ವಾಡಿ: ಮಕ್ಕಳನ್ನು ಶಾಸ್ವತ ಅಂಗವಿಕಲತೆಗೆ ದೂಡುವ ಪೋಲಿಯೊ ಎಂಬುದೊಂದು ಭಯಾನಕ ರೋಗ. ಲಸಿಕೆ ಹಾಕಿಸುವುದೊಂದೇ ಈ ರೋಗದಿಂದ ರಕ್ಷಣೆಯಾಗಲು ಇರುವ ಏಕೈಕ ಮಾರ್ಗ ಎಂದು ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಮೇಲ್ವಿಚಾರಕಿ ಅನಿತಾ ಮಲಗೊಂಡ ತಿಳಿಸಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ತಾಲೂಕು ಆರೋಗ್ಯ ಇಲಾಖೆಯಿಂದ ಏರ್ಪಡಿಸಲಾಗಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ಉದ್ದೇಶಿಸಿ ಅವರು ಮಾತನಾಡಿದರು. ಐದು ವರ್ಷದೊಳಗಿನ ಮಕ್ಕಳಲ್ಲಿ ಈ ರೋಗ ಹೆಚ್ಚಾಗಿ ಕಂಡು ಬರುತ್ತದೆ. ಈ ಮಹಾಮಾರಿ ರೋಗದ ವಿರುದ್ಧ ಹೋರಾಟ ಶುರುಮಾಡಿದ ಕುರಿತು ಭಾರತ ಸರಕಾರ, ೨೦೧೧ ರಿಂದ ಯಾವೂದೇ ಪೋಲಿಯೊ ಪ್ರಕರಣ ಪತ್ತೆಯಾಗದಂತೆ ಕ್ರಮಕೈಗೊಂಡಿತ್ತು. ಭಾರತ ಪೋಲಿಯೊ ಮುಕ್ತ ರಾಷ್ಟ್ರವೆಂದು ವಿಶ್ವಸಂಸ್ಥೆ ಘೋಷಣೆ ಮಾಡಿದೆ. ಪೋಷಕರು ನಿರ್ಲಕ್ಷ್ಯ ತೋರದೆ ಐದು ವರ್ಷದೊಳಗಿನ ಎಲ್ಲಾ ಮಕ್ಕಳಿಗೂ ಲಸಿಕೆ ಹಾಕಿಸಲು ಸ್ವಯಂ ಪ್ರೇರಿತವಾಗಿ ಮುಂದೆ ಬರಬೇಕು ಎಂದರು.
ರವಿವಾರ ನಿಗದಿತ ಬೂತ್ ಮಟ್ಟದಲ್ಲಿ ಲಸಿಕೆ ಹಾಕಲಾಗುತ್ತಿದ್ದು, ಸೋಮವಾರದಿಂದ ಮನೆ ಮನೆಗೆ ತೆರಳಿ ಮಕ್ಕಳಿಗೆ ಪೋಲಿಯೊ ಲಸಿಕೆ ಹಾಕಲಾಗುವುದು. ಒಟ್ಟು ೬೪೯೮ ಮಕ್ಕಳಿಗೆ ಲಸಿಕೆ ಹಾಕುವ ಗುರಿಯಿದ್ದು, ಆಶಾ ಮತ್ತು ಆರೋಗ್ಯ ಸಿಬ್ಬಂದಿಗಳು ಒಟ್ಟು ೮೪೯೩ ಮನೆಗಳಿಗೆ ಭೇಟಿ ನೀಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ವಿವರಿಸಿದರು.
ಸಮುದಾಯ ಆರೋಗ್ಯ ಕೇಂದ್ರದ ಆರೋಗ್ಯ ಮೇಲ್ವಿಚಾರಕ ಸುಭಾಷ ಚಿಂಚನಸೂರ, ಅಮೃತಾ ದುಭೆ, ಶುಶ್ರೂಷಕ ಅಧಿಕಾರಿ ರೇಣುಕಾ ಛಲವಾದಿ, ಆಶಾ ಕಾರ್ಯಕರ್ತೆ ಜಯಶ್ರೀ ಸಿಂಧೆ ಪಾಲ್ಗೊಂಡಿದ್ದರು.
ಕಲಬುರಗಿ: ಕಾಂಗ್ರೆಸ್ ಪಕ್ಷದ ಅಂಗ ಸಂಖ್ಯೆ ಸೇವಾದಳ ಯಂಗ್ ಬ್ರಿಗೇಡ್ ಸದಸ್ಯತ್ವ ಅಭಿಯಾನ ನ.20ರಿಂದ ರಾಜ್ಯವ್ಯಾಪಿ ಆರಂಭ ಮಾಡಲಾಗಿದ್ದು, ಆಸಕ್ತರು…
ಕಲಬುರಗಿ: ಜೀವನದಲ್ಲಿ ಹತ್ತನೇ ಮತ್ತು ಪಿಯುಸಿ ಬಹಳ ಮಹತ್ವದ ಘಟ್ಟಗಳು. ಇವೆರಡು ನಮ್ಮ ಭವಿಷ್ಯವನ್ನು ನಿರ್ಧರಿಸುತ್ತವೆ. ವಿದ್ಯಾರ್ಥಿಗಳು ಅಚಲವಾದ ಆತ್ಮವಿಶ್ವಾಸದಿಂದ…
ಸೇಡಂ : ತಮ್ಮ ಬೌದ್ಧಿಕ ವಿಕಾಸದಲ್ಲಿಯೇ ಮಹಿಳೆಯರ ಅಸ್ತಿತ್ವವಿದೆ ಎಂದು ಕೇಂದ್ರ ಸಾಹಿತ್ಯ ಅಕಾಡೆಮಿ ಸದಸ್ಯ ಡಾ.ಬಸವರಾಜ ಸಾದರ ಹೇಳಿದರು.…
ಕಲಬುರಗಿ: ಅಫಜಲಪುರ ತಾಲೂಕಿನ ಸೊನ್ನ ಗ್ರಾಮದ ನಿವಾಸಿ ಆನಂದಪ್ಪ ಶರಣಪ್ಪ ಉಮ್ಮನಗೋಳ್(೮೦) ಅವರು ಸೋಮವಾರ ಬೆಳಗ್ಗೆ ವಯೋಸಹಜವಾಗಿ ನಿಧನರಾದರು. ಮೃತರು…
ಕಲಬುರಗಿ: ಸಂಘಸಂಸ್ಥೆಗಳು ಸಾದಕರನ್ನು ಗುರುತಿಸಿ ಪ್ರಶಸ್ತಿ ಪುರಸ್ಕಾರಗಳನ್ನು ನೀಡುವ ಮುಖಾಂತರಾ ಅವರ ಜವಾಬ್ದಾರಿ ಹೆಚ್ಚಿಸುವುದರಜೋತೆಯಲ್ಲಿ ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವುದು ಸಮಾಜಕ್ಕೆ…
ಕಲಬುರಗಿ; ಹೈದ್ರಾಬಾದ್- ಕರ್ನಾಟಕ ಶಿಕ್ಷಣ ಸಂಸ್ಥೆಯ PDACE ಸಭಾಂಗಣದಲ್ಲಿ ನಡೆದ ಕಲ್ಯಾಣ ಕರ್ನಾಟಕ startup conclave ಇಂದು ದಕ್ಷಣ ಶಾಸಕ…