರೆ ರಾಯಣ್ಣ ಹುಟ್ಟಿದ್ದು ಆಗಸ್ಟ ೧೫ರಂದು ಅಂದು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕ ದಿನ.ರಾಯಣ್ಣನನ್ನು ಬ್ರಿಟಿಷರು ನೇಣಿಗೇರಿಸಿದ್ದು ಜನೇವರಿ ೨೬ ರಂದು ಅಂದು ನಮ್ಮ ರಾಷ್ಟç ಗಣರಾಜ್ಯವಾದ ದಿನ. ರಾಯಣ್ಣ ಧೈರ್ಯ, ಸಾಹಸ, ದೇಶಭಕ್ತಿಯ ಮೂಲಕ ಬ್ರಿಟಿಷರ ಎದೆ ನಡುಗಿಸಿದ್ದ ವೀರ.ಕಿತ್ತೂರು ರಾಣಿ ಚೆನ್ನಮ್ಮರ ಬೆನ್ನೆಲುಬಾಗಿ ತಾಯ್ನಾಡಿಗಾಗಿ ಜೀವ ನೀಡಿದ ಅಪ್ರತಿಮ ದೇಶ ಭಕ್ತ.ಸ್ವಾತಂತ್ರ್ಯದ ಕಿಚ್ಚು ಹಚ್ಚಿದ ವೀರ ರಾಯಣ್ಣ ಜನೇವರಿ ೨೬ರಂದು ಬ್ರಿಟಿಷರು ಗಲ್ಲಿಗೇರಿಸಿದ್ದರು.ಅವರ ಸ್ಮರಣಾರ್ಥ ಈ ದಿನ ಆಚರಿಸಲಾಗುತ್ತಿದೆ ಎಂದರು.

ಕಸಾಪ ಕಲಬುರಗಿ ಗ್ರಾಮೀಣ ಅಧ್ಯಕ್ಷ ಶರಣಗೌಡ ಪಾಟೀಲ, ಕಸಾಪ ನಗರಾಧ್ಯಕ್ಷ ಮಲ್ಲಿಕಾರ್ಜುನ ಪೂಜಾರಿ, ಹಿರಿಯರಾದ ಮರಲಿಂಗ ಕಮರಡಗಿ,ಶಾಂತಪ್ಪ ಹಡಪದ, ವಾಸಿಮ್ ಇನಾಮದಾರ, ಗ್ರಂಥಾಲಯ ಅಧಿಕಾರಿ ಬಸಮ್ಮ ಪಾಟೀಲ, ಮೇಲ್ವಿಚಾರಕಿ ಜಗದೇವಿ ಹಿರೇಮಠ, ಸಂತೋಷ ದೊಡ್ಡಮನಿ, ಮಲ್ಲಿನಾಥ ಪಾಟೀಲ, ರಮೇಶ ಜೋಗದನಕರ್,ಬಸವರಾಜ ಕೊಳಕೂರ,ಶಿವಲಿಂಗಪ್ಪ, ರವಿ ಬೆಳಮಗಿ,ಅರುಣ ಜಾಯಿ,ರಾಜು ಕುಂಬಾರ, ಶಿವಾನಂದ ಪೂಜಾರಿ ಇತರರು ಇದ್ದರು.

emedia line

Recent Posts

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

10 hours ago

ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು: ಕಾರ್ಯಕರ್ತರಿಂದ ವಿಜಯೋತ್ಸವ

ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…

13 hours ago

ಸಿದ್ದಸಿರಿ ಹೋರಾಟ ಪ್ರಾಯೋಜಿತ: ಶರಣು ಪಾಟೀಲ್

ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…

19 hours ago

ಸಿದ್ದ ಶ್ರೀ ಕಾರ್ಖಾನೆ ಪ್ರಾರಂಭವಾಗುವರೆಗೂ ಹೋರಾಟ: ವೀರಣ್ಣ ಗಂಗಾಣಿ

ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…

19 hours ago

ದಕ್ಷಿಣ ಭಾರತ ಅಂತರ ವಿಶ್ವವಿದ್ಯಾಲಯ ಮಹಿಳೆಯರ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ

ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…

20 hours ago

ಪ್ರಿಯಾಂಕ್ ಖರ್ಗೆ ಜನ್ಮದಿನ; ರಕ್ತದಾನ ಶಿಬಿರಕ್ಕೆ ಶಾಸಕ ಪಾಟೀಲ ಚಾಲನೆ

ಕಲಬುರಗಿ: ನಗರದ ವಾರ್ಡ ನಂ.51.ರ  ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…

1 day ago