ಜನವರಿ 31 ರಿಂದ ಫೆಬ್ರವರಿ 3 ರವರೆಗೆ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ

0
82

ಕಲಬುರಗಿ: ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಅಂಗವಾಗಿ ಕಲಬುರಗಿ ಜಿಲ್ಲೆಯಾದ್ಯಂತ 2021ನೇ ಸಾಲಿನ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಇದೇ ಜನವರಿ 31 ರಿಂದ ಫೆಬ್ರವರಿ 3 ರವರೆಗೆ ನಾಲ್ಕು ದಿನಗಳ ಕಾಲ ಹಮ್ಮಿಕೊಳ್ಳಲಾಗಿದೆ. ಜಿಲ್ಲೆಯ 0-5 ವರ್ಷದೊಳಗಿನ ಒಟ್ಟು 3,39,317 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದೆ ಎಂದು ಕಲಬುರಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ರಾಜಶೇಖರ ಮಾಲಿ ಅವರು ತಿಳಿಸಿದ್ದಾರೆ.

ಪಲ್ಸ್ ಪೋಲಿಯೋ ಲಸಿಕೆ ನೀಡಲು ಜಿಲ್ಲೆಯ 5,64,894 ಮನೆಗಳಿಗೆ ಆರೋಗ್ಯ ಸಿಬ್ಬಂದಿಗಳು ಭೇಟಿ ನೀಡಲಿದ್ದು, ನಾಲ್ಕು ದಿನಗಳ ಈ ಕಾರ್ಯಕ್ರಮಕ್ಕೆ 1,490 ಬೂತ್ ರಚನೆ ಮಾಡಲಾಗಿದೆ. 129 ಟ್ರಾನ್ಸಿಟ್ ತಂಡ ಹಾಗೂ 29 ಮೊಬೈಲ್ ತಂಡಗಳನ್ನು ರಚಿಸಲಾಗಿದೆ. ಈ ಪಲ್ಸ್ ಪೋಲೀಯೋ ಕಾರ್ಯಕ್ರಮಕ್ಕಾಗಿ ಒಟ್ಟು 1,648 ತಂಡಗಳನ್ನು ರಚಿಸಲಾಗಿದ್ದು, 3,296 ಆರೋಗ್ಯ ಸಿಬ್ಬಂದಿಗಳು ಇದರಲ್ಲಿ ಕಾರ್ಯನಿರ್ವಹಿಸಲಿದ್ದಾರೆ.

Contact Your\'s Advertisement; 9902492681

ಪಲ್ಸ್ ಪೋಲಿಯೋ ಕಾರ್ಯಕ್ರಮದ ಮೇಲುಸ್ತುವಾರಿ ಕಾರ್ಯಕ್ಕಾಗಿ ಒಟ್ಟು 327 ಜನರನ್ನು ನಿಯೋಜಿಸಲಾಗಿದೆ. ಮೊದಲನೇ ದಿನ ಬೂತ ಮಟ್ಟದಲ್ಲಿ ಹಾಗೂ ಉಳಿದ ಮೂರು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ 0-5 ವರ್ಷದೊಳಗಿನ ಎಲ್ಲಾ ಮಕ್ಕಳಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಲಾಗುತ್ತದೆ.

ಎಲ್ಲ ಸಾರ್ವಜನಿಕರು ತಮ್ಮ 0-5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟು ಬಾರಿ ಪೋಲಿಯೋ ಲಸಿಕೆ ಹಾಕಿಸಿದರೂ ಮೇಲ್ಕಂಡ ದಿನಾಂಕದಂದು ತಪ್ಪದೇ ಮಕ್ಕಳನ್ನು ಲಸಿಕಾ ಕೇಂದ್ರಕ್ಕೆ ಕರೆತಂದು ಪೋಲಿಯೋ ಲಸಿಕೆ ಹಾಕಿಸಬೇಕೆಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದಲ್ಲದೇ ಈ ಕಾರ್ಯಕ್ರಮದ ಯಶಸ್ವಿಗಾಗಿ ಎಲ್ಲಾ ಸಂಬಂಧಪಟ್ಟ ಇಲಾಖೆಗಳು ಹಾಗೂ ಸಂಘ-ಸಂಸ್ಥೆಗಳು ಇದಕ್ಕೆ ಸಹಕರಿಸಬೇಕೆಂದು ಅವರು ತಿಳಿಸಿದ್ದಾರೆ.

 

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here