ಜನನಿ ಪದವಿ ಮಹಾವಿದ್ಯಾಲಯ ವತಿಯಿಂದ ಪಲ್ಸ್ ಪೋಲಿಯೊ ಅಭಿಯಾನ

0
21

ಸುರಪುರ: ನಗರದ ಜನನಿ ಮಹಿಳಾ ಕಲಾ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ಘಟಕಗಳ ವತಿಯಿಂದ ಸುರಪುರ ನಗರದ ವಾರ್ಡ್ ಸಂಖ್ಯೆ ೧೮ ರ ಬುಡಬೋಯಿಗಲ್ಲಿಯಲ್ಲಿ ಪಲ್ಸ್ ಪೋಲಿಯೋ ಕಾರ್ಯಕ್ರಮ ನಡೆಸಲಾಯಿತು.

ಮಗುವಿಗೆ ಪೋಲಿಯೊ ಹನಿ ಹಾಕುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ ಜನನಿ ಪದವಿ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಅಧಿಕಾರಿ ಡಾ.ಮಲ್ಲಿಕಾರ್ಜುನ ಕಮತಗಿ ಚಾಲನೆ ನೀಡಿ ಮಾತನಾಡಿ, ಆರೋಗ್ಯ ಪೂರ್ಣ ಸಮಾಜದ ನಿರ್ಮಾಣದಲ್ಲಿ ಸಾರ್ವಜನಿಕರ ಸಹಬಾಗಿತ್ವ ಅವಶ್ಯಕ, ಕೇಂದ್ರ ಸರಕಾರ ದೇಶದಲ್ಲಿರುವ ಅಂಗವೈಕಲ್ಯವನ್ನು ಸಂಪೂರ್ಣವಾಗಿ ಶಮನಗೊಳಿಸಿ ಆರೋಗ್ಯ ಪೂರ್ಣ ಸಮಾಜದ ನಿರ್ಮಾಣಕ್ಕಾಗಿ ದೇಶಾದ್ಯಾಂತ ಇಂದು ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಈ ಕಾರ್ಯಕ್ರಮದಲ್ಲಿ ಎಲ್ಲ ಸಾರ್ವಜನಿಕರ ಸಹಬಾಗಿತ್ವ ಅವಶ್ಯಕ ಆದ್ದರಿಂದ ಎಲ್ಲ ಪಾಲಕರು ತಮ್ಮ ಐದು ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಪೋಲಿಯೋ ಲಸಿಕೆಯನ್ನು ಹಾಕಿಸಬೇಕು ತಮ್ಮ ಮಕ್ಕಳಿಗೆ ಅಂಗವೈಕಲ್ಯ ಬರದಂತೆ ನೋಡಿಕೊಳ್ಳಬೇಕು ಎಂದು ಕರೆನೀಡಿದರು.

Contact Your\'s Advertisement; 9902492681

ಈ ಸಂದರ್ಭದಲ್ಲಿ ರಾಷ್ಟ್ರೀಯ ಸೇವಾಯೋಜನೆ ಸ್ವಯಂ ಸೇವಕರು ಮನೆ ಮನೆಗೆ ತೆರಳಿ ಐದು ವರ್ಷದೊಳಗಿನ ಮಕ್ಕಳನ್ನು ಪೋಲಿಯೋ ಬೂತ್‌ಗೆ ಕರೆತಂದು ಲಸಿಕೆ ಹಾಕಿಸಿದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here