ಶಹಾಪುರ : ಐದು ವರ್ಷದೊಳಗಿನ ಪ್ರತಿಯೊಂದು ಮಗುವಿಗೆ ಪಾಲಕರು ತಪ್ಪದೇ ಪೋಲಿಯೊ ಲಸಿಕೆ ಹಾಕಿಸಬೇಕು ಎಂದು ನೂತನ ಗ್ರಾಮ ಪಂಚಾಯಿತಿ ಸದಸ್ಯರಾದ ಗುರು ಅಂಗಡಿ ಹೇಳಿದರು.
ತಾಲ್ಲೂಕಿನ ಹೊಸೂರು ಗ್ರಾಮದಲ್ಲಿ ಮಗುವಿಗೆ ಪೋಲಿಯೊ ಲಸಿಕೆ ಹಾಕಿ ಮಾತನಾಡಿ ಪೋಲಿಯೊ ಅಭಿಯಾನದ ಯಶಸ್ವಿಗೆ ಆರೋಗ್ಯ ಇಲಾಖೆ ಸರ್ವ ಸಿದ್ಧತೆ ಮಾಡಿಕೊಂಡಿದ್ದು.ನಗರ ಹಾಗೂ ಗ್ರಾಮಗಳ ಪ್ರಮುಖ ಸ್ಥಳಗಳಲ್ಲಿ ಪಂಚಾಯಿತಿ ಹಾಗೂ ಬಸ್ ನಿಲ್ದಾಣ ರೈಲ್ವೆ ನಿಲ್ದಾಣ ಇನ್ನಿತರ ಪ್ರಮುಖ ಸ್ಥಳಗಳಲ್ಲಿ ಲಸಿಕೆ ಹಾಕುವ ವ್ಯವಸ್ಥೆ ಮಾಡಲಾಗಿದೆ ಆದ್ದರಿಂದ ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು ನುಡಿದರು.
ಪ್ರತಿಯೊಂದು ಮಗು ಪೋಲಿಯೊದಿಂದ ವಂಚಿತ ಆಗಬಾರದು ಎಂಬ ಕಟ್ಟುನಿಟ್ಟಿನ ಕ್ರಮ ಈಗಾಗಲೇ ಸರ್ಕಾರ ನಿರ್ದೇಶನ ನೀಡಿದೆ. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಗೀತಾ ಚಿಂಚೋಳಿ ಶಶಿಕಲಾ ಕೊಟ್ರಮ್ಮ ಚಂದ್ರು ಕಿರಿಯ ಆರೋಗ್ಯ ಸಹಾಯಕರಾದ ಗುರುಸಂಗಪ್ಪ ಕೊಲ್ಲೂರು ಹಾಗೂ ಇತರರು ಉಪಸ್ಥಿತರಿದ್ದರು.