ಸಧೃಡ ರಾಷ್ಟ್ರ ನಿರ್ಮಾಣಕ್ಕೆಮತದಾನ ಮಾಡಿ-ಸುರೇಶ ವರ್ಮಾ

0
73

ಶಹಾಬಾದ: ಜಗತ್ತಿನ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದ ಯುವಜನತೆ ಸ್ವಯಂ ಸ್ಪೂರ್ತಿಯಿಂದ ಮತದಾನದ ಮಹತ್ವ ಅರಿತುಕೊಂಡು ಅರ್ಹ ಅಭ್ಯರ್ಥಿಗೆ ಮತದಾನ ಮಾಡುವ ಮೂಲಕ ಸಧೃಡ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕೆಂದು ತಹಸೀಲ್ದಾರ ಸುರೇಶ ವರ್ಮಾ ಹೇಳಿದರು.

ಅವರು ನಗರದ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಆಯೋಜಿಸಲಾದ ೧೧ನೇ ರಾಷ್ಟ್ರೀಯ ಮತದಾರರ ದಿನಾಚರಣೆಯ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

Contact Your\'s Advertisement; 9902492681

ಪ್ರಪಂಚದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾದ ಭಾರತದಲ್ಲಿ ಇಂದಿಗೂ ಕೂಡ ಮತದಾನದ ಜಾಗೃತಿ ಮೂಡಿಸುತ್ತಿರುವದು ವಿಷಾಧದ ಸಂಗತಿಯಾಗಿದೆ ಎಂದರು. ಮತದಾನದ ಹಕ್ಕು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದ್ದು ಸಾಮಾಜಿಕ ಏಳಿಗೆಗಾಗಿ ಕಡ್ಡಾಯವಾಗಿ ಮತದಾನ ಮಾಡಿ ಯಾವುದೇ ಆಮಿಷುಗಳಿಗೆ ಒಳಗಾಗದೇ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡುವದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ. ಪ್ರಜಾಪ್ರಭುತ್ವದ ಮೂಲಭೂತ ಹಕ್ಕುಗಳನ್ನು ಜಾರಿಗೊಳಿಸುವಲ್ಲಿ ಮತದಾರರು ಸಾಕ್ಷರತೆ ಹಾಗೂ ಜಾಗೃತರಾಗಿರುವದು ಅತೀ ಮುಖ್ಯವಾಗಿದೆ.

ಈ ವರ್ಷದ ರಾಷ್ಟ್ರೀಯ ಮತದಾರರ ದಿನದ ವಿಷವೇನೆಂದರೆ, ನಮ್ಮ ದೇಶದ ಮತದರರನ್ನು ಸಬಲೀಕರಣ, ಜಾಗರೂಕ, ಸುರಕ್ಷಿತ ಮತ್ತು ಮಾಹಿತಿದಾರರನ್ನಾಗಿ ಮಾಡುವುದು. ಚುನಾವಣೆಯ ಸಮಯದಲ್ಲಿ ದೇಶದ ಮತದಾರರ ಸಕ್ರಿಯ ಭಾಗವಹಿಸುವಿಕೆಯನ್ನು ಉತ್ತೇಜಿಸುವುದು ಹಾಗೂ ಜವಾಬ್ದಾರಿಯುರ ನಾಗರಿಕರಾಗಲು ಅವರಿಗೆ ಸಹಕರಿಸುವುದು ಇಂದಿನ ರಾಷ್ಟ್ರೀಯ ಮತದಾರರ ದಿನದ ಧ್ಯೇಯವಾಗಿದೆ ಎಂದು ಹೇಳಿದರು.
ಸರಕಾರಿ ಪದವಿಪೂರ್ವ ಮಹಾವಿದ್ಯಾಲಯದ ಪ್ರಾಂಶುಪಾಲ ಎಸ್.ಎಮ್.ಪಟೇಲ್ ಅಧ್ಯಕ್ಷತೆ ವಹಿಸಿ ಮಾತನಾಡಿ,ಮತದಾನದ ಪ್ರಾಮುಖ್ಯತೆ ಮತ್ತು ಪ್ರಜೆಗಳ ಮೇಲಿರುವ ಜವಾಬ್ದಾರಿಯ ಕುರಿತು ಜಾಗೃತಿ ಮೂಡಿಸೋಣ. ಕಡ್ಡಾಯವಾಗಿ ಮತದಾನ ಮಾಡುವ ತೀರ್ಮಾನ ಕೈಗೊಳ್ಳುವ ಮೂಲಕ ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸದೃಢಗೊಳಿಸೋಣ ಎಂದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಣ ಶೃಂಗೇರಿ,ಬಸವರಾಜ ಕೊಳಕೂರ,ಸಿತಂಬರಾವ ಮೇತ್ರೆ, ಮಹಾದೇವ ಪಾಟೀಲ,ರವಿ ಚವ್ಹಾಣ, ಅಂಬಿಕಾ.ಎಸ್ ಉಪನ್ಯಾಸಕರು ಇದ್ದರು.

ಕು.ಪ್ರಮೀಳಾ ನಿರೂಪಿಸಿದರು, ಉಪನ್ಯಾಸಕ ಜಗನ್ನಾಥ ಹೊಸಮನಿ ಸ್ವಾಗತಿಸಿದರು, ಕು.ಶಿಲ್ಪಾ ವಂದಿಸಿದರು.

 

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here