ಶಹಾಪುರ: ಸಂಗೀತ,ಸಾಹಿತ್ಯ, ಸಂಸ್ಕೃತಿ,ನೃತ್ಯ ಮುಂತಾದ ಕಲೆಗಳು ಮನುಷ್ಯನ ಬೌದ್ಧಿಕ ವಿಕಾಸಕ್ಕೆ ಹಾಗೂ ಸ್ಪರ್ಧಾತ್ಮಕ ಮನೋಭಾವನೆಯ ಜೊತೆಗೆ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿವೆ ಎಂದು ಖ್ಯಾತ ಸಂಗೀತ ನಿರ್ದೇಶಕರು ಹಾಗೂ ಒಳಿತು ಮಾಡು ಮನಸ ಗೀತ ಖ್ಯಾತಿಯ ಸಾಹಿತಿ ನಮ್ ಋಷಿ ಹೇಳಿದರು.
ನಗರದ ತಾಲ್ಲೂಕು ಕನ್ನಡ ಸಾಹಿತ್ಯ ಭವನದಲ್ಲಿ ಸಗರದ ಕಲಾನಿಕೇತನ ಟ್ರಸ್ಟ್ ಸಗರ ವತಿಯಿಂದ ಹಮ್ಮಿಕೊಂಡಿರುವ ಸಂಗೀತೋತ್ಸವ ಹಾಗೂ ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ನಾಡಿನ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳನ್ನು ಗುರುತಿಸಿ ಅವರಿಗೆ ಸೂಕ್ತವಾದ ವೇದಿಕೆಯನ್ನು ಸಂಘಸಂಸ್ಥೆಗಳು ಕಲ್ಪಿಸಿಕೊಟ್ಟು ಅವರಲ್ಲಿರುವ ಪ್ರತಿಭೆಯನ್ನು ಹೆಕ್ಕಿ ತೆಗೆಯುವ ಕೆಲಸ ಸಂಘ ಸಂಸ್ಥೆಗಳು ನಿರಂತರವಾಗಿ ಮಾಡಬೇಕಾಗಿದೆ ಎಂದು ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಸಿದ್ದಲಿಂಗಣ್ಣ ಆನೇಗುಂದಿ ಹೇಳಿದರು.
ಇಂದಿನ ಯುವಜನತೆಯ ತಾಳ್ಮೆ,ಏಕಾಗ್ರತೆ,ಸ್ಮರಣಶಕ್ತಿ, ಕ್ರಿಯಾಶೀಲತೆ,ಸೃಜನಶೀಲತೆ, ಮುಂತಾದ ಪ್ರತಿಭೆಗಳು ಉದ್ದೀಪನಗೊಂಡು ಅವರು ಸಮಾಜದಲ್ಲಿ ಉತ್ತಮ ಸಂಸ್ಕಾರ ಪಡೆದು ಅತ್ಯುತ್ತಮ ಜೀವನ ನಡೆಸಲು ಸಾಧ್ಯ ಎಂದು ಜಿಲ್ಲಾ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾದ ಇಂದೂಧರ ಸಿನ್ನೂರ ಹೇಳಿದರು.
ಈ ಸಮಾರಂಭದ ವೇದಿಕೆ ಮೇಲೆ ಯುವ ಮುಖಂಡರಾದ ಬಾಪುಗೌಡ ದರ್ಶನಾಪುರ,ಖ್ಯಾತ ಹಾಸ್ಯ ಕಲಾವಿದ ಬಸವರಾಜ ಮಹಾಮನಿ,ಚುಟು ಚುಟು ಅಂತೈತಿ ಗೀತ ಖ್ಯಾತಿಯ ಶಿವು ಬೆರ್ಗಿ,ಪತ್ರಕರ್ತ ಪ್ರಕಾಶ್ ದೊರೆ,ದೇವಿಂದ್ರಪ್ಪ ತೋಟಗೇರ ಹಾಗೂ ಇತರರು ಉಪಸ್ಥಿತರಿದ್ದರು.
ನಂತರ ಜರುಗಿದ ಸಂಗೀತೋತ್ಸವ ಕಾರ್ಯಕ್ರಮದಲ್ಲಿ 18 ಕ್ಕೂ ಹೆಚ್ಚು ಕಲಾತಂಡಗಳು ಭಾಗವಹಿಸಿ ತಮ್ಮಕಲಾ ಪ್ರದರ್ಶನವನ್ನು ನೀಡಿರುವುದರ ಪೈಕಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಾಯೋಜನೆ ಪಡೆದ ರುಕ್ಮಿಣಿ ಸುರ್ವೆ ತಂಡ ಬೆಂಗಳೂರು ಸಮೂಹ ಜಾನಪದ ನೃತ್ಯ ಪ್ರದರ್ಶಿಸಿ ಜನರ ಮೆಚ್ಚುಗೆ ಪಡೆಯಿತು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…