ಕಲಬುರಗಿ: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಶಾಲೆಯಿಂದ ಹೊರಗುಳಿದ 6 ರಿಂದ 14 ವರ್ಷದ ಮಕ್ಕಳ ಗಣತಿ ಕುರಿತು ಸಮೀಕ್ಷೆಯನ್ನು ಮೊಬೈಲ್ ಆ್ಯಪ್ ಮೂಲಕ ಕೈಗೊಳ್ಳಲಾಗುತ್ತಿದೆ ಕಲಬುರಗಿ ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ ಲೋಖಂಡೆ ಅವರು ತಿಳಿಸಿದ್ದಾರೆ.
ಈ ಮಕ್ಕಳ ಸಮೀಕ್ಷೆಗಾಗಿ ಕಲಬುರಗಿ ನಗರದ ಅಂಗನವಾಡಿ ಕಾರ್ಯಕರ್ತೆಯರನ್ನು ಎಲ್ಲಾ ವಾಡ್ರ್Àಗಳಿಗೆ ನಿಯೋಜಿಸಲಾಗಿದೆ. ಗಣತಿದಾರರು ತಮ್ಮ ಮನೆಗೆ ಭೇಟಿ ನೀಡಿದಾಗ ಸಾರ್ವಜನಿಕರು ಅವರಿಗೆ ಸರಿಯಾಗಿ ಮಾಹಿತಿ ನೀಡಿ ಸಹಕರಿಸಬೇಕು.
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ, ಮುಖ್ಯವಾಹಿನಿಗೆ ತರಲು ಸರ್ಕಾರವು 2020-21 ನೇ ಸಾಲಿನಲ್ಲಿ ಸಮೀಕ್ಷೆ ಕೈಗೊಳ್ಳಲು ಸೂಚಿಸಿದೆ. ಈ ಹಿನ್ನೆಲೆಯಲ್ಲಿ ಈ ಸಮೀಕ್ಷೆಯನ್ನು ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.