ಕಲಬುರಗಿ: ಭಾರತದ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಪ್ರಾಣತೆತ್ತು ಹುತಾತ್ಮರಾದವರ ಸ್ಮರಣಾರ್ಥವಾಗಿ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವಿ.ವಿ. ಜ್ಯೋತ್ಸ್ನಾ ಅವರು ಶನಿವಾರ ಮಹಾತ್ಮಾ ಗಾಂಧೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.ಹುತಾತ್ಮರ ದಿನಾಚರಣೆ ಅಂಗವಾಗಿ ಎರಡು ನಿಮಿಷಗಳ ಕಾಲ ಮೌನಾಚರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ಮೌನಾಚರಣೆ ಆರಂಭ ಮತ್ತು ಅಂತ್ಯದಲ್ಲಿ ಸೈರನ್ ಮೊಳಗಿಸಲಾಯಿತು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಶಂಕರ ವಣಿಕ್ಯಾಳ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.