ಕಲಬುರಗಿ: ದೇಶದಲ್ಲಿ ಇಂದು ನಡೆಯುತ್ತಿರುವ ಹೋರಾಟವು 2ನೇ ಸ್ವಾತಂತ್ರ್ಯ ಹೋರಾಟದಂತಾಗಿದೆ. ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ರೈತ ವಿರೋಧಿಯಾಗಿವೆ. ಬಂಡವಾಳಶಾಹಿಗಳ ಪರವಾಗಿರುವ ಈ ಸರ್ಕಾರಗಳು ರೈತವಿರೋಧಿ ನೀತಿಯನ್ನು ಅನುಸರಿಸುತ್ತಿವೆ. ಬಂಡವಾಳಶಾಹಿಗಳಿಗೆ ಅನುಕೂಲಕ್ಕಾಗಿ ಕೆಲಸ ಮಾಡುತ್ತಿವೆ. ರೈತರ ಹೆಸರಿನ ಮೇಲೆ ಶಾಲು ಹಾಕಿಕೊಂಡು ರೈತವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದು ರೈತರ ಬಗ್ಗೆ ಮಾತನಾಡಲು ಬಿಜೆಪಿ ಸರ್ಕಾರಕ್ಕೆ ಯಾವುದೇ ನೈತಿಕತೆಯಲ್ಲ. ರೈತರ ಕಾಳಜಿ ಬೇಕಾಗಿದ್ದರೆ ಕೂಡಲೇ ಮೂರು ಕೃಷಿಮಮಸೂದೆಗಳನ್ನು ಹಿಂಪಡೆಯಬೇಕೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ, ಜೇವರ್ಗಿ ಶಾಸಕ ಡಾ. ಅಜಯ್ ಸಿಂಗ್ ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಮಂಗಳವಾರ ನಡೆದ ಕಿಸಾನ್ ಸಂಯುಕ್ತ ರಂಗದ ಟ್ರಾಕ್ಟರ್ ಪರೇಡ್, ಜನತಾ ಪರೇಡ್‍ನಲ್ಲಿ ಇಡೀ ದಿನ ಪಾಲ್ಗೊಂಡು ಮಾತನಾಡಿದ ಅವರು ರೈತರ ಹೆಸರಲ್ಲಿ ಮೊಸಳೆ ಕಣ್ಣೀರು ಹಾಕಿದರೆ ಸಾಲದು. ನಿಜವಾಗಿಯೂ ರೈತರಿಗೆ ನೆರವು ನೀಡಬಲ್ಲಂತಹ ಕಾಯಿದೆಗಳನ್ನು ಜಾರಿಗೆ ತರಬೇಕು. ಏಕಮುಖವಾಗಿ ಕಾಯಿದೆ ಜಾರಿಗೆ ತರದೆ, ಸದನದಲ್ಲಿ ಚರ್ಚಿಸಿ, ಲೋಕ ತಂತ್ರ ಪದ್ಧತಿಯಂತೆಯೇ ಕಾನೂನು ಜಾರಿಗೊಳ್ಳಬೇಕು. ಂದಾಗ ಮಾತ್ರ ರೈತರ ನಿಜವಾದ ಕಲ್ಯಾಣವಾಗುತ್ತದೆ ಎಂದು ಹೇಳಿದ್ದಾರೆ.
ನೆಹರು ಗಂಜ್‍ನಲ್ಲಿಯೇ ಟ್ರಾಕ್ಟರ್ ಹತ್ತಿದ ಡಾ. ಅಜಯ್ ಸಿಂಗ್ ಅಲ್ಲಿಂದ ಸರ್ದಾರ್ ಪಟೇಲ್ ವೃತ್ತ, ಡಿಸಿ ಕಚೇರಿವರೆಗಿನ ಟ್ರಾಕ್ಟರ್ ರ್ಯಾಲಿ, ಜನತಾ ಪರೇಡ್‍ನಲ್ಲಿ ಎಲ್ಲಾ ರೈತ ಹೋರಾಟಗಾರರು, ಕಾಂಗ್ರೆಸ್ ಮುಖಂಡರುಗಳ ಜೊತೆ 4 ಗಂಟೆಗಳ ಕಾಲ ಪಾಲ್ಗೊಂಡಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…