ಶೃಂಗೇರಿ: ಬಾಲಕಿಯ ಅತ್ಯಾಚಾರ; ಸೂಕ್ತ ತನಿಖೆಗೆ ಕ್ಯಾಂಪಸ್ ಫ್ರಂಟ್ ಆಗ್ರಹ

0
93

ಚಿಕ್ಕಮಗಳೂರು: ಶೃಂಗೇರಿಯಲ್ಲಿ ಅಪ್ರಾಪ್ತ ವಯಸ್ಕ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವು ನಾಗರಿಕ ಸಮಾಜವನ್ನು ತಲೆ ತಗ್ಗಿಸುವಂತೆ ಮಾಡಿದೆ ಅಲ್ಲದೇ ಈ ಘಟನೆಯನ್ನು ಕ್ಯಾಂಪಸ್ ಫ್ರಂಟ್ ಚಿಕ್ಕಮಗಳೂರು ಜಿಲ್ಲಾ ಸಮಿತಿ ತೀವ್ರವಾಗಿ ಖಂಡಿಸಿದೆ

ಶೃಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ 17 ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ ಕೇವಲ 7 ಮಂದಿಯ ಬಂಧನ ಮಾತ್ರವಾಗಿದೆ,ಉಳಿದ ಆರೋಪಿಗಳ ಪತ್ತೆಗೆ ಪೋಲಿಸರು ಯಾಕೆ? ಮೀನಾಮೇಷ ಎಣಿಸುತ್ತಿದ್ದಾರೆ ಎಂದು ಕ್ಯಾಂಪಸ್ ಫ್ರಂಟ್ ಪ್ರಶ್ನಿಸಿದೆ.

Contact Your\'s Advertisement; 9902492681

ಇದು ಉತ್ತರ ಪ್ರದೇಶದ ಮಾದರಿಯಲ್ಲಿ ನಡೆದ ಘಟನೆ ಎಂದು ಕ್ಯಾಂಪಸ್ ಫ್ರಂಟ್ ಅಭಿಪ್ರಾಯಿಸಿದೆ‌. ಘಟನೆಯ ಪ್ರಮುಖ ಆರೋಪಿಗಳೆಲ್ಲರೂ ಸಂಘಪರಿವಾರದಲ್ಲಿ ಗುರುತಿಸಿದ್ದು, ಅವರ ಸಂಸ್ಕೃತಿಯನ್ನು ಅನಾವರಣಗೊಳಿಸಿದ್ದಾರೆ. ಮಾತೆತಿತ್ತದರೆ ಹಿಂದು ಹೆಣ್ಣುಮಕ್ಕಳ ರಕ್ಷಣೆಯ ಬಗ್ಗೆ ಮಾತನಾಡುವ ಸಂಘಪರಿವಾದ ನಾಯಕರು ಮತ್ತು ಚಿಕ್ಕಮಗಳೂರಿನ ಸಂಸದೆ ಶೋಭಾ, ಶಾಸಕರ ಸಿಟಿ ರವಿ ಅವರು ಈ ಪ್ರಕರಣದ ವಿರುದ್ಧ ಕಿಂಚಿತ್ತೂ ಪ್ರತಿಕ್ರಿಯಿಸದೇ ಇರುವುದು ವಿಪರ್ಯಾಸ ಎಂದು ಕ್ಯಾಂಪಸ್ ಫ್ರಂಟ್ ಆರೋಪಿಸಿದೆ‌.

ಪ್ರಕರಣದ ಗಾಂಭೀರ್ಯತೆಯನ್ನು ಅರಿತು ಇನ್ನುಳಿದ ಪ್ರಮುಖ ಆರೋಪಿಗಳನ್ನು ಪತ್ತೆಹಚ್ಚಿ ಕಾನೂನಿನ ಮುಂದೆ ಒಪ್ಪಿಸಬೇಕು. ಅಲ್ಲದೇ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ಪರಿಹಾರ ಮತ್ತು ಭದ್ರತೆಯನ್ನು ಒದಗಿಸಬೇಕೆಂದು ಕ್ಯಾಂಪಸ್ ಫ್ರಂಟ್ ಪೋಲಿಸ್ ಇಲಾಖೆಯೊಂದಿಗೆ ಒತ್ತಾಯಿಸಿ ಜಿಲ್ಲಾ ಸಹಾಯಕ ಅಧೀಕ್ಷಕರಿಗೆ ಮನವಿ ಮಾಡಿದೆ.

ನಿಯೋಗದಲ್ಲಿ ಜಿಲ್ಲಾಧ್ಯಕ್ಷ ಸವೂದ್ ಆಲಮ್, ಕಾರ್ಯದರ್ಶಿ ರಸೂಲ್,ಉಪಾಧ್ಯಕ್ಷ ಹಷಾಮ್, ಕೋಶಾಧಿಕಾರಿ ಫರ್ಹಾನ್, ಸದಸ್ಯರಾದ ಮಕ್ಸೂದ್ ಉಪಸ್ಥಿತರಿದ್ದರು.

ಪ್ರತ್ಯುತ್ತರ ಬಿಟ್ಟು

Please enter your comment!
Please enter your name here