ಸುರಪುರ: ೫ ವರ್ಷದೊಳಗಿನ ಪ್ರತಿ ಮಗುವಿಗೂ ತಪ್ಪದೆ ಪೋಲಿಯೊ ಹನಿ ಹಾಕಿಸುವ ಮೂಲಕ ಮಕ್ಕಳನ್ನು ಅನೇಕ ಮಾರಕ ರೋಗಗಳಿಂದ ರಕ್ಷಿಸಬಹುದಾಗಿದೆ,ಆದ್ದರಿಂದ ಪ್ರತಿ ಮಗುವಿಗೂ ಪೋಲಿಯೊ ಲಸಿಕೆ ಹಾಕಿಸುವಂತೆ ನಗರಸಭೆ ಅಧ್ಯಕ್ಷೆ ಸುಜಾತಾ ವಿ.ಜೇವರ್ಗಿ ತಿಳಿಸಿದರು.
ನಗರದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಹಮ್ಮಿಕೊಂಡಿದ್ದ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಲ್ಲಿ ಮಗುವೊಂದಕ್ಕೆ ಪೋಲಿಯೊ ಹನಿ ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿ,ಹನಿ ಪೋಲಿಯೊ ಮಗುವಿನ ಜೀವ ರಕ್ಷಣೆಗೆ ಸಹಕಾರಿಯಾಗಿದೆ,ಆದ್ದರಿಂದ ಎಲ್ಲರು ತಪ್ಪದೆ ಮಕ್ಕಳಿಗೆ ಪೋಲಿಯೊ ಹಾಕಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಾಲೂಕು ಆರೋಗ್ಯಾಧಿಕಾರಿ ಡಾ:ಆರ್.ವಿ.ನಾಯಕ ಮಾತನಾಡಿ,ಇಂದು ಮತ್ತು ಫೇಬ್ರವರಿ ೨ ರಂದು ಎರಡು ದಿನಗಳ ಕಾಲ ಬೆಳಿಗ್ಗೆ ೭ ರಿಂದ ಸಂಜೆ ೫ ವರೆಗೆ ತಾಲೂಕಿನಾದ್ಯಂತ ಎಲ್ಲಾ ಅಂಗನವಾಡಿ ಕೇಂದ್ರ ಬೂತ್‌ಗಳಲ್ಲಿ ಪೋಲಿಯೊ ಲಸಿಕೆ ಹಾಕಲಾಗುತ್ತದೆ.ಅಲ್ಲದೆ ಬಸ್ ನಿಲ್ದಾಣ ಮತ್ತಿತರೆ ಸ್ಥಳಗಳಲ್ಲಿಯೂ ಲಸಿಕೆ ವಿತರಣೆ ಮಾಡಲಾಗುವುದು ಎಂದರು.
ಅಲ್ಲದೆ ಸೋಮವಾರ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಮನೆಗಳಿಗೂ ಭೇಟಿ ನೀಡಿ ಮಕ್ಕಳಿಗೆ ಲಸಿಕೆ ಹಾಕಿಸುವ ಬಗ್ಗೆ ಮಾಹಿತಿ ನೀಡಲಿದ್ದಾರೆ.ಆದ್ದರಿಂದ ಎಲ್ಲಾ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೆ ಪೋಲಿಯೊ ಲಸಿಕೆಯನ್ನು ಹಾಕಿಸುವಂತೆ ಕರೆ ನೀಡಿದರು.
ಈ ಸಂದರ್ಭದಲ್ಲಿ ನಗರಸಭೆ ಉಪಾದ್ಯಕ್ಷ ಮಹೇಶ ಪಾಟೀಲ್ ಸಿಡಿಪಿಒ ಲಾಲಸಾಬ್ ವೈದ್ಯಾಧಿಕಾರಿಗಳಾದ ಡಾ: ಓಂಪ್ರಕಾಶ ಅಂಬುರೆ ಡಾ: ಹರ್ಷವರ್ಧನ ರಫಗಾರ ಸೇರಿದಂತೆ ಅನೇಕರಿದ್ದರು.