100 ಮೀಟರ್ ಅಂತರದಲ್ಲಿ ತಂಬಾಕು ಅಂಗಡಿ ಇಲ್ಲದಂತೆ ನೋಡಿಕೊಳ್ಳಿ: ಡಾ. ರಾಜಶೇಖರ ಮಾಲಿ

0
46

ಕಲಬುರಗಿ: ಶಾಲಾ-ಕಾಲೇಜುಗಳ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಯಾವುದೇ ರೀತಿಯ ತಂಬಾಕು ಅಂಗಡಿಗಳು ಇಲ್ಲದಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ ಹೇಳಿದರು.

ಶುಕ್ರವಾರ ಗುಲಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಜಿಮ್ಸ್)ನಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ತಂಬಾಕು ನಿಷೇಧ ಕೋಶ ಇವರುಗಳ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಜಿಲ್ಲೆಯ ಪ್ರಾಧಿಕೃತ ಅಧಿಕಾರಿಗಳಾದ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಶಾಲಾ ಮುಖ್ಯಗುರುಗಳು, ಹಾಗೂ ಅಂಗನವಾಡಿ ಮೇಲ್ವಿಚಾರಕರಿಗೆ ಅಔಖಿPಂ-2003 ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ, ಸಾಮಥ್ರ್ಯಭಿವೃದ್ಧಿ ಹಾಗೂ ಮೇಲ್ವಿಚಾರಣೆ ಕುರಿತು ಆಯೋಜಿಸಿದ ಒಂದು ದಿನದ ಕಾರ್ಯಾಗಾರದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

Contact Your\'s Advertisement; 9902492681

ಸರ್ಕಾರಿ ಕಚೇರಿ ಸೇರಿದಂತೆ ಇನ್ಯಾವುದೇ ಕಚೇರಿಗಳಲ್ಲಿ ತಂಬಾಕು, ಧೂಮಪಾನ ಸೇವನೆ ಮಾಡುವವರ ವಿರುದ್ಧ ದಂಡ(ಫೈನ್) ವಿಧಿಸುವುದಲ್ಲದೆ ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕಾಗಿದೆ. ತಂಬಾಕು, ಧೂಮಪಾನ ಸರ್ವ ರೋಗಕ್ಕೂ ಆಹ್ವಾನ ನೀಡಿದಂತೆ. ಹೊಟ್ಟೆ, ಗಂಟಲು, ನಾಲಿಗೆ, ಗುದದ್ವಾರ ಸೇರಿದಂತೆ ದೇಹದ ನಾನಾ ಭಾಗಗಳಲ್ಲಿ ಕ್ಯಾನ್ಸರ್, ಹೃದಯಕ್ಕೆ ಸಂಬಂಧಿಸಿದ ಖಾಯಿಲೆಗಳು ಇದರಿಂದ ಹರಡುತ್ತದೆ ಎಂಬುದನ್ನು ಸಾರ್ವಜನಿಕರಿಗೆ ಅರಿವು ಮೂಡಿಸಬೇಕಿದೆ ಎಂದರು.

ಧೂಮಪಾನ ಸೇವನೆ ಮಾಡುವವರ ಜೊತೆಗೆ ಕುಳಿತವರು ರೋಗಕ್ಕೆ ತುತ್ತಾಗುತ್ತಾರೆ. ಹೀಗಾಗಿ ತಂಬಾಕು ಸೇವನೆ ಮಾಡಿದರೆ ಕಾನೂನಿನಡಿಯಲ್ಲಿ ಇರುವ ಶಿಕ್ಷೆ ಬಗ್ಗೆ, ಅಔಖಿPಂ-2003ರ ಕಾಯ್ದೆಯನ್ನು ಅನುμÁ್ಠನಗೊಳಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಜವಾಬ್ದಾರಿ ಸ್ಥಳೀಯ ಮಟ್ಟದ ಪ್ರಾಧಿಕೃತ ಅಧಿಕಾರಿಗಳದ್ದಾಗಿದೆ ಎಂದು ಅವರು ಒತ್ತಿ ಹೇಳಿದರು.

ಕಾರ್ಯಕ್ರಮ ಉದ್ಘಾಟಿಸಿದ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿ ಮಾನಪ್ಪ ಎಂ. ಕಟ್ಟಿಮನಿ ಅವರು ಮಾತನಾಡಿ, ತಂಬಾಕು ಸೇವನೆಯ ದುಷ್ಪರಿಣಾಮಗಳ ಬಗ್ಗೆ ಗ್ರಾಮೀಣ ಭಾಗದ ಜನರಿಗೆ ಅರಿವು ಮೂಡಿಸಲು ಗ್ರಾಮೀಣಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕರು ಹಾಗೂ ಮುಖ್ಯಗುರುಗಳು ಹೆಚ್ಚಿನ ಮುತುವರ್ಜಿ ವಹಿಸಿ ಕಾರ್ಯನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

ಇದೇ ವೇಳೆಯಲ್ಲಿ 2020ರ ಮೇ 21 “ವಿಶ್ವ ತಂಬಾಕು ರಹಿತ” ದಿನದ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆಯಲ್ಲಿ ಕೋವಿಡ್ ಕಾರಣ ಮನೆಯಿಂದಲೇ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿದ ಕು. ಐಶ್ವರ್ಯಗೆ 3 ಸಾವಿರ ರೂ., ದ್ವಿತೀಯ ಸ್ಥಾನ ಗಳಿಸಿದ ಕು. ದೇವಯ್ಯ ಚಂದ್ರಯ್ಯಗೆ 2 ಸಾವಿರ ರೂ. ಹಾಗೂ ತೃತೀಯ ಸ್ಥಾನ ಗಳಿಸಿದ ಅಮೃತಾಗೆ 1000 ರೂ. ಗಳ ನಗದು ಬಹುಮಾನ ವಿತರಿಸಲಾಯಿತು.

ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ಶಿವಕುಮಾರ ದೇಶಮುಖ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಎಂ.ಆರ್.ಎಂ.ಸಿ. ಆಸ್ಪತ್ರೆಯ ಮನೋರೋಗ ತಜ್ಞ ಡಾ. ನಾಮದೇವ ಚವ್ಹಾಣ, ಕಲಬುರಗಿಯ ಜಿಲ್ಲಾ ಆಸ್ಪತ್ರೆಯ ಮನಶಾಸ್ತ್ರಜ್ಞೆ ಡಾ. ರೇಣುಕಾ ಬಗಾಲೆ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿಯ ಜಿಲ್ಲಾ ಸಲಹೆಗಾರ ಡಾ. ವಿನೋದಕುಮಾರ ಬಿ.ಬಿ. ಅವರು ತಂಬಾಕು ಸೇವನೆಯಿಂದಾಗುವ ದುಷ್ಪರಿಣಾಮಗಳ ಕುರಿತು ವಿಶೇಷ ಉಪನ್ಯಾಸ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲೆಯ ಶಿಕ್ಷಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಸುಜಾತಾ ಪಾಟೀಲ ಅವರು ಸರ್ವರನ್ನು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸುಹಾಸಿನಿ, ರವಿ ಎಂ. ಪೂಜಾರಿ ಸೇರಿದಂತೆ ಮತ್ತಿತರರು ಇದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here