ಕಲಬುರಗಿ: ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಗಣರಾಜ್ಯೋತ್ಸವ ದಿನದ ಅಂಗವಾಗಿ ಇಂದು ಕಲಬುರಗಿಯಲ್ಲಿ ಸಂಯುಕ್ತ ಕಿಸಾನ್ ಮೋರ್ಚಾದಿಂದ ಪ್ರತಿಭಟನೆ ನಡೆಯಿತು.
ನಗರದ ಗಂಜ್ ಪ್ರದೇಶದ ಮಾರ್ಗವಾಗಿ ಆರಂಭವಾದ ಜನತಾ ಪರೇಡ್ ಸುಪರ್ ಮಾರ್ಕೆಟ್ ಮಾರ್ಗವಾಗಿ ಜಗತ್ ವೃತಕ್ಕೆ ತಲುಪಿತು.ಪರೇಡ್ ನಲ್ಲಿ ಕಲಬುರಗಿ ಉತ್ತರ ಮತಕ್ಷೇತ್ರದ ಶಾಸಕಿ ಕನಿಜ್ ಫಾತೀಮಾ, ಸಾಹಿತಿ ಹಾಗೂ ಮಹಿಳಾ ಹೋರಾಟಗಾರ್ತಿ ಕೆ ನೀಲಾ, ಸಿಪಿಐಎಂ ಜಿಲ್ಲಾ ಕಾರ್ಯದರ್ಶಿ ಶರಣಬಸಪ್ಪ ಮಮಶೇಟಿ, ಮಾಜಿ ವಿಧಾನ ಪರಿಷತ್ ಸದಸ್ಯ ಅಲ್ಲಮಪ್ರಭು ಪಾಟೀಲ್, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಜಗದೇವ್ ಗುತ್ತೇದಾರ್, ಮಜಹರ್ ಆ ಖಾನ್ ಸೇರಿದಂತೆ ಮುಂತಾದವರು ಇದ್ದರು.
ಪರೇಡ್ ನಲ್ಲಿ 300 ಕ್ಕೂ ಹೆಚ್ಚು ಟ್ರಾಕ್ಟರ್ ಭಾಗವಹಿಸಿದ್ದು, ಹೋರಾಟದ ನೇತೃತ್ವ ವಹಿಸಿದ ಮುಖಂಡರೆಲ್ಲರು ಪಾದ ಯಾತ್ರೆ ನಡೆಸುವ ಮೂಲಕ ರೈತ ವಿರೋಧಿ ಕಾನೂನುಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಜನತಾ ಪರೇಡ್ ಉದ್ದೇಶಿ, ಶಾಸಕಿ ಕನಿಜ್ ಫಾತೀಮಾ, ಶಾಸಕ ಅಜಯಸಿಂಗ್, ಮಾಜಿ ಶಾಸಕ ಬಿಆರ್ ಪಾಟೀಲ್, ಕೆ ನೀಲಾ, ಸಿಪಿಐಎಂ ಮುಖಂಡ ಶರಣಬಸಪ್ಪ ಮಮಶೇಟಿ, ಮಾರುತಿ ಮಾನ್ಪಡೆ ಅವರ ಪುತ್ರ ಸುನೀಲ ಮಾನಪಡೆ, ಎಐಡಿಎಸ್ಓ ಹಾಗೂ ಆರ್.ಕೆ.ಎಸ್ ಮುಖಂಡರಾದ ಎಸ್. ದಿವಾಕರ್, ಅಲ್ಲಮಪ್ರಭು ಪಾಟೀಲ್ ಸೇರಿದಂತೆ ಹಲವರು ಪ್ರತಿಭಟನೆ ಉದ್ದೇಶ ಮಾತನಾಡಿ ಪರೇಡ್ ಮುಕ್ತಾಯಗೊಳಿಸಿದರು.
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…
ಕಲಬುರಗಿ : ಒತ್ತಡದ ಬದುಕಿನಲ್ಲಿ ಸಂಗೀತ ಆಲಿಸುವುದರಿಂದ ಮಾನಸಿಕ ನೆಮ್ಮದಿ, ಶಾಂತಿ ದೊರೆಯಲು ಸಾಧ್ಯವಿದೆ. ಅನೇಕ ಜನ ಸಂಗೀತ ಕಲಾವಿದರಿಂದು…
ಕಲಬುರಗಿ; ಅಲ್ಪಸುಖಕ್ಕಾಗಿ ಯುವ ಜನತೆ ಮಾದಕ ಪದಾರ್ಥಗಳಿಗೆ ದಾಸರಾಗಿ ತಮ್ಮ ಜೀವನ ಹಾಳು ಮಾಡಿಕೊಳ್ಳಬಾರದು ಎಂದು ಜಿಲ್ಲಾ ತಂಬಾಕು ನಿಯಂತ್ರಣ…
ಸೇಡಂ (ಕಲಬುರಗಿ); ಜಿಲ್ಲೆಯ ಸೇಡಂನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನ ಕೊಡಮಾಡುವ `ಅಮ್ಮ ಪ್ರಶಸ್ತಿ’ 24ನೇ ವರ್ಷದ ಸಮಾರಂಭವು…