ಸುರಪುರ: ರೈತರ ನೀರಾವರಿಗೆ ಸಂಬಂಧಿಸಿದ ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಅಖಿಲ ಕರ್ನಾಟಕ ನಿಖಿಲ ಕುಮಾರಸ್ವಾಮಿ ಪ್ರಜ್ವಲ್ ರೇವಣ್ಣ ಯುವ ಒಕ್ಕೂಟದ ವತಿಯಿಂದ ನಗರದ ನಾಲ್ವಡಿ ರಾಜಾ ವೆಂಕಟಪ್ಪ ನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ಕಾರ್ಯಾಧ್ಯಕ್ಷ ವೆಂಕೋಬ ದೊರೆ ಮಾತನಾಡಿ,ಕೆಬಿಜೆಎನ್‌ಎಲ್ ವ್ಯಾಪ್ತಿಯ ಸುಮಾರು ೧೨ ವಿಧಾನಸಭಾ ಕ್ಷೇತ್ರಗಳಲ್ಲಿ ಕಾಲುವೆಗಳ ರಿಪೇರಿ ಮಾಡಿಲ್ಲ,ಅಲ್ಲದೆ ಭೀಮರಾಯನಗುಡಿ ಕೆಬಿಜೆಎನ್‌ಎಲ್ ಅಧಿಕಾರಿಗಳು ವ್ಯಾಪಕ ಭ್ರಷ್ಟಾಚಾರ ಮಾಡಿದ್ದಾರೆ.
ಇವರ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕು ಹಾಗು ಸುರಪುರ ತಾಲೂಕಿನ ಕೊನೆ ಭಾಗದ ರೈತರ ಜಮೀನುಗಳಿಗೆ ನೀರು ತಲುಪುತ್ತಿಲ್ಲ ರೈತರಿಗೆ ನೀರು ತಲುಪುವಂತೆ ಕಾಲುವೆಗಳ ದುರಸ್ಥಿಗೊಳಿಸಬೇಕು ಇಲ್ಲವಾದಲ್ಲಿ ಡಿವಿಜೆನ್ ಸಂಖ್ಯೆ ೧೦ ಕಚೇರಿ ಮುಂದೆ ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಎಚ್ಚರಿಸಿ ನಂತರ ನೀರಾವರಿ ಸಚಿವರಿಗೆ ಬರೆದ ಮನವಿಯನ್ನು ತಹಸೀಲ್ ಸಿರಸ್ತೆದಾರ ಮೂಲಕ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಉಸ್ತಾದ ವಜಾಹತ್ ಹುಸೇನ್ ಗೋಪಾಲ ಬಾಗಲಕೋಟೆ ಮಾನಯ್ಯ ದೊರೆ ಇತರರಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…