ಬಿಸಿ ಬಿಸಿ ಸುದ್ದಿ

ಶರಣಬಸವ ವಿವಿಯಲ್ಲಿ 72ನೇ ಗಣರಾಜ್ಯೋತ್ಸವದ ಸಂಭ್ರಮ

ಕಲಬುರಗಿ: ಶರಣಬಸವೇಶ್ವರ ಸಂಸ್ಥಾನವು ದೇಶದ ಹಿತಕ್ಕಾಗಿ ಸತತ ಹಲವು ಸೇವಾಕಾರ್ಯಗಳನ್ನು ಕೈಗೊಳ್ಳುತ್ತಾ ಬಂದಿದೆ. ಯಾವತ್ತೂ ಜನರ ಯೋಗಕ್ಷೇಮವನ್ನು ಕಾಪಾಡುತ್ತದೆ ಎಂದು ಶರಣಬಸವೇಶ್ವರ ಸಂಸ್ಥಾನದ ೮ನೇ ಪೀಠಾಧಿಪತಿ ಹಾಗೂ ಶರಣಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷರು ಮತ್ತು ಶರಣಬಸವ ವಿಶ್ವವಿದ್ಯಾಲಯದ ಕುಲಾಧಿಪತಿ ಪರಮ ಪೂಜ್ಯ ಡಾ. ಶರಣಬಸವಪ್ಪ ಅಪ್ಪ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದ ಶರಣಬಸವ ವಿಶ್ವವಿದ್ಯಾಲಯ ಆವರಣದಲ್ಲಿ ಮಂಗಳವಾರ ೭೨ನೇ ಗಣರಾಜ್ಯೋತ್ಸವ ದಿನದಂದು ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕೊಡುಗು ಜಿಲ್ಲೆ ವಿಪತ್ತಿಗೆ ಸಿಲುಕಿದಾಗ ರಾಜ್ಯದ ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ೧ಕೋಟಿ, ಕೋವಿಡ್ ಸಂದರ್ಭದಲ್ಲಿ ಹಗಲಿರುಳು ಸೇವೆ ಮಾಡಿದ್ದ ಆಶಾಕಾರ್ಯಕರ್ತರಿಗೆ ೨ ಲಕ್ಷ ಸಹಾಯ ಧನ, ಭೀಮಾ ನದಿ ಪ್ರವಾಹಕ್ಕೆ ಸಿಕ್ಕು ತತ್ತರಿಸಿದ ಜನರ ಜೀವನ ಸುಧಾರಿಸಲು ೨೦ ಲಕ್ಷ ಹಾಗೂ ಇಡೀ ದೇಶದ ಅಸ್ಮಿತೆಯಾಗಿರುವ ಅಯೋಧ್ಯೆಯ ಶ್ರೀ ರಾಮಮಂದಿರದ ನಿರ್ಮಾಣಕ್ಕೆ ೨೫ ಲಕ್ಷ ಸಮರ್ಪಿಸಲಾಗಿದೆ. ಕೊವೀಡ್ ಸಂಕಷ್ಟದ ಕಾಲದಲ್ಲಿ ಮೊದಲಿನಿಂದಲೂ ಮಾಡಿದ್ದ ಅನ್ನದಾಸೋಹವನ್ನು ಕೂಡ ಇನ್ನೂ ಮುಂದುವರೆಸಿದ್ದು, ನೀರು ನೆರಳು ನೀಡಿ ಪಾಲಿಸಲಾಗುತ್ತಿದೆ ಎಂದರು.

ಇಡಿ ವಿಶ್ವದಲ್ಲೆ ಅತ್ಯಂತ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ನಮ್ಮದು. ಕೊವೀಡ್-೧೯ದಿಂದಾಗಿ ಇಡಿ ವಿಶ್ವವೆ ತತ್ತರಿಸಿ ಹೋದಾಗ, ಭಾರತ ದೇಶ ತನ್ನ ಆತ್ಮ ಸ್ಥೈರ್ಯದಿಂದ ಗಟ್ಟಿಯಾಗಿ ನಿಂತ ಏಕೈಕ ರಾಷ್ಟ್ರವಾಗಿರುವುದರ ಜೊತೆಗೆ ಇಡಿ ಜಗತ್ತಿಗೆ ಲಸಿಕೆಯನ್ನು ನೀಡುವಲ್ಲಿ ಯಶಸ್ವಿಯಾಗಿದೆ ಎಂದರು.

ಲಾಕ್‌ಡೌನ್ ಕಾಲದಲ್ಲಿ ವಿದ್ಯಾರ್ಥಿಗಳಿಗೆ ತಂತ್ರಜ್ಞಾನಗಳ ಮೂಲಕ ಬೋಧಿಸಿ, ವಿದ್ಯಾರ್ಥಿಗಳನ್ನು ಮಾನಸಿಕ ಸಶಕ್ತರನ್ನಾಗಿಸುತ್ತ ಬಂದಿದೆ. ಪಠ್ಯ ಚಟುವಟಿಕೆಗಳಲ್ಲಿ ತಮ್ಮ ಛಾಪು ಮೂಡಿಸಲು ಕಾರ್ಯತತ್ಪರರಾಗಿದ್ದಾರೆ. ಈ ಸಂದರ್ಭದಲ್ಲಿ ಅನೇಕ ವಿಚಾರ ಸಂಕೀರಣ (ವೇಬ್‌ನಾರ್)ಗಳನ್ನು ಹಮ್ಮಿಕೊಂಡು ಅಧ್ಯಾಪಕರು ತಾವು ಸಹ ಅಧ್ಯಯನ ಶೀಲರು ಎಂದು ಸಾಬಿತುಪಡಿಸಿದ ಶಿಕ್ಷಕ ವರ್ಗಕ್ಕೆ ಅಭಿನಂದನೆ ಸಲ್ಲಿಸಿದರು.

ಸಹೋದರಿ ಕೋಮಲ ಎಸ್ ಅಪ್ಪಾ ಮಾತನಾಡಿ, ನಮ್ಮ ದೇಶವಾಸಿಗಳಿಗೆ ಆರೋಗ್ಯ ಮತ್ತು ಸಮೃದ್ಧಿಯನ್ನು ಆಶೀರ್ವದಿಸಲಿ ಎಂದು ಶರಣಬಸವೇಶ್ವರರಲ್ಲಿ ವಿನಮ್ರವಾಗಿ ಪ್ರಾರ್ಥಿಸುತ್ತೇನೆ. ಗುಣಮಟ್ಟ ಶಿಕ್ಷಣವನ್ನು ಒದಗಿಸುವಲ್ಲಿ ಹಾಗೂ ಕಲಿಕೆಯ ಸಂದರ್ಭದಲ್ಲಿನ ಸವಾಲುಗಳನ್ನು ಅವಕಾಶವಾಗಿ ಪರಿವರ್ತಿಸುವಲ್ಲಿ ಶಿಕ್ಷಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶರಣಬಸವೇಶ್ವರ ಸಂಸ್ಥಾನ ಮುಂಚೂಣಿಯಲ್ಲಿದೆ ಎಂದರು.

ಕೊವೀಡ್ ಸಂದರ್ಭದಲ್ಲಿ ನಮ್ಮ ಶಿಕ್ಷಕರು ಆನ್‌ಲೈನ್ ತರಗತಿಗಳಲ್ಲಿ ತೊಡಗಿಸಿಕೊಂಡು ನಮ್ಮ ಕಲಿಕೆಯನ್ನು ಯಶಸ್ವಿಗೊಳಿಸಿದ್ದಾರೆ. ಯಾವದೇ ರೀತಿಯ ದೂರು ಮತ್ತು ಕೈಬರಹವಿಲ್ಲದೇ ನಮ್ಮ ಶಿಕ್ಷಕರು ತಮ್ಮ ಯೋಜನೆಗಳನ್ನು ಸುಲಭವಾಗಿ ಕಾರ್ಯಗತಗೊಳಿಸಿದ್ದಾರೆ. ಕಲಿಕೆ ಎಂದಿಗೂ ನಿಲ್ಲುವುದಿಲ್ಲ. ಅಧ್ಯಾಪಕರು ನವೀನ ಮಾರ್ಗಗಳ ಮೂಲಕ ವಿದ್ಯಾರ್ಥಿಗಳಿಗೆ ಅಗತ್ಯವಾಗಿ ಮತ್ತು ಪರಿಣಾಮಕಾರಿಯಾಗಿ ಶಿಕ್ಷಣ ನೀಡುವಲ್ಲಿ ಪ್ರಕ್ರಿಯೆ ಮುಂದುವರೆಸಿದ್ದಾರೆ. ಶಿಕ್ಷಕರ ಶೈಕ್ಷಣಿಕ ಜೀವನೋಪಾಯಗಳನ್ನು ವಿದ್ಯಾರ್ಥಿಗಳಿಗೆ ತಿಳಿಯಪಡಿಸುವುದರ ಜೊತೆಗೆ ತಂತ್ರಜ್ಞಾನದ ಸಹಾಯದಿಂದ ಬೋಧನಾ ಕೌಶಲ್ಯದಿಂದ ವಿದ್ಯಾರ್ಥಿಗಳಿಗೆ ಪರಿಷ್ಕರಿಸಿದರು ಹಾಗೂ ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ಕಲಿಯುವ ಪ್ರಕ್ರಿಯೆಯಲ್ಲಿ ತೊಡಗಲು ಸಹಕಾರಿಯಾದರು.

ಜಾಗತಿಕ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಸಹ ನಮ್ಮ ಸಂಸ್ಥಾನ ದಾಸೋಹ ಸೇವೆಯನ್ನು ಮುಂದುವರೆಸುವಲ್ಲಿ ಪೂಜ್ಯ ಅವ್ವಾಜಿಯವರ ಶ್ರಮದಾಯಕ ಪ್ರಯತ್ನಗಳಿಗೆ ಧನ್ಯವಾದ ಸಲ್ಲಿಸುತ್ತೇನೆ. ನಾವೇಲ್ಲರೂ ಪೂಜ್ಯ ಅಪ್ಪಾಜೀ ಮತ್ತು ಅವ್ವಾಜೀಯವರ ಸಲಹೆ ಸೂಚನೆಯ ಮೇರೆಗೆ ಸೇವೆ ಸಲ್ಲಿಸುತ್ತಿರುವುದು ನಮ್ಮೆಲ್ಲರ ಹೆಮ್ಮೆಯ ವಿಷಯವಾಗಿದೆ ಎಂದರು.

ಶರಣಬಸವೇಶ್ವರ ಸಂಸ್ಥಾನದ ೯ನೇ ಪೀಠಾಧಿಪತಿ ಪೂಜ್ಯ ಚಿ. ದೊಡ್ಡಪ್ಪ ಅಪ್ಪಾಜಿ, ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಚೇರ್‌ಪರ್ಸನ್ ಹಾಗೂ ಬೋರ್ಡ ಆಫ್ ಗವರ್ನರ್‌ನ ಸದಸ್ಯರಾದ ಮಾತೋಶ್ರೀ ಪೂಜ್ಯ ಡಾ. ದಾಕ್ಷಾಯಿಣಿ ಅವ್ವಾಜಿ, ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಹಾಗೂ ಶರಣಬಸವೇಶ್ವರ ವಿದ್ಯಾವರ್ಧಕ ಸಂಘ ಆಡಳಿತ ಮಂಡಳಿ ಸದಸ್ಯರಾದ ಶ್ರೀ ಬಸವರಾಜ ದೇಶಮುಖ, ವಿವಿ ಕುಲಪತಿ ಡಾ. ನಿರಂಜನ್ ವಿ. ನಿಷ್ಠಿ, ಸಮಕುಲಪತಿ ಡಾ. ವಿ.ಡಿ. ಮೈತ್ರಿ ಮತ್ತು ಎನ್.ಎಸ್.ದೇವರಕಲ್, ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಮೌಲ್ಯಮಾಪನ ಕುಲಸಚಿವ ಡಾ. ಲಿಂಗರಾಜ ಶಾಸ್ತ್ರಿ, ಡೀನ್ ಡಾ. ಲಕ್ಷ್ಮಿ ಪಾಟೀಲ ಮಾಕಾ ಮತ್ತು ಡಾ. ಬಸವರಾಜ ಮಠಪತಿ ಕುಲಸಚಿವ ಡಾ. ಅನೀಲಕುಮಾರ ಬಿಡವೆ, ಡೀನ್ ಡಾ. ಲಕ್ಷ್ಮಿ ಪಾಟೀಲ ಮಾಕಾ, ಪ್ರಾಚಾರ್ಯರಾದ ಡಾ. ಸುರೇಶ ನಂದಗಾಂವ, ಡಾ. ಎಸ್.ಜಿ. ಡೊಳ್ಳೇಗೌಡರ್, ಡಾ. ಎನ್.ಎಸ್. ಪಾಟೀಲ ಇತರರು ಇದ್ದರು. ಸಹೋದರಿ ಮಹೇಶ್ವರಿ ಎಸ್.ಅಪ್ಪಾ, ಕೋಮಲ ಎಸ್.ಅಪ್ಪಾ, ಶಿವಾನಿ ಎಸ್. ಅಪ್ಪಾ ಹಾಗೂ ಅಪೂರ್ವ ದೇಶಭಕ್ತಿಗೀತೆ ಹಾಡಿದರು. ಶಿಕ್ಷಕರಾದ ಶಂಕರಗೌಡ ಹೊಸಮನಿ ಮತ್ತು ಚಂದ್ರಕಾಂತ ಪಾಟೀಲ ನಿರೂಪಿಸಿದರು. ಈ ಸಂದರ್ಭದಲ್ಲಿ ಎನ್.ಎಸ್.ಎಸ್ ಅಧಿಕಾರಿ ಮತ್ತು ವಿದ್ಯಾರ್ಥಿಗಳಿಂದ ಪರೇಡ್ ನಡೆಸಲಾಯಿತು.

emedialine

Recent Posts

ವಕ್ಫ್ ಮಸೂದೆ ತಿದ್ದುಪಡಿಗೆ ಮುಸ್ಲೀಮ ವೈಯಕ್ತಿಕ ಕಾನೂನು ಮಂಡಳಿ ವಿರೋಧ

ಕಲಬುರಗಿ: ನ.25- ಕೇಂದ್ರ ಸರ್ಕಾರ ವಕ್ಫ್ ತಿದ್ದುಪಡಿ ಮಸೂದೆ-2024 ಜಾರಿಗೆ ತರಲು ಮುಂದಾಗಿದ್ದನ್ನು ಆಲ್ ಇಂಡಿಯಾ ಮುಸ್ಲೀಮ ವೈಯಕ್ತಿಕ ಕಾನೂನು…

3 mins ago

ಮಹಿಳಾ ಸಹಭಾಗಿತ್ವ ಇಲ್ಲದೆ ದೇಶದ ಅಭಿವೃದ್ಧಿ ಅಸಾಧ್ಯ: ಮಾತೋಶ್ರೀ ಡಾ. ಅವ್ವಾಜಿ

ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…

23 hours ago

ತೊಗರಿ ಬೆಳೆ‌ ಹಾನಿ ಪ್ರದೇಶ ವೀಕ್ಷಿಸಿದ ಶಾಸಕ ಅಲ್ಲಮಪ್ರಭು ಪಾಟೀಲ

ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…

1 day ago

ಕಷ್ಟಗಳಿಗೆ ಕುಗ್ಗದೇ ಸವಾಲಾಗಿ ಸ್ವಿಕರಿಸಿ

ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…

1 day ago

ಕಲಬುರಗಿ: ಹಾಸ್ಯ ಕಲಾವಿದ ರೇವಣಸಿದ್ಧ ಸ್ವಾಮಿ ದಂಪತಿಗೆ ಗೆಳೆಯರ ಬಳಗದಿಂದ ಸತ್ಕರಿಸಲಾಯಿತು.

ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…

1 day ago

ಸಾವಿರ ಸೀರೆ ವಿತರಿಸಿ ಸಚಿವ ಪ್ರಿಯಾಂಕ್ ಜನ್ಮದಿನ ಆಚರಣೆ

  ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…

2 days ago