ಕಲಬುರಗಿ: ಕುಷ್ಠರೋಗದ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದೇ ಬ್ರಹ್ಮಾಸ್ತ್ರ ಎಂದು ಅರೋಗ್ಯ ಮತ್ತು ಕುಟುಂಬ ಸೇವೆಗಳ ಕಲಬುರಗಿ ವಿಭಾಗೀಯ ಜಂಟಿ ನಿರ್ದೇಶಕ ಡಾ. ಶಿವಾನಂದ ಸುರಗಾಳಿ ಅಭಿಪ್ರಾಯಪಟ್ಟರು.
ಶನಿವಾರ ಜಿಮ್ಸ್‍ನ ನರ್ಸಿಂಗ್ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನಾ ದಿನದ ಪ್ರಯುಕ್ತ ಏರ್ಪಡಿಸಲಾಗಿದ್ದ ಸ್ಪರ್ಶ ಕುಷ್ಠರೋಗ ಉಪನ್ಯಾಸ ಕಾರ್ಯಕ್ರಮ-2021 ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಕುಷ್ಠರೋಗದ ಬಗ್ಗೆ ಸಾರ್ವಜನಿಕರಲ್ಲಿ ಅನೇಕ ರೀತಿಯ ತಾರತಮ್ಯಗಳಿದ್ದು, ಅವುಗಳನ್ನು ಜನರ ಮನಸ್ಸಿನಿಂದ ಹೋಗಲಾಡಿಸಬೇಕಾಗಿದೆ. ಇತ್ತೀಚಿನ ದಿನಗಳಲ್ಲಿ ಕುಷ್ಠರೋಗಿಗಳ ಸಂಖ್ಯೆ ಇಳಿಮುಖವಾಗಿದೆ. ಇದಕ್ಕೆಲ್ಲ ಕಾರಣ ಬಹುಔಷಧಿ ಪದ್ಧತಿಯೇ ಕಾರಣ ಎಂದು ಅವರು ತಿಳಿಸಿದರು.
ಆಂದೋಲನದ ಮುಖ್ಯ ಉದ್ದೇಶ ಕುಷ್ಠರೋಗಿಗಳನ್ನು ಗುರುತಿಸಿ ಸರಿಯಾದ ಪ್ರಮಾಣದಲ್ಲಿ ಚಿಕಿತ್ಸೆ ನೀಡಿದರೆ ಅವರೂ ಸಹ ಸಮಾಜಮುಖಿ ಜೀವನಕ್ಕೆ ಹಿಂತಿರುಗಬಹುದಾಗಿದೆ. ಪೆÇೀಲಿಯೋ ಮತ್ತು ಸಿಡುಬು ಮುಕ್ತ ಮಾಡಿದಂತೆ ಕುಷ್ಠರೋಗ ಮುಕ್ತ ಜಿಲ್ಲೆಯನ್ನಾಗಿ ಮಾಡಬೇಕಾಗಿದೆ ಎಂದು ಅವರು ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಜಿಲ್ಲಾ ಅರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜಶೇಖರ ಮಾಲಿ ಅವರು ಮಾತನಾಡಿ, ಕುಷ್ಠರೋಗದ ವಿರುದ್ದ ಅಂತಿಮ ಯುದ್ಧಕ್ಕೆ ನಾವೆಲ್ಲರೂ ಸೈನಿಕರಾಗಿ ಸಜ್ಜಾಗಬೇಕು ಎಂದು ಹೇಳಿದರು.
ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಾರ್ವಜನಿಕ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಎ. ಎಸ್. ರುದ್ರವಾಡಿ ಅವರು ಮಾತನಾಡಿ, ಕುಷ್ಠರೋಗವು ಮುಟ್ಟುವುದರಿಂದ, ಮಾತನಾಡುವದರಿಂದ, ಅವರ ಜೊತೆ ಜೀವನ ಸಾಗಿಸುವುದರಿಂದ ಬರುವುದಿಲ್ಲ. ಹೀಗಾಗಿ ಅವರನ್ನು ಸಮಾಜದಿಂದ ದೂರ ಇಡಬೇಕಾಗಿಲ್ಲ, ನಮ್ಮೆಲ್ಲರಂತೆ ಜೀವನ ನಡೆಸುವ ಹಾಗೆ ಕುಷ್ಟರೋಗದ ಬಗ್ಗೆ ಜನರಲ್ಲಿ ತಿಳುವಳಿಕೆ ಮೂಡಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಮ್ಸ್‍ನ ಕುಷ್ಠರೋಗ ವಿಭಾಗದ ಹಿರಿಯ ವೈದ್ಯಾಧಿಕಾರಿ ಡಾ. ಜಯಮ್ಮ ಗಣಜಲಖೇಡ ಅವರು ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ. ಶರಣಬಸಪ್ಪಾ ಗಣಜಲಖೇಡ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ. ರಾಜಕುಮಾರ ಎ ಕುಲಕರ್ಣಿ, ಕಲಬುರಗಿ ಡಿ.ಎಲ್.ಓ ಕಚೇರಿಯ ಹಿರಿಯ ವೈದ್ಯಾಧಿಕಾರಿ ಡಾ. ವಿಜಯಲಕ್ಷ್ಮಿ ಜಿ.ಬಿ, ಜಿಲ್ಲಾ ಕುಷ್ಠರೋಗ ವಿಭಾಗದ ಹಿರಿಯ ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ನಸಿರ್ಂಗ್ ವಿದ್ಯಾರ್ಥಿಗಳು ಮತ್ತಿತರರು ಉಪಸ್ಥಿತರಿದ್ದರು.
ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನಕ್ಕೆ ಚಾಲನೆ: ಕಾರ್ಯಕ್ರಮ ಉದ್ಘಾಟನೆಗೂ ಮೊದಲು ಕುಷ್ಠರೋಗ ನಿರ್ಮೂಲನಾ ದಿನದ ಅಂಗವಾಗಿ ಜ. 30 ರಿಂದ ಫೆಬ್ರವರಿ 13 ರವರೆಗೆ ಹಮ್ಮಿಕೊಂಡಿರುವ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನಕ್ಕೆ ಜಿಮ್ಸ್ ಆಸ್ಪತ್ರೆಯ ಅವರಣದಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಸುವರ್ಣಾ ಹೆಚ್. ಮಲಾಜಿ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ನಡೆದ ಈ ಜಾಥಾವು “ಕುಷ್ಠರೋಗದ ವಿರುದ್ಧ ಅಂತಿಮ ಯುದ್ಧ” ಎಂಬ ಘೋಷಣೆಯೊಂದಿಗೆ ನಗರದ ಜಿಮ್ಸ್ ಆಸ್ಪತ್ರೆಯಿಂದ ಆರಂಭಗೊಂಡು ಎಸ್.ಟಿ.ಬಿ.ಟಿ ರಸ್ತೆ, ಜಗತ್ ವೃತ್ತ, ಸಿದ್ದಿಪಾµÀ ದರ್ಗಾದಿಂದ ಮರಳಿ ಜಿಮ್ಸ್ ನರ್ಸಿಂಗ್ ಕಾಲೇಜಿಗೆ ಹಿಂದಿರುಗಿತು.
ಈ ಸಂದರ್ಭದಲ್ಲಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿ ಡಾ. ರವೀಂದ್ರಕುಮಾರ ನಾಗಲೀಕರ ಮುಂತಾದ ಅಧಿಕಾರಿಗಳು ಹಾಜರಿದ್ದರು.
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…
ಚಿಂಚೋಳಿ: ಕಾನೂನು ತೊಡಕಿನಿಂದ ಸ್ಥಗಿತಗೊಂಡ ಸಿದ್ದಸಿರಿ ಎಥೆನಾಲ್ ಕಾರ್ಖಾನೆ ಪ್ರಾರಂಭಕ್ಕೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿ ನೀಡಬೇಕೆಂದು ಒತ್ತಾಯಿಸಿ…