ಕಲಬುರಗಿ: ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಸ್ಥಾನಗಳನ್ನು ಭರ್ತಿ ಮಾಡಲು ಅರ್ಹ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ ಎಂದು ಕಲಬುರಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳಾದ ಮಹಿಮೂದ್ ಅವರು ತಿಳಿಸಿದ್ದಾರೆ.
ಪಿ.ಯು.ಸಿ., ತತ್ಸಮಾನ ಹಾಗೂ ಎಲ್ಲಾ ಪದವಿ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆಯಾ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರದಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಅವಶ್ಯಕ ದಾಖಲಾತಿಗಳೊಂದಿಗೆ 2021 ರ ಫೆಬ್ರವರಿ 10 ರೊಳಗಾಗಿ ಸದರಿ ಮಾಹಿತಿ ಕೇಂದ್ರಗಳಲ್ಲಿಯೇ ಅರ್ಜಿ ಸಲ್ಲಿಸಬೇಕು. ವಿದ್ಯಾರ್ಥಿಗಳು ಕೋವಿಡ್-19 ಮುಂಜಾಗ್ರತಾ ಕ್ರಮ ಕೈಗೊಂಡು ಸಾಮಾಜಿಕ ಅಂತರ ಕಾಯ್ದುಕೊಂಡು ಅರ್ಜಿ ಸಲ್ಲಿಸಬೇಕು.
ತಾಲೂಕುವಾರು ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿಯಿರುವ ಬಾಲಕರ ಹಾಗೂ ಬಾಲಕಿಯರ ಸ್ಥಾನಗಳ ವಿವರ ಹಾಗೂ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಆಳಂದ ಮೊಬೈಲ್ ಸಂಖ್ಯೆ 6362197585, ಅಫಜಲಪೂರ-7899755427, ಚಿಂಚೋಳಿ-9845848048, ಚಿತ್ತಾಪೂರ-9741168681, ಜೇವರ್ಗಿ-9535775141, ಕಲಬುರಗಿ-7899755427, ಸೇಡಂ-7892369798 ಗಳಿಗೆ ಅಥವಾ ಆಯಾ ತಾಲೂಕಿನ ತಾಲೂಕಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಿಗೆ ಸಂಪರ್ಕಿಸಲು ಕೋರಲಾಗಿದೆ.