ಸುರಪುರ: ನಗರಸಭೆ ವತಿಯಿಂದ ೭೨ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು,ಮಹಾತ್ಮ ಗಾಂಧಿ ವೃತ್ತ ಮತ್ತು ನಗರಸಭೆ ಆವರಣದಲ್ಲಿ ಹಮ್ಮಿಕೊಂಡಿದ್ದ ಪ್ರಜಾರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅಧ್ಯಕ್ಷೆ ಸುಜಾತಾ ಜೇವರ್ಗಿ ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಉಪನ್ಯಾಸಕರಾದ ವೇಣುಗೋಪಾಲ ಜೇವರ್ಗಿಯವರುಮಾತನಾಡಿ, ಭಾರತಕ್ಕೆ ಬೇಕಾದ ಎಲ್ಲ ಅಂಶಗಳನ್ನು ಹೊಂದಿರುವಂತ ಶ್ರೇಷ್ಠ ಸಂವಿಧಾನವನ್ನು ಕೊಡುಗೆಯಾಗಿ ಡಾ. ಬಿ.ಆರ್. ಅಂಬೇಡ್ಕರ್ ನೀಡಿದ್ದಾರೆ. ದಲಿತರು ಅನುಭವಿಸುತ್ತಿರುವ ಸೌಲಭ್ಯಗಳು ಅಂಬೇಡ್ಕರ್ ಕೊಡುಗೆ ಎಂದರು. ಭಾರತ ಸ್ವಾತಂತ್ರ್ಯ ಪೂರ್ವದಲ್ಲಿ ೫೬೫ ಆರಸೊತ್ತಿಗೆಗಳು ಇದ್ದವು. ಸ್ವತಂತ್ರ ಬಂದ ನಂತರ ಅರಸೊತ್ತಿಗೆಗಳನ್ನು ಸದ್ದುಗೊಳಿಸಿ ಜನರ ಆಳ್ವಿಕೆ ಬಂದಿತು. ಸಂವಿಧಾನ ಜಾರಿ ಮತ್ತು ವಿವಿಧ ಗಣಗಳು ಸೇರಿ ಒಕ್ಕೂಟ ರಾಷ್ಟ್ರ ನಿರ್ಮಾಣವಾಯಿತು ಎಂದರು.
ನಗರಸಭೆ ಉಪಾಧ್ಯಕ್ಷ ಮಹೇಶ್ ಪಾಟೀಲ್, ಸದಸ್ಯರಾದ ವೇಣುಮಾಧವನಾಯಕ, ನರಸಿಂಹಕಾಂತ ಪಂಚಮಗಿರಿ, ಮಾನಪ್ಪ ಚಳ್ಳಿಗಿಡ, ಸೋಮನಾಥ ಡೊಣ್ಣಿಗೇರಿ, ಬಸವರಾಜ್ ಕೊಡೇಕಲ್, ಅಯ್ಯಪ್ಪ ಕುರಬರಗಲ್ಲಿ, ಜುಮ್ಮಣ್ಣ, ಕಮರುದ್ದೀನ್, ಮೈಬೂಬ್, ಶಕೀಲ್, ಶಿವಕುಮಾರ ಕಟ್ಟಿಮನಿ, ಮಹಮದ್ ಗೌಸ್, ಪೌರಾಯುಕ್ತ ಜೀವನ್ ಕಟ್ಟಿಮನಿ, ವ್ಯವಸ್ಥಾಪಕ ಯಲ್ಲಪ್ಪನಾಯಕ ಡೊಣ್ಣಿಗೇರಿ, ಪ್ರಭಾರಿ ಎಇಇ ಶಿವರಾಜ್ ಹಾಗೂ ನಗರಸಭೆ ಸಿಬ್ಬಂದಿ ಇದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…