ಸುರಪುರ: ನಗರದ ತಹಸೀಲ್ ಕಚೇರಿಯಲ್ಲಿ ಸರಳವಾಗಿ ೭೨ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.ಬೆಳಿಗ್ಗೆ ೮ ಗಂಟೆಗೆ ತಹಸೀಲ್ದಾರ್ ಸುಬ್ಬಣ್ಣ ಜಮಖಂಡಿಯವರು ಮಹಾತ್ಮಗಾಂಧಿ ಹಾಗು ಸಂವಿಧಾನ ಶಿಲ್ಪಿ ಡಾ:ಬಾಬಾ ಸಾಹೇಬ್ ಅಂಬೇಡ್ಕರರ ಬಾವಚಿತ್ರಗಳಿಗೆ ಪೂಜೆ ಸಲ್ಲಿಸಿ ನಂತರ ಧ್ವಜಾರೋಹಣವನ್ನು ನೆರವೇರಿಸಿದರು.ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಗುರುಬಸಪ್ಪ ಸಿರಸ್ತೆದಾರ ಕೊಂಡಲ್ ನಾಯಕ ಎಎಸ್ಐ ಬಾಗಣ್ಣ ಸೇರಿದಂತೆ ಎಲ್ಲಾ ಸಿಬ್ಬಂದಿಗಳು ಹಾಗು ಪೊಲೀಸ್ ಸಿಬ್ಬಂದಿಗಳಿದ್ದರು.