ಸಿಎಂ ಜನತಾದರ್ಶನದಲ್ಲಿ ಮನವಿ ಜೊತೆಗೆ ದಾಖಲೆ ಸಲ್ಲಿಸಿ: ಜಿಲ್ಲಾಧಿಕಾರಿ

0
70

ಯಾದಗಿರಿ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಚಂಡರಕಿಯಲ್ಲಿ ಜೂನ್ ೨೧ರಂದು ಗ್ರಾಮ ವಾಸ್ತವ್ಯದ ಅಂಗವಾಗಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ಗಂಟೆಯವರೆಗೆ ಹಮ್ಮಿಕೊಂಡಿರುವ ಜನತಾದರ್ಶನದಲ್ಲಿ ಮನವಿ ಸಲ್ಲಿಸುವ ಸಾರ್ವಜನಿಕರು ಪೂರಕ ದಾಖಲೆಗಳನ್ನು ಲಗತ್ತಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಕೂರ್ಮಾ ರಾವ್ ಅವರು ಮನವಿ ಮಾಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಜನತಾದರ್ಶನದಲ್ಲಿ ಮುಖ್ಯಮಂತ್ರಿಗಳಿಗೆ ಮನವಿಗಳನ್ನು ಸಲ್ಲಿಸಲು ಆಗಮಿಸುವ ಸಾರ್ವಜನಿಕರು ಕಡ್ಡಾಯವಾಗಿ ಮನವಿಯಲ್ಲಿ ತಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸತಕ್ಕದ್ದು. ಸರಕಾರದಿಂದ ಮನೆ, ಪಿಂಚಣಿ, ಮುಖ್ಯಮಂತ್ರಿಗಳ ಪರಿಹಾರ ಇತ್ಯಾದಿ ವೈಯಕ್ತಿಕ ಸೌಲಭ್ಯಗಳು, ಸವಲತ್ತುಗಳ ಸಲುವಾಗಿ ತಮ್ಮ ಅರ್ಜಿಯೊಂದಿಗೆ ವಿಕಲಚೇತನ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ, ವೃದ್ಧಾಪ್ಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಡಿತರ ಚೀಟಿ (ಬಿಪಿಎಲ್) ಇತ್ಯಾದಿ ಅವಶ್ಯಕ ದಾಖಲೆಗಳ ಝಿರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ನೋಂದಣಿ ಮಾಡಿಕೊಳ್ಳಬೇಕು. ಮುಖ್ಯಮಂತ್ರಿಗಳನ್ನು ಭೇಟಿ ಮಾಡುವ ಪ್ರತಿಯೊಬ್ಬರಿಗೂ ಟೋಕನ್ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.

Contact Your\'s Advertisement; 9902492681

ಮುಖ್ಯಮಂತ್ರಿಗಳು ಅಂದು ಬೆಳಿಗ್ಗೆ .೩೦ ಗಂಟೆಗೆ ಯಾದಗಿರಿಯಿಂದ ರಸ್ತೆ ಮೂಲಕ ಗುರುಮಠಕಲ್ ತಾಲ್ಲೂಕಿನ ಚಂಡರಕಿ ಗ್ರಾಮಕ್ಕೆ ಪ್ರಯಾಣ ಮಾಡುವರು. ಬೆಳಿಗ್ಗೆ ೧೦ರಿಂದ ಸಂಜೆ ಗಂಟೆಯವರೆಗೆ ಜನತಾ ದರ್ಶನ ನಡೆಸಿ, ಸಾರ್ವಜನಿಕರ ಮನವಿ ಸ್ವೀಕಾರ ಮತ್ತು ಕುಂದುಕೊರತೆಗಳನ್ನು ಆಲಿಸುವರು. ಸಂಜೆ .೩೦ರಿಂದ .೩೦ ಗಂಟೆಯವರೆಗೆ ರೈತರಿಗೆ ಮಾಹಿತಿ, ಸ್ಥಳೀಯ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಹಾಗೂ ಶಾಲಾ ಶಿಕ್ಷಕರು ಹಾಗೂ ಮಕ್ಕಳೊಂದಿಗೆ ಭೋಜನ ಮಾಡುವರು. ನಂತರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ವಾಸ್ತವ್ಯ ಮಾಡುವರು ಎಂದು ಅವರು ವಿವರಿಸಿದರು.
ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗಾಗಿ ಎಲ್ಇಡಿ ಪರದೆಯನ್ನು ಅಳವಡಿಸಲಾಗುತ್ತಿದೆ. ಕುಡಿಯುವ ನೀರು, ಲಘು ಉಪಾಹಾರ ವ್ಯವಸ್ಥೆ ಮಾಡಲಾಗುವುದು. ಗುರುಮಠಕಲ್ಚಂಡರಕಿ ಸಾರ್ವಜನಿಕರಿಗೆ ಉಚಿತವಾಗಿ ಪ್ರಯಾಣಿಸಲು ಬಸ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಮಾಧ್ಯಮ ಪ್ರತಿನಿಧಿಗಳಿಗೆ ಪಾಸ್/ಗುರುತಿನ ಚೀಟಿ ನೀಡಲಾಗುವುದು ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಕವಿತಾ ಎಸ್.ಮನ್ನಿಕೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಋಷಿಕೇಶ್ ಭಗವಾನ್ ಸೋನವಣೆ, ಅಪರ ಜಿಲ್ಲಾಧಿಕಾರಿ ಪ್ರಕಾಶ್ ಜಿ.ರಜಪೂತ, ಸಹಾಯಕ ಆಯುಕ್ತರಾದ ಶಂಕರಗೌಡ ಎಸ್.ಸೋಮನಾಳ ಅವರು ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here