ಇಂಗ್ಲೀಷ್ ಅತಿಥಿ ಉಪನ್ಯಾಸಕ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

0
46

ಕಲಬುರಗಿ: ಚಿತ್ತಾಪುರ ತಾಲೂಕಿನ ಕೊಂಚೂರು (ಎಸ್.ಟಿ.) ಏಕಲವ್ಯ ಮಾದರಿ ಪದವಿಪೂರ್ವ ವಸತಿ ಕಾಲೇಜಿನಲ್ಲಿ ಖಾಲಿಯಿರುವ ಓರ್ವ ಇಂಗ್ಲೀಷ್ ಅತಿಥಿ ಉಪನ್ಯಾಸಕ ಹುದ್ದೆ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ವಸತಿ ಕಾಲೇಜಿನ ಪ್ರಾಂಶುಪಾಲರು ತಿಳಿಸಿದ್ದಾರೆ.

ವಿದ್ಯಾರ್ಥಿಗಳು ಎಂ.ಎ.ಇಂಗ್ಲೀಷ್ ಹಾಗೂ ಬಿ.ಎಡ್. ವಿದ್ಯಾರ್ಹತೆ ಹೊಂದಿರಬೇಕು. ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯೊಂದಿಗೆ ಅವಶ್ಯಕ ದಾಖಲೆಗಳನ್ನು ಲಗತ್ತಿಸಿ 2021ರ ಫೆಬ್ರವರಿ 5 ರೊಳಗಾಗಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9980276231, 9483408131 ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here