ಕಲಬುರಗಿ: ಗುಲಬರ್ಗಾ ವಿಶ್ವವಿದ್ಯಾಲಯದ ನೂತನ ಕುಲಪತಿ ಗಳಾಗಿ ಸರ್ಕಾರ ಕಲ್ಯಾಣ ಕರ್ನಾಟಕದ ಸ್ಥಳೀಯವರಾದ ದಯಾನಂದ ಅಗಸರರವರನ್ನು ನೇಮಕ ಮಾಡಿರುವದು ಸ್ವಾಗತಾರ್ಹ ಕ್ರಮವಾಗಿದೆ ಎಂದು ಹೈದ್ರಾಬಾದ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಲಕ್ಷ್ಮಣ ದಸ್ತಿ ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಮಿತಿಯಿಂದ ಪತ್ರಿಕಾ ಪ್ರಕಟಣೆ ನೀಡಿ ಸುಮಾರು ದಿನಗಳಿಂದ ಈ ಭಾಗದ ಜನಮಾನಸದ ಕೂಗಿಗೆ ಪೂರಕವಾಗಿ ಕಳೆದ ವರ್ಷದಿಂದ ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿ ಸ್ಥಾನಕ್ಕೆ ಸ್ಥಳೀಯ ಅಭ್ಯರ್ಥಿಯನ್ನೆ ನೇಮಕ ಮಾಡಬೇಕೆಂದು ಅಗ್ರಹಿಸಿ ಮುಖ್ಯಮಂತ್ರಿಗಳಿಗೆ ಮತ್ತು ಉನ್ನತ ಶಿಕ್ಷಣ ಸಚಿವರಿಗೆ ಅದರಂತೆ ಕಲ್ಯಾಣ ಕರ್ನಾಟಕದ ಜನಪ್ರತಿನಿಧಿಗಳಿಗೆ ನಿರಂತರ ಮನವಿ ಮಾಡಿಕೊಂಡಿರುವದಕ್ಕೆ ಸ್ಪಂಪನೆ ಮಾಡಿ, ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿಸಿರುವದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.
ಲಕ್ಷ್ಮಣ ದಸ್ತಿ ಸಮಿತಿ ಸದಸ್ಯರ ನೇತೃತ್ವದಲ್ಲಿ ಗುಲಬರ್ಗಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ನೂತನ ಕುಲಪತಿಗಳಾಗಿ ನೇಮಕವಾದ ಪ್ರೋ.ದಯಾನಂದ ಅಗಸರರವರನ್ನು ಗೌರವ ಸನ್ಮಾನಿಸಿ ಶುಭ ಹಾರೈಸಿ, ವಿಶ್ವವಿದ್ಯಾಲಯದ ಸಮಗ್ರ ಅಭಿವೃದ್ಧಿಗೆ ನೂತನ ಕುಲಪತಿಗಳು ತಮ್ಮ ಬದ್ಧತೆಯನ್ನು ಪ್ರದರ್ಶಿಸಲು ಮನವಿ ಮಾಡಿದರು. ಈ ಕುರಿತು ಪ್ರತಿಕ್ರಿಯಿಸಿದ ನೂತನ ಕುಲಪತಿ ದಯಾನಂದ ಅಸಗರ ಸರ್ಕಾರ ತಮಗೆ ವಹಿಸಿರುವ ಈ ಗುರುತರ ಜವಾಬ್ದಾರಿಯಗೆ ತಕ್ಕಂತೆ ಎಲ್ಲರ ಸಹಕಾರದೊಂದಿಗೆ ವಿಶ್ವವಿದ್ಯಾಲಯದ ರಚನಾತ್ಮಕ ಪ್ರಗತಿಗೆ ಶ್ರಮಿಸುವದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ಮನೀಷ ಜಾಜು, ಲಿಂಗರಾಜ ಸಿರಗಾಪೂರ, ಅಬ್ದುಲ ರಹೀಮ,ಮಹ್ಮದ್ ಮೀರಾಜೂದ್ದಿನ, ಮಲ್ಲಿನಾಥ ಸಂಗಶೆಟ್ಟಿ, ವೀರೇಶ ಪುರಾಣಿಕ, ಶಿವಲಿಂಗಪ್ಪ ಭಂಡಕ,ಮುತ್ತಣ್ಣ ನಾಡಗೇರಿ, ಅಸ್ಲಮ ಚೌಂಗೆ ಸೇರಿದಂತೆ ಮುಂತಾದವರು ನಿಯೋಗದಲ್ಲಿದ್ದರು.
ಕಲಬುರಗಿ: ಮಹಿಳೆಯರ ಸಹಭಾಗಿತ್ವ ಮತ್ತು ಕೊಡುಗೆಯಿಲ್ಲದೆ ದೇಶದ ಸರ್ವಾಂಗೀಣ ಅಭಿವೃದ್ಧಿ ಅಸಾಧ್ಯ ಎಂದು ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಧ್ಯಕ್ಷೆ ಮಾತೋಶ್ರೀ…
ಕಲಬುರಗಿ: ಕಲಬುರಗಿ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಅವರು ಶನಿವಾರ ಸಂಜೆ ಕ್ಷೇತ್ರದ ಭೀಮಳ್ಳಿ ಗ್ರಾಮದ ರೈತರ ಹೊಲಗಳಿಗೆ…
ಕಲಬುರಗಿ: ಕಷ್ಟಗಳು ಬಂದಾಗ ಕುಗ್ಗದೆ, ಆ ಕಷ್ಟಗಳನ್ನು ಸವಾಲಾಗಿ ಸ್ವೀಕರಿಸಿ ಮೇಲೇಳಬೇಕು ಎಂದು ತಾಜ್ ನಗರದ ಆರೋಗ್ಯ ಕೇಂದ್ರದ ಹಿರಿಯ…
ಪರೋಪಕಾರ ಸೇವೆಯಿಂದ ಆತ್ಮತೃಪ್ತಿ: ಹಿರೇಮಠ ಕಲಬುರಗಿ: ನಗರ ಹೊರವಲಯದ ಸೈಯದ್ ಚಿಂಚೋಳಿ ರಸ್ತೆಯ ಬಳಿ ಇರುವ ಕೆವಿಪಿ ದಣ್ಣೂರ ಪಿಯು…
ವಾಡಿ (ಕಲಬುರಗಿ): ಪುರಸಭೆ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸೂರ್ಯಕಾಂತ ರದ್ದೇವಾಡಿ ಅವರು ಶುಕ್ರವಾರ…
ಕಲಬುರಗಿ: ಸಂಡೂರ, ಶಿಗ್ಗಾವಿ ಹಾಗೂ ಚನ್ನಪಟ್ಟಣ ಸೇರಿದಂತೆ ಮೂರು ವಿಧಾಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಭರ್ಜರಿ…