ಆಳಂದ: ತಾಲೂಕಿನ ಮುನ್ನಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಶನಿವಾರ ಚಾಲನೆ ನೀಡಿದರು.
೨೦ ಲಕ್ಷ.ರೂ ವೆಚ್ಚದ ಕುಡಿಯುವ ನೀರಿನ ಟ್ಯಾಂಕ್ ನಿರ್ಮಾಣ ಹಾಗೂ ೮ ಲಕ್ಷ.ರೂ ವೆಚ್ಚದ ಸಿಸಿ ರಸ್ತೆಯ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ ನೇರವೇರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮುನ್ನಹಳ್ಳಿ ಗ್ರಾಮದ ಇನ್ನುಳಿದ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುವುದು ಈಗಾಗಲೇ ಗ್ರಾಮದ ಪ್ರಮುಖ ಬೇಡಿಕೆಗಳ ಪಟ್ಟಿ ತರಿಸಿಕೊಂಡಿದ್ದು ಜನರ ಆಶಯದಂತೆ ಕೆಲಸ ನಿರ್ವಹಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಅಧ್ಯಕ್ಷೆ ಸುವರ್ಣ ಹಣಮಂತರಾವ ಮಲಾಜಿ, ಕೃಷಿ ಮತ್ತು ಕೈಗಾರಿಕಾ ಸ್ಥಾಯಿ ಸಮಿತಿ ಅಧ್ಯಕ್ಷ ಗುರುಶಾಂತ ಪಾಟೀಲ ನಿಂಬಾಳ, ಅಧಿಕಾರಿಗಳು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.