ಆಳಂದ: ಕೊರೋನಾ ಕಾರಣದಿಂದ ಕುಸಿದಿರುವ ಆರ್ಥಿಕ ವ್ಯವಸ್ಥೆಯನ್ನು ಮೇಲಕ್ಕೆ ಎತ್ತುವಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಸಹಕಾರಿಯಾಗಲಿದೆ ಎಂದು ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರದ ಬಜೆಟ್ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಕೇಂದ್ರ ಸರ್ಕಾರವು ಈ ಬಜೆಟ್‌ನಲ್ಲಿ ಹಲವಾರು ಸುಧಾರಣಾ ಕ್ರಮಗಳನ್ನು ಘೋಷಿಸಿದೆ. ಭಾರತೀಯ ರೈಲ್ವೇ ಇಲಾಖೆಗೆ ಅನುದಾನ, ಹಿರಿಯ ನಾಗರಿಕರಿಗೆ ತೆರಿಗೆ ಪಾವತಿಯಿಂದ ವಿನಾಯತಿ, ಬೆಂಗಳೂರಿನ ನಮ್ಮ ಮೆಟ್ರೊಗೆ ಅನುದಾನ, ಅಸಂಘಟಿತ ಕಾರ್ಮಿಕ ವಲಯಕ್ಕೆ ಪಿಂಚಣಿ ವ್ಯವಸ್ಥೆ, ಕೃಷಿಕರಿಗೆ ಅನುದಾನ, ಆರೋಗ್ಯ ಕ್ಷೇತ್ರಕ್ಕೆ ಅನುದಾನ, ಜಲಜೀವನ ಮಿಷನ್ ಯೋಜನೆಗೆ ಅನುದಾನ, ಭಾರತಮಾಲಾ ಯೋಜನೆಗೆ ಹಣ ಮೀಸಲು ಸೇರಿದಂತೆ ಅನೇಕ ಯೋಜನೆಗಳಿಗೆ ಹಣ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ಬಜೆಟ್‌ನಲ್ಲಿ ಎಲ್ಲ ವಲಯಗಳ ಬೆಳವಣಿಗೆಗೆ ಹಣ ಮೀಸಲಿರಿಸಲಾಗಿದೆ. ಅನೇಕ ಅಭಿವೃದ್ಧಿ ಯೋಜನೆಗಳನ್ನು ಉತ್ತೇಜಿಸಲಾಗಿದೆ. ಕಬ್ಬಿಣ, ಸ್ಟೀಲ್, ನೈಲಾನ್ ಬಟ್ಟೆಗಳು, ತಾಮ್ರದ ಸಾಮಗ್ರಿಗಳು, ವಿಮೆಗಳು, ವಿದ್ಯುತ್, ಶೂ ಸೇರಿದಂತೆ ಜನರಿಗೆ ಅವಶ್ಯಕವಿರುವ ವಸ್ತುಗಳ ಬೆಲೆ ಇಳಿಕೆಯಾಗಿದೆ ಎಂದು ಹೇಳಿದ್ದಾರೆ.