ಸುರಪುರ: ರಾಜ್ಯದಲ್ಲಿ ಅತೀ ಸೂಕ್ಷ್ಮ ಮತಕ್ಷೇತ್ರದಲ್ಲಿ ಒಂದಾದ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ೨೦೧೯-೨೦ರ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ನಗರದಲ್ಲಿ ಪೊಲೀಸ್ ಪಥ ಸಂಚಲನ ನಡೆಸಲಾಯಿತು.
ಬುಧವಾರ ಬೆಳಿಗ್ಗೆಯೆ ಸುರಪುರ ಮತ್ತು ರಂಗಂಪೇಟೆಯ ಜನರಿಗೆ ಪೊಲೀಸ್ ಬೂಟಿನ ಸದ್ದು ಕೇಳಿಸಿದ್ದರಿಂದ ಜನರು ರಸ್ತೆಗ ಬಂದು ನೋಡುವಂತಾಯಿತು.ನೂರಾರು ಸಂಖ್ಯೆಯ ಜಿಲ್ಲಾ ಮೀಸಲು ಪಡೆಯ ಪೊಲೀಸರು ಕೈಯಲ್ಲಿ ಬಂದೂಕು ಹಿಡಿದು ನಗರದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ನಡೆಸಿ ಚುನಾವಣೆ ಸಂದರ್ಭದಲ್ಲಿ ಯಾವುದೆ ರೀತಿಯ ಅಹಿತಕರ ಘಟನೆಗಳಿಗೆ ಪ್ರಚೋದಿಸುವವರಲ್ಲಿ ನಡುಕ ಹುಟ್ಟುವಂತೆ ಎಲ್ಲೆಡೆ ಸಂಚರಿಸಿದರು,ಅಲ್ಲದೇ ಜನ ಸಾಮಾನ್ಯರು ಮನೆಯಿಂದ ಮತದಾನ ಕೇಂದ್ರಕ್ಕೆ ಬಂದು ಮತ ಚಲಾಯಿಸಲು ಅನುವು ಮಾಡಿಕೊಡುವ ಭರವಸೆ ಮೂಡಿಸಿದರು.
ನಾಲ್ಕಕ್ಕು ಹೆಚ್ಚಿನ ವಾಹನಗಳಲ್ಲಿ ಆಗಮಿಸಿದ ಪೊಲೀಸರು ಎಲ್ಲೆಡೆ ಪಥ ಸಂಚಲನ ನಡೆಸಿದ್ದನ್ನು ಜನರು ಬೆರಗಾಗಿ ವೀಕ್ಷಿಸುತ್ತಿದ್ದರು.ಪಥ ಸಂಚಲನದಲ್ಲಿ ಡಿವಾಯ್‌ಎಸ್‌ಪಿ ಶಿವನಗೌಡ ಪಾಟೀಲ,ಸುರಪುರ ಠಾಣೆ ಪೊಲೀಸ್ ಇನ್ಸ್ಪೇಕ್ಟರ್ ಆನಂದರಾವ್ ಹಾಗು ಪಿಎಸ್‌ಐ ಸೋಮಲಿಂಗ ಒಡೆಯರ್ ಸೇರಿದಂತೆ ಹುಣಸಗಿ ಕೊಡೇಕಲ್ ಠಾಣೆಗಳ ಅಧಿಕಾರಿಗಳು ಪಥಸಂಚಲನದಲ್ಲಿದ್ದರು.
ರಾಜು ಕುಂಬಾರ
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…
ಚಿಂಚೋಳಿ: ಸಿದ್ದಶ್ರೀ ಕಾರ್ಖಾನೆ ಪ್ರಾರಂಭ ಮಾಡಲು ರೈತರು ಹಗಲು ರಾತ್ರಿ ಎನ್ನದೆ ಬಸವೇಶ್ವರ ಉತ್ತರ ಬಳಿ ಧರಣಿಯಲ್ಲಿ ಹೋರಾಟ ಮಾಡುತ್ತಿದ್ದು.…
ಕಲಬುರಗಿ: ನವೆಂಬರ್ 29 ರಿಂದ 2 ಡಿಸೇಂಬರ್ ವರೆಗೆ ತಮಿಳುನಾಡಿನ ಅಲಗಪ್ಪ ವಿಶ್ವವಿದ್ಯಾಲಯ ಕರೈಕುಡಿಯಲ್ಲಿ ನಡೆಯುವ ದಕ್ಷಿಣ ಭಾರತ ಅಂತರ…
ಕಲಬುರಗಿ: ನಗರದ ವಾರ್ಡ ನಂ.51.ರ ಜೇವರ್ಗಿ ಕಾಲೋನಿ ವಾಟರ್ ಟ್ಯಾಂಕ್ ಹತ್ತಿರದ ಉದ್ಯವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ…