ಶಹಾಪುರ: ನಗರದ ಅಭಿವೃದ್ಧಿಗಾಗಿ ಸದಾ ಬದ್ಧನಾಗಿದ್ದೇನೆ ಎಂದು ಜನಪ್ರಿಯ ಶಾಸಕ ಶರಣಬಸಪ್ಪಗೌಡ ದರ್ಶನಾಪುರ ಅವರು ಹೇಳಿದರು.
ಲೋಕೋಪಯೋಗಿ ಇಲಾಖೆ ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಇವುಗಳ ಆಶ್ರಯದಲ್ಲಿ ಶಹಾಪುರ ನಗರದ 2018-19. ನೇ ಸಾಲಿನ ಎಚ್ಕೆಆರ್ಡಿಬಿ ಯೋಜನೆಯಡಿಯಲ್ಲಿ ಶಹಾಪುರದ ಲಕ್ಷ್ಮಿ ನಗರದಿಂದ ಹಾಲಬಾವಿ ರಸ್ತೆಗೆ ಸೇತುವೆ ಲೋಕಾರ್ಪಣೆ ಮಾಡಿ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಎಚ್ಕೆಡಿಬಿಯಿಂದ ನಗರ ಅಭಿವೃದ್ಧಿಗೆ 5 ಕೋಟಿ ಕುಡಿಯುವ ನೀರಿಗಾಗಿ 185 ಕೋಟಿ ಮಂಜೂರಾಗಿದ್ದು ಕೂಡಲೇ ಕಾಮಗಾರಿ ಪ್ರಾರಂಭಿಸಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು. 125 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ನಿಗದಿತ ಸಮಯಕ್ಕಿಂತ ಮುಂಚೆ ಕೇವಲ 4 ತಿಂಗಳಲ್ಲೆ ಅಚ್ಚುಕಟ್ಟಾಗಿ ಸೇತುವೆ ನಿರ್ಮಾಣ ಮಾಡಿದ ಗುತ್ತಿಗೆದಾರರಿಗೆ ಮತ್ತು ಲೋಕೋಪಯೋಗಿ ಇಲಾಖೆಗೂ ಈ ಸಂದರ್ಭದಲ್ಲಿ ಕೃತಜ್ಞತೆ ಸಲ್ಲಿಸಿದರು.
ಕಾರ್ಯಕ್ರಮದ ಪ್ರಾರಂಭದಲ್ಲಿ ಹಿರಿಯ ಸಾಹಿತಿ ನಾಟಕಕಾರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು ಹಿರಿಯ ಸಾಹಿತಿಗಳಾದ ಶ್ರೀ ಗಿರೀಶ್ ಕಾರ್ನಾಡ್ ಅವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ಸಲ್ಲಿಸಲಾಯಿತು.
ಈ ಸಮಾರಂಭದ ವೇದಿಕೆಯ ಮೇಲೆ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರಶೇಖರ ಸಾಹು ಆರಬೋಳ, ಶಿವಮಾಂತ ಚಂದಾಪುರ, ಚನ್ನಬಸಪ್ಪ ಮೇಕಾಲೆ, ನಗರಸಭೆಯ ನೂತನ ಸದಸ್ಯರಾದ ಶಿವಕುಮಾರ್ ತಳವಾರ, ಬಸವರಾಜ ಚನ್ನೂರು,ಬಸವರಾಜ್ ಹೇರುಂಡಿ ಮಹಾದೇವಪ್ಪ ಸಾಲಿಮನಿ, ನ್ಯಾಯವಾದಿಗಳ ಚಂದ್ರಶೇಖರ ಲಿಂಗದಳ್ಳಿ, ಲೋಕೋಪಯೋಗಿ ಇಲಾಖೆಯ ಎಚ್. ಬಕ್ಕಪ್ಪ ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…